ಸಾಮಾಜಿಕ ಭದ್ರತಾ ಪಿಂಚಣಿಗಳು 72 ಗಂಟೆಗಳಲ್ಲಿ ಫಲಾನುಭವಿಗಳ ಮನೆ ಬಾಗಿಲಿಗೆ
ಸರ್ಕಾರದಿಂದ ಹೊಸ ಯೋಜನೆ; "ಹಲೋ ಕಂದಾಯ ಸಚಿವರೇ' ಸಹಾಯವಾಣಿ
Team Udayavani, Mar 31, 2022, 6:55 AM IST
ವಿಧಾನಪರಿಷತ್ತು: ಗ್ರಾಮೀಣ ಭಾಗದ ಜನರು ಅವರಿದ್ದ ಕಡೆ ಹೋಗಿ ಅವರ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ದೊರಕಿಸಿಕೊಡಲು, ಗ್ರಾಮ ವಾಸ್ತವ್ಯ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ, ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಗಳ ಜಾರಿ ಬಳಿಕ ಇದೀಗ ಸಾಮಾಜಿಕ ಭದ್ರತಾ ಪಿಂಚಣಿಗಳನ್ನು 72 ಗಂಟೆಗಳಲ್ಲಿ ಫಲಾನುಭವಿಗಳ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯನ್ನು ಜಾರಿಗೆ ತರಲು ಸರ್ಕಾರ ಮುಂದಾಗಿದೆ.
ಪ್ರಶ್ನೋತ್ತರ ಅವಧಿಯಲ್ಲಿ ಬಿಜೆಪಿ ಸದಸ್ಯ ಮುನಿರಾಜುಗೌಡ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಆರ್. ಅಶೋಕ್, ಈ ಹೊಸ ಯೋಜನೆಯ ಬಗ್ಗೆ ಪ್ರಕಟಿಸಿದರು.
“ಹಲೋ ಕಂದಾಯ ಸಚಿವರೇ’ ಎಂದು ಸಹಾಯವಾಣಿಗೆ ಕರೆ ಮಾಡಿದರೆ ವೃದ್ಧಾಪ್ಯ ವೇತನ, ವಿಧವಾ ವೇತನ, ಅಂಗವಿಕಲರ ಮಾಸಾಶನ ಸೇರಿದಂತೆ ವಿವಿಧ ಸಾಮಾಜಿಕ ಭದ್ರತಾ ಯೋಜನೆಯಡಿಯ ಪಿಂಚಣಿಗಳನ್ನು ಅರ್ಹ ಫಲಾನುಭವಿಗಳಿಗೆ 72 ಗಂಟೆಗಳಲ್ಲಿ ಅವರ ಮನೆ ಬಾಗಿಲಿಗೆ ತಲುಪಿಸಲಾಗುವುದು.ಇದಕ್ಕಾಗಿ ಹೊಸ ಸಾಫ್ಟ್ವೇರ್ ತಯಾರಿಸಲಾಗುತ್ತಿದೆ. ಕರ್ನಾಟಕದಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.
ಗ್ರಾಮ ವಾಸ್ತವ್ಯ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ, ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಕಾರ್ಯಕ್ರಮಗಳ ಅನುಭವದ ಆಧಾರದಲ್ಲಿ ಈ ಹೊಸ ಯೋಜನೆ ಜಾರಿಗೆ ತರಲು ನಿರ್ಧರಿಸಲಾಗಿದೆ. ಮೊದಲು ವೃದ್ಧಾಪ್ಯ ವೇತನ, ವಿಧವಾ ವೇತನ ಮತ್ತಿತರ ಪಿಂಚಣಿಗಳಿಗೆ ಅರ್ಜಿ ಸಲ್ಲಿಸಿ ಅರ್ಹತೆ ಪಡೆದುಕೊಳ್ಳಬೇಕಾದರೆ ಆರೇಳು ತಿಂಗಳು ಸಮಯ ಹಿಡಿಯುತ್ತಿತ್ತು. ವಯಸ್ಸು, ಆದಾಯ ಮತ್ತಿತರ ದಾಖಲೆಗಳು ಕಂದಾಯ ಇಲಾಖೆ ಬಳಿ ಇರುತ್ತವೆ. ಆಧಾರ್ ಸಂಖ್ಯೆ, ಬಿಪಿಲ್ ಕಾರ್ಡ್ ಬಳಸಿಕೊಂಡು ಅರ್ಹ ಫಲಾನುಭವಿಗಳನ್ನು ಪರಿಶೀಲಿಸಿ 72 ಗಂಟೆಗಳಲ್ಲಿ ಅವರ ಮನೆ ಬಾಗಿಲಿಗೆ ಪಿಂಚಣಿ ತಲುಪಿಸಲಾಗುವುದು ಎಂದು ಆರ್. ಅಶೋಕ್ ವಿವರಿಸಿದರು.
ಇದನ್ನೂ ಓದಿ:ರಿಕ್ಷಾದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ : ಸೊತ್ತು ಸಮೇತ ಆರೋಪಿಯ ಬಂಧನ
24 ಸಾವಿರ ಅರ್ಜಿಗಳ ವಿಲೇವಾರಿ:
ಈವರೆಗೆ 5 ಗ್ರಾಮ ವಾಸ್ತವ್ಯ ಕಾರ್ಯಕ್ರಮಗಳು ನಡೆದಿವೆ. 29,522 ಅರ್ಜಿಗಳು ಬಂದಿದ್ದವು. ಅದರಲ್ಲಿ 24,460 ಅರ್ಜಿಗಳಿಗೆ ಪರಿಹಾರ ದೊರಕಿಸಲಾಗಿದೆ. ಉಳಿದ ಅರ್ಜಿಗಳನ್ನು ಆಯಾ ಇಲಾಖೆಗಳಿಗೆ ವರ್ಗಾಯಿಸಲಾಗಿದೆ. ಮುಖ್ಯಮಂತ್ರಿ ಸಹ ಎರಡು ಕಡೆ ಗ್ರಾಮ ವಾಸ್ತವ್ಯಕ್ಕೆ ಬಂದಿದ್ದರು. ಗ್ರಾಮ ವಾಸ್ತವ್ಯ ನಡೆದ ಗ್ರಾಮಗಳ ಸ್ಥಳೀಯ ಅಭಿವೃದ್ಧಿ ಮತ್ತು ಮೂಲಸೌಕರ್ಯಗಳನ್ನು ಕಲ್ಪಿಸಲು 1 ಕೋಟಿ ರೂ. ಅನುದಾನವನ್ನು ಮುಖ್ಯಮಂತ್ರಿಯವರು ಒದಗಿಸಿದ್ದಾರೆ ಎಂದು ಆರ್. ಅಶೋಕ್ ಇದೇ ವೇಳೆ ಮಾಹಿತಿ ನೀಡಿದರು.
60 ಲಕ್ಷ ರೈತರ ಮನೆಬಾಗಿಲಿಗೆ ದಾಖಲೆಪತ್ರ
ಕಂದಾಯ ದಾಖಲೆಗಳನ್ನು ರೈತರ ಮನೆ ಬಾಗಿಲಿಗೆ ತಲುಪಿಸುವ ಯೋಜನೆಯಡಿ ಪಹಣಿ, ಅಟ್ಲಾಸ್, ಜಾತಿ ಪ್ರಮಾಣಪತ್ರ, ಆದಾಯ ಪ್ರಮಾಣಪತ್ರ ಮತ್ತಿತರ ದಾಖಲೆಗಳನ್ನು ರೈತರಿಗೆ ತಲುಪಿಸಲಾಗುತ್ತಿದೆ. ಅದರಂತೆ ಈವರೆಗೆ 60 ಲಕ್ಷ ರೈತರ ಮನೆ ಬಾಗಿಲಿಗೆ ಕಂದಾಯ ದಾಖಲೆಗಳನ್ನು ತಲುಪಿಸಲಾಗಿದೆ. ಇದರಿಂದ ಗ್ರಾಮೀಣ ಭಾಗದ ಜನರಿಗೆ ಸಾಕಷ್ಟು ಅನುಕೂಲವಾಗಿದೆ. ಜಾತಿ ಪ್ರಮಾಣ ಹೊರತುಪಡಿಸಿ ಉಳಿದ ಕಂದಾಯ ದಾಖಲೆಗಳ ಅವಧಿ 1 ವರ್ಷ ಇರಲಿದೆ. ಈ ದಾಖಲೆಗಳನ್ನು ಒದಗಿಸಲು 15 ಕೋಟಿ ರೂ. ವೆಚ್ಚ ಆಗಲಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಅವರು ಕಾಂಗ್ರೆಸ್ ಸದಸ್ಯ ಕೆ. ಹರೀಶ್ ಕುಮಾರ್ ಅವರ ಪ್ರಶ್ನೆಗೆ ಉತ್ತರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Rashmika Mandanna: ಸಾವಿರಾರು ಜನರ ಮುಂದೆ ಮದುವೆ ಆಗುವ ಹುಡುಗನ ಬಗ್ಗೆ ಮಾತನಾಡಿದ ರಶ್ಮಿಕಾ
Stock Market: ಷೇರುಪೇಟೆ ಸೂಚ್ಯಂಕ 1,300 ಅಂಕ ಜಿಗಿತ; ಅದಾನಿ ಗ್ರೂಪ್ ಷೇರು ಮೌಲ್ಯ ಏರಿಕೆ
Bidar: ವಕ್ಫ್ ಹೋರಾಟ ಆರಂಭಿಸಿದ ಯತ್ನಾಳ್- ಜಾರಕಿಹೊಳಿ ತಂಡ
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.