ಮಕ್ಕಳೇ ಪರೀಕ್ಷೆಗೆ ಸಿದ್ದತೆ ಹೇಗೆ ನಡೆಯುತ್ತಿದೆ? SSLC ಮಕ್ಕಳಿಗೆ ಫೋನ್ ಮಾಡಿದ ಸಚಿವರು

Team Udayavani, Apr 20, 2020, 4:09 PM IST

SSLC ಮಕ್ಕಳಿಗೆ ಫೋನ್ ಮಾಡಿದ ಸಚಿವರು

ಬೆಂಗಳೂರು: ಕೋವಿಡ್-19 ಲಾಕ್‍ ಡೌನ್ ಘೋಷಣೆಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆಗಳನ್ನು ಮುಂದೂಡಿರುವುದರಿಂದ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ರಾಜ್ಯದ ನಾನಾ ಭಾಗದ ಮಕ್ಕಳೊಂದಿಗೆ ತಾವೇ ದೂರವಾಣಿ ಕರೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದರು.

ಸೋಮವಾರ ಬೆಳಗ್ಗೆ ತಮ್ಮ ಕಚೇರಿಯಿಂದ ತಾವೇ ಫೋನ್‍ನಲ್ಲಿ ಸಂಪರ್ಕಿಸಿ, ಮಕ್ಕಳ ಪರೀಕ್ಷಾ ಸಿದ್ಧತೆ, ಆರೋಗ್ಯ ಕುರಿತು ವಿಚಾರಿಸಿದರಲ್ಲದೇ ಶಿಕ್ಷಣ ಇಲಾಖೆ ವತಿಯಿಂದ ದೂರದರ್ಶನ ಮತ್ತು ಆಕಾಶವಾಣಿ ಸೇರಿದಂತೆ ಹಲವು ಮಾಧ್ಯಮಗಳ ಮೂಲಕ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳ ಪೂರ್ವ ಸಿದ್ಧತೆಗೆ ಮಾರ್ಗದರ್ಶಿ ತರಗತಿಗಳನ್ನು ಇಷ್ಟರಲ್ಲಿಯೇ ಬಿತ್ತರಿಸಲಾಗುವುದಿದ್ದು, ಇದನ್ನು ಅದನ್ನು ಅನುಸರಿಸಬೇಕೆಂದು ಸಲಹೆ ನೀಡಿದರು.

ಪರೀಕ್ಷೆ ಮುಂದಕ್ಕೆ ಹೋಗಿದ್ದರಿಂದ ಮಕ್ಕಳು ಆತ್ಮವಿಶ್ವಾಸ ಕಳೆದುಕೊಳ್ಳದಂತೆ ಮಾಡಲು ಕ್ರಮಗಳನ್ನು ಕೈಗೊಳ್ಳಬೇಕೆಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಅಧಿಕಾರಿಗಳಿಗೆ ಈಗಾಗಲೇ ಸೂಚನೆ ನೀಡಿದ್ದರು. ಇಲಾಖೆಯ ಆಯುಕ್ತರ ಹಂತದಿಂದ ಹಿಡಿದು ನಿರ್ದೇಶಕರು, ಉಪನಿರ್ದೇಶಕರು, ಬಿಇಒ, ಕ್ಲಸ್ಟರ್ ಹಾಗೂ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು ಹಂತದವರೆಗೂ ಎಲ್ಲರೂ ವಿದ್ಯಾರ್ಥಿಗಳೊಂದಿಗೆ ಸಂಪರ್ಕ ಸಾಧಿಸಿ ಆತ್ಮವಿಶ್ವಾಸ ಮೂಡಿಸುವ ಕೆಲಸ ಸಮರೋಪಾದಿಯಲ್ಲಿ ಮಾಡಬೇಕು ಎಂದು ಸೂಚನೆ ನೀಡಿದ್ದರು. ಅದರ ಭಾಗವಾಗಿ ಇಂದು ತಾವೇ ಮಕ್ಕಳೊಂದಿಗೆ ಮಾತನಾಡಿ ಮಕ್ಕಳಲ್ಲಿ ಆತ್ಮವಿಶ್ವಾಸ ಮೂಡಿಸಿದ್ದು ವಿಶೇಷವಾಗಿತ್ತು.

ಬಳ್ಳಾರಿಯ ಲಿಟ್ಲ್ ಫ್ಲವರ್ ಶಾಲೆಯ ಸಹನಾ, ಛತ್ರಪತಿ ಶಿವಾಜಿ ಶಾಲೆಯ ಬಸವರಾಜ್, ಕೊಪ್ಪಳದ ಸರ್ಕಾರಿ ಪ್ರೌಢಶಾಲೆಯ ರವಿಕುಮಾರ್, ರಾಯಚೂರಿನ ವಿಶಾಲ್ ಮತ್ತು ಮಧುಕುಮಾರಿ ಅವರನ್ನು ತಾವೇ ಫೋನ್ ಮಾಡಿದ ಸಚಿವರು, ಏನಪ್ಪಾ, ಏನಮ್ಮಾ ಹೇಗೆ ಓದ್ತಾ ಇದ್ದೀರಿ, ಏನ್ ಓದ್ತಾ ಇದೀರಿ, ಪರೀಕ್ಷೆಗೆ ರೆಡಿ ಇದ್ದೀರಾ, ಸ್ಟಡಿ ಹಾಲಿಡೇಸ್ ಹೇಗೆ ಕಳೆಯುತ್ತಿದ್ದೀರಿ, ಮಾಸ್ಕ್ ಹಾಕಿಕೊಂಡಿದ್ದೀರಾ, ಪರೀಕ್ಷೆಗೆ ಸಜ್ಜಾಗಿದ್ದೀರಾ ಎಂದು ಪ್ರಶ್ನಿಸಿ ಮಕ್ಕಳಿಂದ ಅಭಿಪ್ರಾಯಗಳನ್ನು ಪಡೆದುಕೊಂಡರು.

ಲಾಕ್‍ಡೌನ್ ಮುಗಿಯುತ್ತಿದ್ದಂತೆ ಪರೀಕ್ಷೆ ಆರಂಭವಾಗುತ್ತೇ, ನೀವು ಯಾವ ಕಾರಣಕ್ಕೂ ವಿಶ್ವಾಸ ಕಳೆದುಕೊಳ್ಳಬೇಡಿ ಎಂದು ಸಚಿವರು ಮಕ್ಕಳಿಗೆ ಹೇಳಿದರು. ಆ ಕಡೆಯಿಂದ ಮಕ್ಕಳೂ ಸಹ ಸಚಿವರಿಗೆ ಪ್ರಶ್ನೆ ಕೇಳಿ ತಮ್ಮ ಸಂದೇಹಗಳನ್ನು ಬಗೆಹರಿಸಿಕೊಂಡರು.

ಕಲ್ಬುರ್ಗಿಯ ಮಲ್ಲಿಕಾರ್ಜುನ, ಸಹನಾ, ಬೆಂಗಳೂರಿನ ಸಿರಿ ಶಾಲೆಯ ಧನಲಕ್ಷ್ಮಿ, ವಾಣಿ ಸ್ಕೂಲ್‍ನ ಹರ್ಷಿತಾ, ಹೋಲಿ ಏಂಜಲ್ಸ್‌ ಶಾಲೆಯ ಅಮೋಘ, ಶಿವಮೊಗ್ಗದ ಆದಿ ಚುಂಚನಗಿರಿ ಶಾಲೆಯ ಎನ್. ಎಸ್. ಶ್ರದ್ಧಾ ಒಡೆಯರಪುರ… ಹೀಗೆ ರಾಜ್ಯದ ವಿವಿಧ ಭಾಗಗಳ 10ನೇ ತರಗತಿ ಮಕ್ಕಳನ್ನು ಸಚಿವರು, ಇವತ್ತು ಎನ್ ಓದಿದೆ, ಊಟ ತಿಂಡಿ ಚೆನ್ನಾಗಿ ಮಾಡು, ತಂದೆ ತಾಯಿಗೆ ಒಳ್ಳೆ ಹೆಸರು ತೆಗೆದುಕೊಂಡು ಬಾ, ಹಳೆ ಪ್ರಶ್ನೆ ಪತ್ರಿಕೆಗಳ ರಿವಿಜನ್ ಮಾಡು, ಯಾವ ವಿಷಯ ಇಷ್ಟ, ಯಾವುದು ಕಷ್ಟ ಎಂದು ವಿಚಾರಿಸಿದರಲ್ಲದೇ, ನಾನು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯುವಾಗಲೇ ಇಂತಹ ಲಾಕ್‍ಡೌನ್ ಪರಿಸ್ಥಿತಿ ಬಂತಲ್ಲ ಎಂದು ಬೇಸರಿಸಿಕೊಳ್ಳಬೇಡ ಎಂದು ಹೇಳಿ ಧೈರ್ಯ ತುಂಬಿದರು. ಸಚಿವರೊಂದಿಗೆ ಮಾತನಾಡಿದ ಮಕ್ಕಳು ಆ ಕಡೆಯಿಂದ ಸಂತೋಷದಿಂದ ಫುಳಕಗೊಂಡರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಮಾಡಬೇಕಾ, ಬೇಡವೇ ಎಂದು ಪ್ರತಿಯೊಬ್ಬ ಮಕ್ಕಳನ್ನು ಕೇಳಿದಾಗ, ಪರೀಕ್ಷೆ ಬೇಕು ಸಾರ್, ನಾವು ಬರೆಯುತ್ತೇವೆ ಎಂದು ಹೇಳಿದ್ದು ಸಚಿವರಿಗೆ ಸಂತಸ ತಂದಿತು. ಸಚಿವರೊಂದಿಗೆ ಮಾತನಾಡಿದ ಮಕ್ಕಳಲ್ಲಿ ಅಧಿಕಾರಿಗಳ ಮಕ್ಕಳು, ಹಮಾಲರ ಮಕ್ಕಳು, ಶಿಕ್ಷಕರ ಮಕ್ಕಳು, ಖಾಸಗಿ ಕಂಪನಿಗಳ ನೌಕರರ ಮಕ್ಕಳು, ಮನೆ ಕೆಲಸದವರ ಮಕ್ಕಳು ಸೇರಿದಂತೆ ನಾನಾ ಸಾಮಾಜಿಕ ಸ್ತರಗಳಿಗೆ ಸೇರಿದವರಾಗಿದ್ದು, ಸಚಿವರು ತಮ್ಮದೇ ಆಪ್ತ ಧಾಟಿಯಲ್ಲಿ ಮಾತನಾಡಿ ಎಲ್ಲರಲ್ಲೂ ಆತ್ಮ ವಿಶ್ವಾಸ ಮೂಡಿಸಿದರು. ತಮ್ಮೆಲ್ಲರ ಇಚ್ಛೆಯಂತೆ  ಪರೀಕ್ಷೆ ನಡೆದೇ ನಡೆಯುತ್ತದೆ, ಯಾವುದೇ ವದಂತಿ ಹಾಗೂ ಸುಳ್ಳು ಸುದ್ದಿಗಳಿಗೆ ಕಿವಿಗೊಡಬೇಡಿ, ಚೆನ್ನಾಗಿ ಓದಿಕೊಳ್ಳಿ ಎಂದರು.

ಟಾಪ್ ನ್ಯೂಸ್

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

13

Kanguva: 10 ಸಾವಿರಕ್ಕೂ ಹೆಚ್ಚಿನ ಸ್ಕ್ರೀನ್‌ನಲ್ಲಿ ಅದ್ಧೂರಿಯಾಗಿ ರಿಲೀಸ್‌ ಆಗಲಿದೆ ʼಕಂಗುವʼ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Bypolls: ಯಡಿಯೂರಪ್ಪರನ್ನು ರಾಜಕೀಯವಾಗಿ ಮುಗಿಸಲು ಬೊಮ್ಮಾಯಿ ಪ್ಲ್ಯಾನ್:‌ ಸಿದ್ದರಾಮಯ್ಯ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Shirola: ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸಿಬ್ಬಂದಿ ಕೊರತೆ… ರೋಗಿಗಳ ಪರದಾಟ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

Missing: 3 ದಿನದಿಂದ ಕೆಪಿಸಿ ಭದ್ರತಾ ಸಿಬ್ಬಂದಿ ನಾಪತ್ತೆ… ಮಾಣಿ ಡ್ಯಾಂ ಬಳಿ ಬೈಕ್ ಪತ್ತೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

13

Malpe ಫಿಶರೀಸ್‌ ಕಾಲೇಜು: ದುರ್ವಾಸನೆಯಲ್ಲೇ ಪಾಠ

12

Kaup: ಎರ್ಮಾಳು-ಉಚ್ಚಿಲ-ಮೂಳೂರು ರಾಷ್ಟ್ರೀಯ ಹೆದ್ದಾರಿ 66ರಲ್ಲಿನ ಕತ್ತಲೆಗೆ ಮುಕ್ತಿ!

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

11

Vyasanagar: ಮಣ್ಣಿನ ಒಳ ರಸ್ತೆಗಳಿಗೆ ಬೇಕು ಬೀದಿದೀಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.