ಮಹದಾಯಿ- ಕೃಷ್ಣಾ ನೀರು ಹಂಚಿಕೆ ವಿವಾದ: ಕೇಂದ್ರ ಸಚಿವರೊಂದಿಗೆ ರಮೇಶ್ ಜಾರಕಿಹೊಳಿ ಚರ್ಚೆ
Team Udayavani, Oct 10, 2020, 3:23 PM IST
ಬೆಂಗಳೂರು: ತೆಲಂಗಾಣ ಮತ್ತು ಗೋವಾ ರಾಜ್ಯಗಳು ಮಹದಾಯಿ ಮತ್ತು ಕೃಷ್ಣಾ ನದಿ ನೀರು ಹಂಚಿಕೆ ಸಂಬಂಧ ಹೊಸ ವಿವಾದ ಸೃಷ್ಟಿಸಲು ಮುಂದಾಗಿದ್ದು, ಈ ವಿವಾದಗಳಿಂದ ರಾಜ್ಯಕ್ಕೆ ಅನ್ಯಾಯ ಆಗಲು ಬಿಡುವುದಿಲ್ಲ ಮತ್ತು ರಾಜ್ಯ ಸರ್ಕಾರವು ಕೇಂದ್ರ ಸರ್ಕಾರ ಮತ್ತು ಸುಪ್ರೀಂ ಕೋರ್ಟ್‌ನಲ್ಲಿ ಸಮರ್ಥ ವಾದ ಮಂಡಿಸಲಿದೆ ಎಂದು ಜಲ ಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ ಭರವಸೆ ನೀಡಿದ್ದಾರೆ.
ಕೇಂದ್ರ ಜಲಶಕ್ತಿ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿದ ನಂತರ ಹೇಳಿಕೆ ಬಿಡುಗಡೆ ಮಾಡಿರುವ ಸಚಿವರು, ಕೃಷ್ಣಾ ನದಿ ನೀರು ಹಂಚಿಕೆ ವಿಷಯದಲ್ಲಿ ತೆಲಂಗಾಣ ಸರ್ಕಾರವು ಹೊಸ ತಗಾದೆ ತೆಗೆದಿದೆ. ಕೃಷ್ಣಾ ನದಿ ನೀರು ಹಂಚಿಕೆಗೆ ಸಂಬಂಧಿಸಿದಂತೆ ನ್ಯಾಯಾಧಿಕರಣವು ಈಗಾಗಲೇ ಅಂತಿಮ ತೀರ್ಪನ್ನೂ ಸಹಾ ನೀಡಿದೆ. 2013ರಲ್ಲಿಯೇ ಕರ್ನಾಟಕ, ಮಹಾರಾಷ್ಟ್ರ ಮತ್ತು ಅಖಂಡ ಆಂಧ್ರ ಪ್ರದೇಶ ರಾಜ್ಯಗಳಿಗೆ ನೀರು ಹಂಚಿಕೆ ಮಾಡಲಾಗಿದೆ. ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ ಬಳಿಕ ತೀರ್ಪಿನ ಅಧಿಸೂಚನೆ ಹೊರಡಿಸಲು ಕೇಂದ್ರ ಸರ್ಕಾರವೂ ನಿರ್ಧರಿಸಿದೆ. ಹೀಗಾಗಿ ನೀರು ಹಂಚಿಕೆ ವಿಷಯದಲ್ಲಿ ಹೊಸದಾಗಿ ನ್ಯಾಯಾಧಿಕರಣ ಸ್ಥಾಪಿಸಬೇಕೆಂದು ತೆಲಂಗಾಣ ಸರ್ಕಾರದ ವಾದ ಅತಾರ್ತಿಕವಾಗಿದೆ ಎಂದಿದ್ದಾರೆ.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.