ಮೂರು ಸಾವಿರ ಭೂ ಮಾಪಕರ ನೇಮಕ: ಸಚಿವ ಆರ್.ಅಶೋಕ್
Team Udayavani, Mar 22, 2022, 6:40 AM IST
ವಿಧಾನಸಭೆ: ರಾಜ್ಯದಲ್ಲಿ ಭೂ ಸರ್ವೆ ಗಾಗಿ ಸಲ್ಲಿಸಿರುವ ಅರ್ಜಿಗಳ ತ್ವರಿತ ವಿಲೇವಾರಿಗೆ ಕ್ರಮ ಕೈಗೊಳ್ಳಲಾಗಿದ್ದು, ಮೂರು ಸಾವಿರ ಭೂಮಾಪಕರ ನೇಮಕ ಪ್ರಕ್ರಿಯೆ ಶುರುವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ತಿಳಿಸಿದರು.
ಪ್ರಶ್ನೋತ್ತರ ವೇಳೆ ಕಾಂಗ್ರೆಸ್‌ನ ಡಾ.ಯತೀಂದ್ರ ಅವರ ಪ್ರಸ್ತಾಪಕ್ಕೆ ಉತ್ತರಿಸಿದ ಅವರು, ಮೂರು ಸಾವಿರ ಭೂ ಮಾಪಕರ ನೇಮಕದ ನಂತರ ಹಲವು ವರ್ಷಗಳಿಂದ ಬಾಕಿ ಉಳಿದಿರುವ ಜಮೀನುಗಳ ಸರ್ವೇ ಕಾರ್ಯ ತ್ವರಿತವಾಗಿ ನಡಸಲು ಅನುಕೂಲವಾಗಲಿದೆ ಎಂದು ಹೇಳಿದರು.
ರಾಜ್ಯದಲ್ಲಿ ಪ್ರಸ್ತುತ 4020 ಭೂ ಮಾಪಕರಿದ್ದು, ಈ ಪೈಕಿ 3379 ಭೂಮಾಪಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರ ಇತ್ತೀಚೆಗೆ 2685 ಲೈಸನ್ಸ್ ಪಡೆದ ಭೂ ಮಾಪಕರನ್ನು ನೇಮಿಸಿಕೊಂಡು ಸರ್ವೇ ಕಾರ್ಯಕ್ಕೆ ನಿಯೋಜಿಸಿದೆ ಎಂದು ತಿಳಿಸಿದರು.
ಭೂ ಮಾಪಕರ ಕೊರತೆಯಿಂದ ಸುಮಾರು ಎರಡು ಲಕ್ಷಕ್ಕೂ ಹೆಚ್ಚು ಅರ್ಜಿಗಳು ಬಾಕಿ ಇದ್ದು, ಆರು ತಿಂಗಳಲ್ಲಿ ಸರ್ವೇ ಪ್ರಕ್ರಿಯೆ ಮುಗಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.
ಇದನ್ನೂ ಓದಿ:ಉಕ್ರೇನ್‌ನಿಂದ ಭಾರತಕ್ಕೆ ವಾಪಸು ಮರಳಿದವರ ಬಗ್ಗೆ ಕ್ರಮ: ಭರವಸೆ
ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ಯತೀಂದ್ರ, ಕುಮಾರ್ ಬಂಗಾರಪ್ಪ ಎಲ್ಲ ಕಡೆ ಭೂಮಾಪಕರ ಸಮಸ್ಯೆ ಇದೆ. ಇರುವ ಒಬ್ಬರಿಂದ ಏನೂ ಮಾಡಲು ಸಾಧ್ಯವಿಲ್ಲ. ಲೈಸನ್ಸ್ ಪಡೆದವರು ಎಲ್ಲವನ್ನೂ ಮಾಡಲಾಗದು. ಅವರಿಗೆ ಇತಿಮಿತಿ ಇರುವುದರಿಂದ ಭೂ ವ್ಯಾಜ್ಯಗಳ ಸಂಖ್ಯೆ ಹೆಚ್ಚುತ್ತಿದೆ. ಹಾಗಾಗಿ ಏನಾದರೊಂದು ಪರಿಹಾರ ಹುಡುಕಿ ಎಂದು ಸಲಹೆ ಮಾಡಿದರು.
ಅದಕ್ಕೆ ಉತ್ತರಿಸಿದ ಸಚಿವ ಅಶೋಕ್, ಪರವಾನಗಿ ಹೊಂದಿದ ಭೂ ಮಾಪಕರಿಗೂ ಹಲವು ಅಧಿಕಾರ ಕೊಡಲಾಗಿದೆ. ಇಲಾಖೆಯಲ್ಲಿ ಹಲವು ಬದಲಾವಣೆ ತರಲು ತೀರ್ಮಾನಿಸಿದ್ದು, ಹೊಸ
ಸಾಫ್ಟ್ ವೇರ್ ಪರಿಚಯಿಸಲಾಗುವುದು ಎಂದು ಭರವಸೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
JDS ರಾಮನಗರದಿಂದಲೂ ಔಟ್: ‘ಮೈತ್ರಿ’ಗೂ ಲಾಭ ತಂದು ಕೊಡದ ದಳ
Vikram Gowda Case: ವಿಕ್ರಂ ಗೌಡ ಎನ್‌ಕೌಂಟರ್; ತನಿಖೆ ಚುರುಕು
Karnataka Congress; ‘ಭ್ರಷ್ಟ’ಆರೋಪ ಮಧ್ಯೆ ವಿಪಕ್ಷಗಳಿಗೆ ಮರ್ಮಾಘಾತ
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.