ಸಚಿವ ತಮ್ಮಣ್ಣಗೆ ಟ್ವೀಟ್ ಮೂಲಕ ಸಿಎಂ ಬುದ್ದಿವಾದ
Team Udayavani, Jun 10, 2019, 3:05 AM IST
ಬೆಂಗಳೂರು: ಮದ್ದೂರಿನಲ್ಲಿ ಸಾರಿಗೆ ಸಚಿವ ಡಿ.ಸಿ. ತಮ್ಮಣ್ಣ ತಮ್ಮ ಬಳಿ ಸಹಾಯ ಕೇಳಲು ಬಂದ ಸಾರ್ವಜನಿಕರಿಗೆ ನಿಂದಿಸಿರುವುದಕ್ಕೆ ಪರೋಕ್ಷವಾಗಿ ಮುಖ್ಯಮಂತ್ರಿ ಕುಮಾರಸ್ವಾಮಿ ಆಕ್ಷೇಪ ವ್ಯಕ್ತಪಡಿಸಿ, ಟ್ವೀಟ್ ಮೂಲಕ ಬುದ್ಧಿವಾದ ಹೇಳಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ಅವರ ಹೀನಾಯ ಸೋಲಿನ ಹಿನ್ನೆಲೆಯಲ್ಲಿ ತಮ್ಮಣ್ಣ ಅಸಮಾಧಾನ ಹೊರ ಹಾಕಿದ್ದರು. ಕಳೆದ ಶನಿವಾರ ಸಚಿವ ಡಿ.ಸಿ. ತಮ್ಮಣ್ಣ ಅವರ ಬಳಿ ಸಾರ್ವಜನಿಕರು ತಮ್ಮ ಗ್ರಾಮದಲ್ಲಿ ಆಗದಿರುವ ಕೆಲಸದ ಬಗ್ಗೆ ಗಮನಕ್ಕೆ ತರಲು ಮುಂದಾದಾಗ ಸಚಿವರು,
“ಮತ ಅವರಿಗೆ ಹಾಕಿ ಈಗ ಕೆಲಸ ಕೇಳಲು ನಮ್ಮ ಬಳಿ ಬರುತ್ತೀರಾ’ ಎಂದು ಖಾರವಾಗಿ ಮಾತನಾಡಿದ್ದರು. ಅವರ ಹೇಳಿಕೆಗೆ ವ್ಯಾಪಕ ಟೀಕೆಗಳು ಕೇಳಿ ಬಂದಿದ್ದವು. ಅಲ್ಲದೇ, ಮಂಡ್ಯ ಸಂಸದೆ ಸುಮಲತಾ ಕೂಡ ಆಕ್ಷೇಪ ವ್ಯಕ್ತಪಡಿಸಿ, ವಿಧಾನಸಭೆ ಚುನಾವಣೆಯಲ್ಲಿ ಅದೇ ಜನರು ತಮ್ಮಣ್ಣ ಅವರಿಗೆ ಮತ ನೀಡಿ ಗೆಲ್ಲಿಸಿ ಕಳುಹಿಸಿದ್ದಾರೆ ಎಂದು ಹೇಳಿದ್ದರು.
ಈ ಬೆಳವಣಿಗೆಯನ್ನು ಗಮನಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, “ಚುನಾವಣೆ ರಾಜಕೀಯವನ್ನು ಅಭಿವೃದ್ಧಿಯೊಂದಿಗೆ ಬೆರೆಸುವುದು ಸೂಕ್ತವಲ್ಲ. ಜನಪ್ರತಿನಿಧಿಗಳಾದ ಹಾಗೂ ಮಂತ್ರಿ ಮಂಡಲದಲ್ಲಿ ಸ್ಥಾನ ಪಡೆದಿರುವ ನಾವೆಲ್ಲರೂ, ಪಕ್ಷಾತೀತವಾಗಿ ಜನರ ರಾಜಕೀಯ ಒಲವನ್ನು ಪರಿಗಣಿಸದೇ ಒಟ್ಟಾಗಿ ಅಖಂಡ ಕರ್ನಾಟಕದ ಸಮಗ್ರ ಅಭಿವೃದ್ಧಿಗೆ ಶ್ರಮಿಸೋಣ. ಇದೇ ಪ್ರಜಾಪ್ರಭುತ್ವದ ಸತ್ವ-ಸಾರ’ ಎಂದು ಟ್ವೀಟ್ ಮೂಲಕ ಪರೋಕ್ಷವಾಗಿ ಬುದ್ಧಿವಾದ ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
NIA ವಿಶೇಷ ನ್ಯಾಯಾಲಯ; ಶರಣಾದ ಆರು ನಕ್ಸಲರಿಗೆ ಜ.31ರವರೆಗೆ ನ್ಯಾಯಾಂಗ ಬಂಧನ
Naxal; ರಾಜ್ಯದಲ್ಲಿ 99 % ನಕ್ಸಲಿಸಂ ಅಂತ್ಯಗೊಂಡಿದೆ: ಡಾ.ಜಿ.ಪರಮೇಶ್ವರ್
Dharwad: ಬಂದ್ ಹೆಸರಲ್ಲಿ ವ್ಯಾಪಾರಿಗೆ ಕಪಾಳಮೋಕ್ಷ?: ಕಾಲೇಜು ಪ್ರಾಧ್ಯಾಪಕರಿಗೆ ಅವಾಜ್
Shimoga: ತ್ಯಾವರೆಕೊಪ್ಪ ಧಾಮದಲ್ಲಿ ಮೃತಪಟ್ಟ ಹೆಣ್ಣು ಹುಲಿ ಅಂಜನಿ
Dharwad: ದಲಿತಪರ ಸಂಘಟನೆ ಕರೆ ನೀಡಿದ ಬಂದ್ ಗೆ ಮಿಶ್ರ ಪ್ರತಿಕ್ರಿಯೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.