ಸಚಿವ ಉಮೇಶ್ ಕತ್ತಿ ನಿಧನಕ್ಕೆ ಡಿ.ಕೆ. ಶಿವಕುಮಾರ್ ಸಂತಾಪ
Team Udayavani, Sep 7, 2022, 6:07 PM IST
ಬೆಂಗಳೂರು:ಆಹಾರ ಮತ್ತು ನಾಗರೀಕ ಸರಬರಾಜು ಸಚಿವ ಉಮೇಶ್ ಕತ್ತಿ ಅವರ ನಿಧನಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಂತಾಪ ಸೂಚಿಸಿದ್ದಾರೆ.
‘ರಾಜ್ಯ ವಿಧಾನ ಸಭೆಯ ಹಿರಿಯ ನಾಯಕರಾಗಿದ್ದ ಉಮೇಶ್ ಕತ್ತಿ ಅವರ ನಿಧನದ ಸುದ್ದಿ ಕೇಳಿ ಆಘಾತವಾಗಿದೆ. 25ನೇ ವಯಸ್ಸಿಗೆ ವಿಧಾನಸಭೆ ಪ್ರವೇಶಿಸಿದ್ದ ಅವರು ಉತ್ತರ ಕರ್ನಾಟಕದ ಗಟ್ಟಿ ಧ್ವನಿಯಾಗಿದ್ದರು.ಇದ್ದುದನ್ನು ಇದ್ದಂತೆ ಹೇಳುವ ನೇರ ನಡೆ-ನುಡಿಯ ವ್ಯಕ್ತಿತ್ವ ಹೊಂದಿದ್ದ ಉಮೇಶ್ ಕತ್ತಿ ಅವರು ಜನರ ಸಮಸ್ಯೆ, ಭಾವನೆಗಳಿಗೆ ಧ್ವನಿ ಆಗುವಾಗ ಆಡಳಿತ ಪಕ್ಷ, ವಿರೋಧ ಪಕ್ಷ ಎಂದು ಭೇದ ಮಾಡುತ್ತಿರಲಿಲ್ಲ. ಅದೇ ಕಾಲಕ್ಕೆ ಎಂಥದೇ ಗಂಭೀರ ಪರಿಸ್ಥಿತಿಯನ್ನು ನವಿರು ಹಾಸ್ಯದ ಮೂಲಕ ತಿಳಿಗೊಳಿಸುವ ಸ್ವಭಾವ ಅವರದಾಗಿತ್ತು. ಸಹಕಾರ ಕ್ಷೇತ್ರದಲ್ಲಿ ಉತ್ತಮ ಸೇವೆ ಸಲ್ಲಿಸುವ ಮೂಲಕ ತಮ್ಮದೇ ಆದ ಛಾಪು ಮೂಡಿಸಿದ್ದ ಕತ್ತಿ ಅವರು ತಮ್ಮ ಸುದೀರ್ಘ ರಾಜಕೀಯ ಜೀವನದಲ್ಲಿ ಹಲವು ಪ್ರಮುಖ ಖಾತೆಗಳನ್ನು ನಿಭಾಯಿಸಿದ್ದರು. ಸಕ್ಕರೆ ಉದ್ಯಮಕ್ಕೆ ಅವರ ಕೊಡುಗೆ ಮರೆಯುವಂತಿಲ್ಲ ಎಂದು ಹೇಳಿದ್ದಾರೆ.
ಕತ್ತಿ ಅವರ ಆತ್ಮಕ್ಕೆ ಶಾಂತಿ ಸಿಗಲಿ. ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಈ ಅಗಲಿಕೆ ನೋವು ಭರಿಸುವ ಶಕ್ತಿಯನ್ನು ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ’ ಎಂದು ಶಿವಕುಮಾರ್ ಅವರು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.