Shivanand Patil: ಆರ್.ವಿ.ದೇಶಪಾಂಡೆ ಹಿರಿಯರು ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ
Team Udayavani, Sep 3, 2024, 2:22 PM IST
ಬೆಳಗಾವಿ: ಮುಖ್ಯಮಂತ್ರಿಯಾಗುವ ಆಸೆ ಎಲ್ಲರಲ್ಲಿಯೂ ಇದೆ. ಆದರೆ ಈಗ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ್ ಹೇಳಿದ್ದಾರೆ.
ನಗರದಲ್ಲಿ ಮಾತನಾಡಿದ ಅವರು, ಆರ್.ವಿ.ದೇಶಪಾಂಡೆ ಅವರು ಹೈಕಮಾಂಡ್ ಒಪ್ಪಿದರೆ ನಾನು ಮುಖ್ಯಮಂತ್ರಿಯಾಗಲು ಸಿದ್ಧನಿದ್ದೇನೆ ಎಂದು ಹೇಳಿಕೆ ನೀಡಿದ್ದು ಅದು ಅವರ ವೈಯಕ್ತಿಕ ಹೇಳಿಕೆ. ಅಲ್ಲದೆ ಅವರು ಕಾಂಗ್ರೆಸ್ ನ ಹಿರಿಯ ಶಾಸಕರಿದ್ದಾರೆ. ಅವರು ಆಸೆ ಪಡುವುದರಲ್ಲಿ ತಪ್ಪಿಲ್ಲ. ನಮ್ಮ ಪಕ್ಷದಲ್ಲಿ ಮುಖ್ಯಮಂತ್ರಿ ಬದಲಾವಣೆ ಚಿಂತೆ ನಡೆದಿಲ್ಲ. ಹೈಕಮಾಂಡ್ ಇದೆ. ಇದರ ಬಗ್ಗೆ ಶಾಸಕಾಂಗ ಸಭೆಯಲ್ಲಿ ನಿರ್ಣಯವಾಗಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ ಸ್ಥಾನಕ್ಕೆ ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದವರಾಗಬೇಕು ಎಂಬ ವಿಚಾರ ಅಲ್ಲ. ಇವೆಲ್ಲ ಪ್ರಶ್ನೆ ಉದ್ಬವಿಸುವುದು ಸಿದ್ದರಾಮಯ್ಯ ಅವರು ರಾಜೀನಾಮೆ ಕೊಟ್ಟ ಮೇಲೆ. ಎಲ್ಲ ಶಾಸಕ, ಸಚಿವರು ಸಿದ್ದರಾಮಯ್ಯ ಅವರ ಪರವಾಗಿ ಇದ್ದಾರೆ ಎಂದು ಸ್ಪಷ್ಟನೆ ನೀಡಿದರು.
ಕೂಡಲಸಂಗಮ ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ ಅವರನ್ನು ಕಳೆದ ಆರು ತಿಂಗಳ ಹಿಂದೆ ನಾವೇ ಮುಖ್ಯಮಂತ್ರಿಯವರಿಗೆ ಭೇಟಿ ಮಾಡಿಸಿದ್ದೇವೆ. ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕೊಡುವ ವಿಚಾರ ಬಂದಾಗ ಮುಖ್ಯಮಂತ್ರಿ ನಿರ್ಣಯ ತೆಗೆದುಕೊಳ್ಳುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.