ಗೋಹತ್ಯೆ ನಿಷೇಧ ವಿಧೇಯಕ ವಿರೋಧಿಸುವ ದೇವೇಗೌಡರ ಹೇಳಿಕೆ ವಿಷಾದನೀಯ: ಪ್ರಭು ಚವ್ಹಾಣ್

Team Udayavani, Dec 16, 2020, 1:24 PM IST

ಗೋಹತ್ಯೆ ನಿಷೇಧ ವಿಧೇಯಕ ವಿರೋಧಿಸುವ ದೇವೇಗೌಡರ ಹೇಳಿಕೆ ವಿಷಾದನೀಯ: ಪ್ರಭು ಚವ್ಹಾಣ್

ಬೆಂಗಳೂರು: ಗೋಹತ್ಯೆ ನಿಷೇಧ ಮಸೂದೆ ಯಾವುದೇ ಒಂದು ಸಮುದಾಯವನ್ನು ಇಟ್ಟುಕೊಂಡು ರೂಪಿಸಿದ್ದಲ್ಲ, ಈ ಮಸೂದೆಯಿಂದ ದೇಶಿ ಗೋವು ತಳಿಗಳ ವೃದ್ಧಿ ಮತ್ತು ಸಂವರ್ಧನೆಗೆ ಹೆಚ್ಚು ಅವಕಾಶ ಕಲ್ಪಿಸಲಿದೆ ಎಂದು ಪಶುಸಂಗೋಪನೆ ಸಚಿವ ಪ್ರಭು ಚವ್ಹಾಣ್ ಹೇಳಿದ್ದಾರೆ.

ಗೋಹತ್ಯೆ ನಿಷೇಧ ವಿಧೇಯಕದಿಂದ ಸಮಾಜದಲ್ಲಿ ಅಶಾಂತಿ ಮತ್ತು ಜನರ ಬಾಳನ್ನು ಅಲ್ಲೋಲ ಕಲ್ಲೋಲ ಆಗುತ್ತದೆ ಎಂಬ ಮಾಜಿ ಪ್ರಧಾನಿ ದೇವೆಗೌಡರ ಹೇಳಿಕೆಗೆ ಸ್ಪಷ್ಟನೆ ನೀಡಿದರು.

ದೇವೇಗೌಡ ಅವರ ಹೇಳಿಕೆ ವಿಷಾದನೀಯ, ಗೋವು ರೈತನೊಂದಿಗೆ ಇದ್ದಷ್ಟು ಅವಧಿ ಅವನ ಆದಾಯದಲ್ಲಿ ವೃದ್ಧಿ ಆಗುತ್ತದೆ ವಿನಃ ನಷ್ಟ ಆಗುವುದಿಲ್ಲ. ಈ ಮಸೂದೆಯಿಂದ ರೈತರ ಗೋವುಗಳ ಕಳ್ಳ ಸಾಗಣೆಗೆ ಕಡಿವಾಣ ಬಿಳುವುದರಿಂದ ರೈತ ನಿಶ್ಚಿಂತೆಯಿಂದ ಪಶುಸಂಗೋಪನಾ ಚಟುವಟಿಕೆಗಳಲ್ಲಿ ತೊಡಗಿಸಿಕೊಳ್ಳಬಹುದಾಗಿದೆ. ಮುಂಬರುವ ದಿನಗಳಲ್ಲಿ ಉತ್ತರಪ್ರದೇಶ ಮಾದರಿಯಲ್ಲಿ ಗೋವುಗಳ ನಿರ್ವಹಣೆಗೆ ಹೆಚ್ಚು ಒತ್ತು ನೀಡಲಾಗುತ್ತದೆ. ಗೋವು ಕೇವಲ ನಮ್ಮ ಸಂಸ್ಕೃತಿಯ ಒಂದು ಭಾಗವಲ್ಲ ರೈತನ ಜೀವನಾಧಾರ ಹೀಗಾಗಿ ಈ ಮಸೂದೆಯಿಂದ ರೈತರಿಗೆ ಅನುಕೂಲ ಆಗಲಿದೆ ಎಂದರು.

ಇದನ್ನೂ ಓದಿ:ಸಾವಿರಾರು ಹಾವುಗಳನ್ನು ರಕ್ಷಿಸಿದ ಸ್ನೇಕ್ ಡ್ಯಾನಿಯಲ್‌ ನಾಗರ ಹಾವು ಕಚ್ಚಿ ಸಾವು

ಮಹಾತ್ಮಾ ಗಾಂಧಿಯವರು ಸಹ ಗೋವುಗಳ ಸಂರಕ್ಷಣೆ ಬಗ್ಗೆ ಹೇಳಿದ್ದರು. ”ಗೋ ವಧೆಯನ್ನು ಬರಿಯ ಕಾನೂನಿನ ಮೂಲಕ ತಡೆಯಲು ಸಾಧ್ಯವಿಲ್ಲ. ಇದಕ್ಕೆ ತಿಳಿವಳಿಕೆ, ಶಿಕ್ಷಣ, ಕರುಣೆ, ಸಹಾನುಭೂತಿಯೂ ಅಗತ್ಯ,” ಎಂದು ಹೇಳಿದ್ದರು. ಭಾರತೀಯ ಸಂವಿಧಾನದಲ್ಲೂ ರಾಜ್ಯ ಸರಕಾರಗಳನ್ನು, ಗೋವು ಹಾಗೂ ಗೋವುಗಳ ನಾನಾ ತಳಿಗಳನ್ನು ಸಂರಕ್ಷಿಸಲು ಹಾಗೂ ವರ್ಧಿಸಲು ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ತಿಳಿಸಲಾಗಿದೆ. ಹೀಗಿದ್ದಾಗ ಗೋವುಗಳ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿ ಆಗಬೇಕು ಎಂದು ಸಚಿವ ಪ್ರಭು ಚವ್ಹಾಣ್ ಅಭಿಪ್ರಾಯಪಟ್ಟಿದ್ದಾರೆ.

ಬಿಜೆಪಿ ಸರ್ಕಾರದ ಅವಧಿಯಲ್ಲಿ 2010 ರಲ್ಲಿ ಗೋಹತ್ಯೆ ನಿಷೇಧ ಮಸೂದೆ ಮಂಡನೆ ಮಾಡಿದಾಗ ಕೇಂದ್ರ ಸರ್ಕಾರಕ್ಕೆ ಇದ್ದ ಆಕ್ಷೇಪಣೆಗಳನ್ನು ಈಗಿನ ಮಸೂದೆಯಲ್ಲಿ ಸರಿಪಡಿಸಲಾಗಿದೆ. ಹಳೆಯ ಮಸೂದೆಯಲ್ಲಿ ಎಮ್ಮೆ /ಕೋಣಗಳ ಹತ್ಯೆಗೂ ನಿಷೇಧವಿತ್ತು. ಆದರೆ 2020ರ ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕದಲ್ಲಿ 13 ವರ್ಷಕ್ಕಿಂತ ಮೀರಿದ ಎಮ್ಮೆ/ಕೋಣಗಳನ್ನು ಕೈಬಿಡಲಾಗಿದೆ.  ವರ್ಷದಿಂದ ವರ್ಷಕ್ಕೆ ಗೋವುಗಳ ಸಂತತಿ ಕಡಿಮೆ ಆಗುತ್ತಿರುವುದು ಅತ್ಯಂತ ಕಳವಳಕಾರಿ ಸಂಗತಿ ಆಗಿದ್ದು ಈ ಮೂಸುದೆ ಅವುಗಳ ಸಂತತಿ ವೃದ್ಧಿಗೂ ಅವಕಾಶ ಕಲ್ಪಿಸಿಕೊಡಲಿದೆ. 19 ನೇ ಜಾನುವಾರು ಗಣತಿ ಪ್ರಕಾರ ರಾಜ್ಯದಲ್ಲಿ ಒಟ್ಟು ಗೋವು ಮತ್ತು ಎಮ್ಮೆಗಳ ಸಂಖ್ಯೆ 1,29 ಕೋಟಿ ಇತ್ತು ಆದರೆ 20ನೇ ಜಾನುವಾರುಗಳ ಗಣತಿ ಪ್ರಕಾರ 1.14 ಕೋಟಿಗೆ ಇಳಿಗೆ ಆಗಿದೆ. ಈ ಎಲ್ಲ ಅಂಶಗಳನ್ನು ಪರಿಗಣಿಸಿದಾಗ ಮಸೂದೆ ಗೋವುಗಳ ಸಂರಕ್ಷಣೆ ಮತ್ತು ಸಂವರ್ಧನೆಗೆ ಅನುಕೂಲ ಆಗಲಿದೆ ಎಂದು ಮಾಹಿತಿ ನೀಡಿದ್ದಾರೆ

ಟಾಪ್ ನ್ಯೂಸ್

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Daily Horoscope: ಅಪಾತ್ರರಿಗೆ ಸಲಹೆ ನೀಡಿ ಅವಮಾನ ಹೊಂದದಿರಿ, ಭವಿಷ್ಯದ ಕುರಿತು ಚಿಂತನೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

THAAD System: ಹೌತಿ ದಾಳಿ ತಡೆಗೆ ಇಸ್ರೇಲ್‌ನಿಂದ “ಥಾಡ್‌’ ವ್ಯವಸ್ಥೆ ಬಳಕೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

KRS (2)

KRS ಈಗಲೂ ಭರ್ತಿ: 30 ವರ್ಷಗಳ ದಾಖಲೆ

1somanna

ರೈಲ್ವೇ, ಜಲಶಕ್ತಿ ಇಲಾಖೆ; ಶೀಘ್ರ 60,000 ಉದ್ಯೋಗ ನೇಮಕ: ಸೋಮಣ್ಣ

bjp-congress

Contractor ಆತ್ಮಹ*ತ್ಯೆ: ರಾಜಕೀಯ ಜಟಾಪಟಿ

gold

D.K.Suresh ಹೆಸರಲ್ಲಿ 14 ಕೆಜಿ ಚಿನ್ನ ವಂಚನೆ

1-hhh-shi

Havyaka Sammelana; ಅಡಿಕೆ ಬೆಳೆಗಾರರ ಹಿತ ಕಾಯಲು ಕೇಂದ್ರ ಬದ್ಧ: ಶೋಭಾ ಕರಂದ್ಲಾಜೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

World Rapid Chess Championship: ವಿಶ್ವ ರ‍್ಯಾಪಿಡ್ ಚೆಸ್‌.. ಅರ್ಜುನ್‌ ಜಂಟಿ ಅಗ್ರಸ್ಥಾನ

3-plane-crash

Plane Crash: ದಕ್ಷಿಣ ಕೊರಿಯಾದಲ್ಲಿ ವಿಮಾನ ಪತನ; 28 ಮಂದಿ ಮೃತ್ಯು, ಇಬ್ಬರು ಗಂಭೀರ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

PKL Season 11: ಇಂದು ಪ್ರೊ ಕಬಡ್ಡಿ ಫೈನಲ್‌… ಹರಿಯಾಣ – ಪಾಟ್ನಾ ಹಣಾಹಣಿ

2-bbk11

BBK11: 13ನೇ ವಾರದಲ್ಲಿ ವೀಕ್ಷಕರ ಗಮನ ಸೆಳೆದಿದ್ದ ಖ್ಯಾತ ಸ್ಪರ್ಧಿಯೇ ಎಲಿಮಿನೇಟ್

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

RBI: ಯುಪಿಐ ಮೂಲಕ ಡಿಜಿಟಲ್‌ ವ್ಯಾಲೆಟ್‌ ಹಣ ಬಳಕೆಗೆ ಅಸ್ತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.