ಕಾಂಗ್ರೆಸ್ ಜತೆ ಸೇರಿರುವ ‘ಹಿತಶತ್ರುಗಳು’: ಸಚಿವ ಸುಧಾಕರ್ ಪ್ರಸ್ತಾಪ ಮಾಡಿದ್ದು ಯಾರ ಬಗ್ಗೆ?
Team Udayavani, Apr 18, 2022, 12:26 PM IST
ಬೆಂಗಳೂರು: ಅಧಿಕಾರಕ್ಕೆ ಬಂದೇ ಬಿಟ್ಟೆವು ಎಂಬ ಭ್ರಮೆಯಲ್ಲಿರುವ ಕಾಂಗ್ರೆಸ್ ನಾಯಕರ ಜತೆ ಕೆಲ ‘ಹಿತಶತ್ರುಗಳು’ ಕೈಜೋಡಿಸಿ ಷಡ್ಯಂತ್ರ ನಡೆಸಿರುವ ಎಲ್ಲ ಮಾಹಿತಿ ಇದೆ ಎಂದು ಆರೋಗ್ಯ ಸಚಿವ ಡಾ.ಸುಧಾಕರ್ ಮಾಡಿರುವ ಸಾಮಜಿಕ ಜಾಲತಾಣಗಳಲ್ಲಿ ಬರೆದುಕೊಂಡಿದ್ದು, ಈಗ ಭಾರಿ ಚರ್ಚೆಗೆ ಕಾರಣವಾಗಿದೆ.
ತಮ್ಮ ವಿರುದ್ಧ ಕೇಳಿ ಬಂದಿರುವ ಆರೋಪಕ್ಕೆ ಸಂಬಂಧಪಟ್ಟಂತೆ ಬರೆದುಕೊಂಡಿರುವ ಅವರು, ” ಹಿತಶತ್ರುಗಳ ಷಡ್ಯಂತ್ರ” ಎಂಬ ಪದವನ್ನು ಯಾರನ್ನು ಉದ್ದೇಶಿಸಿ ಪ್ರಯೋಗ ಮಾಡಿದ್ದಾರೆ ಎಂಬ ಪ್ರಶ್ನೆ ಉದ್ಭವವಾಗಿದೆ.
ಇತ್ತೀಚೆಗೆ ಸುಳ್ಳುಗಳ ಕಂತೆಯನ್ನು ಸತ್ಯ ಎಂದು ಬಿಂಬಿಸುವ ಪ್ರಯತ್ನ ರಾಜ್ಯದಲ್ಲಿ ನಡೆಯುತ್ತಿದೆ. ಆಧಾರ ರಹಿತ ದಾಖಲೆಗಳು ಇಲ್ಲದ ಆರೋಪಗಳನ್ನು ಮಾಡುವ ಮೂಲಕ ಸರ್ಕಾರದ ವರ್ಚಸ್ಸಿಗೆ ಮಸಿ ಬಳಿಯುವ ಕೆಲಸ ಮಾಡಲಾಗುತ್ತಿದೆ. ಇದಕ್ಕಾಗಿ ಸಾಮಾಜಿಕ ಜಾಲತಾಣ ಹಾಗೂ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ಆರೋಪಿಸಿದ್ದಾರೆ.
ಇದನ್ನೂ ಓದಿ:ಈಶ್ವರಪ್ಪ ರಾಜೀನಾಮೆಗೂ ಮುನ್ನ ಭಾರೀ ಪ್ರಮಾಣದ ಕಮಿಷನ್ ಅಕ್ರಮ ವ್ಯವಹಾರ: ಆಲಂ ಪಾಷಾ ಆರೋಪ
ಹಗರಣದ ಭೂತವನ್ನೇ ಬೆನ್ನಿಗೆಕಟ್ಟಿಕೊಂಡಿರುವ ಕಾಂಗ್ರೆಸಿಗರ ಬಯಲಾಟವನ್ನು ರಾಜ್ಯದ ಜನತೆ ಸೂಕ್ಷ್ಮವಾಗಿ ನೋಡುತ್ತಿದ್ದಾರೆ. ಆತ್ಮಾವಲೋಕನ ಮಾಡಿಕೊಂಡು ಇನ್ನಾದರೂ ರಚನಾತ್ಮಕ ಕೆಲಸದ ಮೂಲಕ ಜನತೆಯ ಮುಂದೆ ಹೋಗಿ ಎಂದು ಕಾಂಗ್ರೆಸ್ ಗೆ ಕಿವಿ ಮಾತು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್.ಅಶೋಕ್
BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?
Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?
High Court: ನಕ್ಸಲ್ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್ ಮನವಿ ಮರು ಪರಿಶೀಲನೆಗೆ ನಿರ್ದೇಶ
ಕಸ್ತೂರಿಂಗನ್ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’
MUST WATCH
ಹೊಸ ಸೇರ್ಪಡೆ
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.