ರಾಜ್ಯದಲ್ಲಿ 400 ಪಶು ವೈದ್ಯಾಧಿಕಾರಿಗಳ ನೇಮಕಕ್ಕೆ ಚಾಲನೆ
Team Udayavani, Feb 14, 2023, 7:00 AM IST
ವಿಧಾನಸಭೆ: ರಾಜ್ಯದಲ್ಲಿ 400 ಪಶು ವೈದ್ಯಾಧಿಕಾರಿಗಳ ನೇಮಕ ಪ್ರಕ್ರಿಯೆ ಆರಂಭಿಸಲಾಗಿದೆ. ಆದರೆ, ಇಬ್ಬರು ಕೋರ್ಟ್ ಮೆಟ್ಟಿಲೇರಿರುವುದರಿಂದ ಹಿನ್ನಡೆಯಾಗಿದೆ. ಆದಷ್ಟು ಬೇಗ ನೇಮಕಾತಿ ಪೂರ್ಣಗೊಳಿಸುತ್ತೇವೆ ಎಂದು ಪಶುಸಂಗೋಪನಾ ಸಚಿವ ಪ್ರಭು ಬಿ.ಚೌವ್ಹಾಣ್ ವಿಧಾನಸಭೆಯಲ್ಲಿ ತಿಳಿಸಿದರು.
ಪ್ರಶ್ನೋತ್ತರ ಕಲಾಪದಲ್ಲಿ ಶಾಸಕ ಮಹಾಂತೇಶ ಬಸವಂತರಾಯ ದೊಡ್ಡಗೌಡರ ಪ್ರಶ್ನೆಗೆ ಉತ್ತರಿಸಿದ ಅವರು, 2022-23ನೇ ಸಾಲಿನ ಆಯವ್ಯಯದಲ್ಲಿ ರಾಜ್ಯದಲ್ಲಿ ಹೊಸದಾಗಿ 100 ಪಶು ಚಿಕಿತ್ಸಾ ಕೇಂದ್ರಗಳನ್ನು ಹಂತಹಂತವಾಗಿ ಘೋಷಿಸಲಾಗಿದೆ. ಅದರಂತೆ ಅವಶ್ಯಕತೆಗೆ ಅನುಗುಣವಾಗಿ ಮೊದಲ ಹಂತದಲ್ಲಿ 20 ಪಶು ಚಿಕಿತ್ಸಾಲಯ ಪ್ರಾರಂಭಿಸಲು ಆದೇಶ ಹೊರಡಿಸಲಾಗಿದೆ. 30 ಪಶು ಚಿಕಿತ್ಸಾಲಯ ಪ್ರಾರಂಭಿಸಲು ಪ್ರಸ್ತಾವನೆ ಆರ್ಥಿಕ ಇಲಾಖೆ ಪರಿಶೀಲನೆಯಲ್ಲಿದೆ. ಆರ್ಥಿಕ ಇಲಾಖೆ ಅನುಮತಿ ದೊರೆತ ಕೂಡಲೇ ಅಗತ್ಯವಿರುವ ಕಡೆ ಕೇಂದ್ರ ಆರಂಭಿಸುತ್ತೇವೆ ಎಂದು ವಿವರಿಸಿದರು.
ಈ ವೇಳೆ ಮಧ್ಯ ಪ್ರವೇಶಿಸಿದ ಹನೂರು ಶಾಸಕ ನರೇಂದ್ರ, ನೀವು ಹೊಸ ಪಶು ಚಿಕಿತ್ಸಾ ಕೇಂದ್ರ ತೆರೆಯುತ್ತಾ ಹೋದರೆ ಸಾಲದು. ಪಶು ಚಿಕಿತ್ಸಕರನ್ನು ನೇಮಿಸಬೇಕು. ಇತ್ತೀಚೆಗೆ ಚರ್ಮಗಂಟು ರೋಗ ಬಂದಾಗ ನಮ್ಮ ಕ್ಷೇತ್ರದಲ್ಲಿ ಒಂಬತ್ತು ಪಶು ಚಿಕಿತ್ಸಾ ಕೇಂದ್ರದಲ್ಲಿ ಒಬ್ಬರೇ ವೈದ್ಯರಿದ್ದರು ಎಂದು ಟೀಕಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.