ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ತಿರುಗಾಟ ಬೇಡ : ಸಚಿವ ಸೋಮಶೇಖರ್ ಮನವಿ
Team Udayavani, Apr 21, 2021, 5:05 PM IST
ಮೈಸೂರು: ಕೋವಿಡ್ ಮಹಾಮಾರಿ ನಿಯಂತ್ರಣಕ್ಕೆ ಇಂದು ವಿಶ್ವವೇ ಪರಿತಪಿಸುತ್ತಿದೆ. ಇದಕ್ಕಾಗಿ ಸರ್ಕಾರಗಳು ಅನೇಕ ಕಾರ್ಯಸೂಚಿ, ಕಟ್ಟುನಿಟ್ಟಿನ ಕ್ರಮಗಳನ್ನು ಅನುಸರಿಸುತ್ತಿವೆ. ಆದರೂ ಹತೋಟಿಗೆ ಬರುತ್ತಿಲ್ಲ. ಇದಕ್ಕೆ ನಾಗರಿಕರ ಸಹಭಾಗಿತ್ವವೂ ಮುಖ್ಯವಾಗಲಿದ್ದು, ಎಲ್ಲರೂ ಒಟ್ಟಾಗಿ ಪರಿಸ್ಥಿತಿ ನಿಭಾಯಿಸಬೇಕಿದೆ. ಬನ್ನಿ ಒಗ್ಗಟ್ಟಾಗೋಣ, ಕೋವಿಡ್ ಮುಕ್ತ ನಾಡನ್ನು ಕಟ್ಟೋಣ ಎಂದು ಸಚಿವ ಎಸ್.ಟಿ ಸೋಮಶೇಖರ್ ಮನವಿ ಮಾಡಿಕೊಂಡಿದ್ದಾರೆ.
ರಾಜ್ಯ ಸರ್ಕಾರ ಮಂಗಳವಾರವಷ್ಟೇ ಮಾರ್ಗಸೂಚಿಯನ್ನು ಪ್ರಕಟ ಮಾಡಿದೆ. ಇದರಲ್ಲಿಕಟ್ಟುನಿಟ್ಟಿನ ಕ್ರಮಗಳನ್ನು ಸೂಚಿಸಿದೆ. ಎಲ್ಲರೂ ಸರ್ಕಾರ ಪ್ರಕಟಿಸಿದ ಕೋವಿಡ್ ಮಾರ್ಗಸೂಚಿ ಅನುಸರಿಸಿ, ವಾರಂತ್ಯದ ಲಾಕ್ ಡೌನ್ ಸೇರಿದಂತೆ ರಾತ್ರಿ ಕರ್ಫ್ಯೂಗೆ ಬೆಂಬಲ ನೀಡಿ, ಕೆಲಸ ಇದ್ದರೆ ಮಾತ್ರ ಹೊರಬನ್ನಿ, ಅನಾವಶ್ಯಕ ತಿರುಗಾಟ ಬೇಡ, ಸಾಮಾಜಿಕ ಅಂತರ ಕಾಯ್ದುಕೊಳ್ಳಿ, ಮಾಸ್ಕ್, ಸ್ಯಾನಿಟೈಸರ್ ಬಳಸಿ, ಅಗತ್ಯಕ್ಕಿಂತ ಹೆಚ್ಚು ಹೊತ್ತು ಒಂದೆಡೆ ನಿಲ್ಲಬೇಡಿ, ಗುಂಪು ಸೇರಲು ಅವಕಾಶ ಕೊಡಬೇಡಿ. ಕಾರಣ, ಕೋವಿಡ್ ಗೆ ಯಾವುದೇ ಭೇದ-ಭಾವ ಇಲ್ಲ ಎಂಬುದನ್ನು ನಾವು ಅರಿತುಕೊಳ್ಳಬೇಕಿದೆ ಎಂದಿದ್ದಾರೆ.
ಸಾರ್ವಜನಿಕರ ಸಹಿತ ಸಂಘ-ಸಂಸ್ಥೆಗಳು, ಸಮಾಜದ ಎಲ್ಲ ವರ್ಗದ ಜನರು, ಜನಪ್ರತಿನಿಧಿಗಳು ಸಹಕಾರ ನೀಡಬೇಕು. ಸರ್ಕಾರ ಸೂಚಿಸಿರುವ ಮಾರ್ಗಸೂಚಿಗಳನ್ನು ಅನುಸರಿಸಬೇಕು. ಲಕ್ಷಣಗಳು ಕಂಡುಬಂದರೆ ತಕ್ಷಣ ಹತ್ತಿರದ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ಪರೀಕ್ಷೆಯನ್ನು ಮಾಡಿಸಿಕೊಳ್ಳಬೇಕು. ಸೋಂಕಿತರು ಹೋಂ ಐಸೋಲೇಷನ್ ನಲ್ಲಿದ್ದರೆ ಅಂಥವರು ಕ್ಯಾರಂಟೇನ್ ಅವಧಿ ಮುಗಿಯುವವರೆಗೂ ಮನೆಯಲ್ಲೇ ಇದ್ದು, ಅಂತರ ಕಾಯ್ದುಕೊಂಡು ಬೇಗ ಗುಣಮುಖರಾಗಲಿ, ಒಂದು ವೇಳೆ ತೀವ್ರ ಅಸ್ವಸ್ಥರಾದರೆ ತಕ್ಷಣ ಆಸ್ಪತ್ರೆಗೆ ದಾಖಲಾಗಿ ಗುಣಮುಖರಾಗಲಿ, ಹೀಗಾಗಿ ಎಲ್ಲರ ಸಹಕಾರ ಬೇಕು ಎಂದು ಜನರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.