![naki](https://www.udayavani.com/wp-content/uploads/2025/02/naki-415x221.png)
![naki](https://www.udayavani.com/wp-content/uploads/2025/02/naki-415x221.png)
Team Udayavani, Jul 24, 2021, 1:53 PM IST
ಬೆಂಗಳೂರು: ಮಹಿಳಾ ಮತ್ತು ಮಕ್ಕಳ ಇಲಾಖೆಯಲ್ಲಿ ಮೊಟ್ಟೆ ಖರೀದಿಯಲ್ಲಿ ಅವ್ಯವಹಾರವಾಗಿದೆ ಎಂದು ಖಾಸಗಿ ಸುದ್ದಿ ಮಾಧ್ಯಮದಲ್ಲಿ ಪ್ರಸಾರವಾಗುತ್ತಿರುವ ಸುದ್ದಿ ಸತ್ಯಕ್ಕೆ ದೂರವಾದದ್ದು, ಇದರ ಹಿಂದೆ ರಾಜಕೀಯ ಷಡ್ಯಂತ್ರ ಅಡಗಿದ್ದು, ವಯಕ್ತಿಕವಾಗಿ ನನ್ನ ತೇಜೋವಧೆ ಮಾಡುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ ನೀಡಿದ್ದಾರೆ.
ಇಂದು ಮಾಧ್ಯಮ ಪ್ರಕಟನೆ ಹೊರಡಿಸಿರುವ ಅವರು, ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪನವರ ಸಚಿವ ಸಂಪುಟದಲ್ಲಿ ಏಕೈಕ ಮಹಿಳಾ ಸಚಿವೆಯಾಗಿ ಮಹಿಳೆಯರು, ಮಕ್ಕಳು, ವೃದ್ಧರು, ವಿಕಲಚೇತನರ ಏಳಿಗೆಗಾಗಿ ನಿರಂತರ ಶ್ರಮಿಸುತ್ತಿದ್ದೇನೆ.
ಕೋವಿಡ್ 2ನೇ ಅಲೆಯ ಸಂದರ್ಭದಲ್ಲಿ ಮಕ್ಕಳು ಮತ್ತು ಮಹಿಳೆಯರ ಮೇಲೆ ಉಂಟಾದ ಸಮಸ್ಯೆ ಪರಿಹಾರಕ್ಕಾಗಿ ರಾಜ್ಯಾದ್ಯಂತ ಪ್ರವಾಸ ಮಾಡಿ ಇಲಾಖೆ ವತಿಯಿಂದ ಅಗತ್ಯ ಸೌಲಭ್ಯ ಒದಗಿಸುವ ಪ್ರಯತ್ನ ಮಾಡಿದ್ದೇನೆ. ಅಲ್ಲದೆ ಮೂರನೇ ಅಲೆ ಮಕ್ಕಳ ಮೇಲೆ ಹೆಚ್ಚಿನ ಪರಿಣಾಮ ಬೀರುತ್ತದೆ ಎಂಬ ತಜ್ಞರ ವರದಿ ಹಿನ್ನೆಲೆ ರಾಜ್ಯದ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ ಮಕ್ಕಳಿಗಾಗಿ ಪ್ರತ್ಯೇಕ ವಾರ್ಡ್ ತೆರೆಯಲು ಕ್ರಮ ವಹಿಸಲಾಗಿದೆ.
ಒಬ್ಬ ಮಹಿಳೆಯಾಗಿ ನನಗೆ ಪಕ್ಷ ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನೀಡಿರುವ ಅವಕಾಶದಲ್ಲಿ ಮಹಿಳೆಯರು ಮತ್ತು ಮಕ್ಕಳ ಏಳಿಗೆಗಾಗಿ ಶಕ್ತಿ ಮೀರಿ ಶ್ರಮಿಸುತ್ತಿದ್ದೇನೆ. ಇಂತಹ ಸಂದರ್ಭದಲ್ಲಿ ಖಾಸಗಿ ವಾಹಿನಿಯ ಮೂಲಕ ರಹಸ್ಯ ಕಾರ್ಯಾಚರಣೆ ನಡೆಸಿ ನನ್ನನ್ನು ಆರೋಪಿತಳನ್ನಾಗಿ ಮಾಡುವ ಪ್ರಯತ್ನ ನಡೆಸುತ್ತಿರುವುದು ದುರದೃಷ್ಟಕರ. ಖಾಸಗಿ ವಾಹಿನಿಯಲ್ಲಿ ಹೇಳುತ್ತಿರುವ ಹಾಗೆ ಮೊಟ್ಟೆ ಖರೀದಿಗೆ ಇದುವರೆಗೂ ಯಾವದೇ ಟೆಂಡರ್ ಕರೆದಿಲ್ಲ. ಅಲ್ಲದೇ ಟೆಂಡರ್ ನೀಡಲು ನಾನು ವಯಕ್ತಿಕವಾಗಿ ಯಾವುದೇ ವ್ಯಕ್ತಿ ಅಥವಾ ಸಂಸ್ಥೆಯಿಂದ ಹಣಕ್ಕಾಗಿ ಬೇಡಿಕೆ ಇಟ್ಟಿಲ್ಲ
ನಮ್ಮ ಬಿಜೆಪಿ ಪಕ್ಷದ ಶಾಸಕರಾದ ಪರಣ್ಣ ಮುನವಳ್ಳಿಯವರು ತಮ್ಮ ಸಂಬಂಧಿಕರು ಎಂದು ಕರೆದುಕೊಂಡು ಬಂದಾಗ ಕಾನೂನು ಪ್ರಕಾರ ಟೆಂಡರ್ ಪ್ರಕ್ರಿಯೆಯಲ್ಲಿ ಪಾಲ್ಗೊಳ್ಳುವಂತೆ ಸೂಚಿಸಿದ್ದೇನೆ. ಇದರಲ್ಲಿ ಯಾವುದೇ ಹಣಕಾಸಿನ ವ್ಯವಹಾರದ ಕುರಿತು ನಾನು ಮಾತನಾಡಿಲ್ಲ.
ಆದರೆ, ಒಬ್ಬ ಮಹಿಳೆಯಾಗಿ ಪ್ರಾಮಾಣಿಕವಾಗಿ ಕೆಲಸ ಮಾಡಿಕೊಂಡು ರಾಜಕೀಯದಲ್ಲಿ ನನ್ನದೇ ಆದ ತತ್ವ ಸಿದ್ದಾಂತ ನಂಬಿಕೊಂಡು ಕೆಲಸ ಮಾಡುತ್ತಿರುವ ನನ್ನ ಏಳಿಗೆಯನ್ನು ಸಹಿಸದವರು, ನನ್ನ ವಿರುದ್ಧ ವ್ಯವಸ್ಥಿತ ಷಡ್ಯಂತ್ರ ನಡೆಸುತ್ತಿದ್ದಾರೆ. ಇದರ ಹಿಂದೆ ಕಾಣದ ಕೈಗಳು ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ.
ಖಾಸಗಿ ಸುದ್ದಿ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಮಾಹಿತಿ ಪ್ರಕಾರ 2021 ರ ಫೆಬ್ರವರಿ ತಿಂಗಳಲ್ಲಿಯೇ ರಹಸ್ಯ ಕಾರ್ಯಾಚರಣೆ ನಡೆಸಲಾಗಿದೆ ಎಂದು ಹೇಳುತ್ತಿದ್ದು, ಆದರೆ, ರಹಸ್ಯ ಕಾರ್ಯಾಚರಣೆ ಮಾಡಿದವರು ಆರು ತಿಂಗಳಿನಿಂದ ಮಾಧ್ಯಮದವರ ಮುಂದೆ ಬಿಡುಗಡೆ ಮಾಡದೇ ಇಟ್ಟುಕೊಂಡಿರುವ ಉದ್ದೇಶದ ಬಗ್ಗೆ ಅನುಮಾನ ಮೂಡಿಸುತ್ತದೆ. ಇದರ ಹಿಂದೆ ವ್ಯವಸ್ಥಿತ ರಾಜಕೀಯ ಪಿತೂರಿ ಇರುವುದು ಎದ್ದು ಕಾಣಿಸುತ್ತದೆ.
ಆದರೆ, ನಾನು ಈ ರೀತಿಯ ಷಡ್ಯಂತ್ರಕ್ಕೆ ಬಲಿಯಾಗದೆ, ಪಕ್ಷ ಹಾಗೂ ಪಕ್ಷದ ನಾಯಕರು ನನ್ನ ಮೇಲೆ ಇಟ್ಟಿರುವ ಭರವಸೆ, ನಂಬಿಕೆಯನ್ನು ಉಳಿಸಿಕೊಂಡು ಪ್ರಾಮಾಣಿಕವಾಗಿ ರಾಜ್ಯದ ಜನರ ಸೇವೆ ಮಾಡುತ್ತೇನೆ. ಅಲ್ಲದೇ ನನ್ನ ವಿರುದ್ಧ ಆಧಾರರಹಿತವಾಗಿ ಷಡ್ಯಂತ್ರ ನಡೆಸುತ್ತಿರುವವರ ವಿರುದ್ಧ ಕಾನೂನು ಹೋರಾಟವನ್ನೂ ಮಾಡಲು ಚಿಂತನೆ ನಡೆಸುತ್ತಿದ್ದೇನೆ ಎಂದಿದ್ದಾರೆ.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.