ಇನ್ನು ಹೊಸ ಬಡಾವಣೆ ನಿರ್ಮಿಸದಿರಲು ಗೃಹ ಮಂಡಳಿ ನಿರ್ಧಾರ
Team Udayavani, Jul 8, 2022, 6:12 AM IST
ಬೆಂಗಳೂರು: ಭೂ ಸ್ವಾಧೀನ ವೆಚ್ಚ ದುಬಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನು ಮುಂದೆ ಹೊಸ ಬಡಾವಣೆ ನಿರ್ಮಾಣ ಮಾಡದಿರಲು ಕರ್ನಾಟಕ ಗೃಹ ಮಂಡಳಿ ತೀರ್ಮಾನಿಸಿದೆ.
ಬಡಾವಣೆ ನಿರ್ಮಾಣಕ್ಕೆ ಅಗತ್ಯ ಜಮೀನು ಸಿಗುತ್ತಿಲ್ಲ. ಜತೆಗೆ ಭೂಮಿ ದರ ಹೆಚ್ಚಳಗೊಂಡಿದೆ. ಹೀಗಾಗಿ, ಗೃಹ ಮಂಡಳಿ ವತಿಯಿಂದ ಬಡಾವಣೆ ರಚನೆ ಕಷ್ಟ. ಆದರೆ ಕನಿಷ್ಠ 50 ಎಕರೆ ಜಮೀನು ಇರುವ ಮಾಲಕರು ಮುಂದೆ ಬಂದರೆ ಖಾಸಗಿ ಸಹಭಾಗಿತ್ವದಲ್ಲಿ ಬಡಾವಣೆ ನಿರ್ಮಾಣ ಮಾಡಲಾಗುವುದು ಎಂದು ವಸತಿ ಸಚಿವ ವಿ.ಸೋಮಣ್ಣ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಖಾಸಗಿ ಸಹಭಾಗಿತ್ವದಲ್ಲಿ ನಗರ ಪ್ರದೇಶದಲ್ಲಿ ಶೇ.50:50, ಗ್ರಾಮೀಣ ಭಾಗದಲ್ಲಿ ಶೇ. 60:40 ಆಧಾರದಲ್ಲಿ ಬಡಾವಣೆ ನಿರ್ಮಿಸಲಾಗುವುದು ಎಂದು ಹೇಳಿದರು.
ಈ ಹಿಂದೆ ಗೃಹ ಮಂಡಳಿ ರಚನೆ ಮಾಡಿದ್ದ ಬಡಾವಣೆಗಳಲ್ಲಿ 6,015 ನಿವೇಶಗಳನ್ನು ಮೂರು ತಿಂಗಳಲ್ಲಿ ವಿತರಣೆಗೆ ಸಮಯ ನಿಗದಿ ಮಾಡಲಾಗಿದೆ. ಮೈಸೂರು, ಬಳ್ಳಾರಿ, ವಿಜಯಪುರ, ಗದಗ, ನೆಲಮಂಗಲ ಸೇರಿ ರಾಜ್ಯದ ವಿವಿಧೆಡೆ ನಿವೇಶನಕ್ಕಾಗಿ ಅರ್ಜಿ ಸಲ್ಲಿಸಿರುವವರಿಗೆ ಲಾಟರಿ ಮೂಲಕ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
1,967 ಮನೆ ಹಂಚಿಕೆ:
ಬೆಂಗಳೂರಿನಲ್ಲಿ ಮುಖ್ಯಮಂತ್ರಿಗಳ ಒಂದು ಲಕ್ಷ ಮನೆ ಯೋಜನೆಯಡಿ 48 ಸಾವಿರ ಮನೆಗಳ ನಿರ್ಮಾಣ ಭರದಿಂದ ಸಾಗಿದ್ದು, 1,967 ಮನೆಗಳನ್ನು ಈ ತಿಂಗಳಲ್ಲಿ ಹಂಚಿಕೆ ಮಾಡಲಾಗುವುದು. ಈ ವರ್ಷದಲ್ಲಿ 20 ಸಾವಿರ ಮನೆ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದರು.
ಬಲವಂತದ ಭೂಸ್ವಾಧೀನ ಇಲ್ಲ; ಸಚಿವ ನಿರಾಣಿ :
ಬೆಂಗಳೂರು: ಯಾವುದೇ ಕಾರಣಕ್ಕೂ ಕೈಗಾರಿಕೆ ಉದ್ದೇಶಕ್ಕೆ ರೈತರಿಂದ ಬಲವಂತವಾಗಿ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ. ಇದರಲ್ಲಿ ಯಾವುದೇ ಅನುಮಾನ ಬೇಡ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಮುರುಗೇಶ್ ನಿರಾಣಿ ರೈತರಿಗೆ ಭರವಸೆ ನೀಡಿದರು. ಗುರುವಾರ ಕರ್ನಾಟಕ ಉದ್ಯೋಗ ಮಿತ್ರ ಕಚೇರಿಯಲ್ಲಿ ಅವರು ಈ ವಿಷಯ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
MUST WATCH
ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !
ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ
ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಹೊಸ ಸೇರ್ಪಡೆ
ISRO ಮುಂದೆ ಪ್ರಮುಖ ಕಾರ್ಯ ಯೋಜನೆಗಳಿವೆ: ನೂತನ ಅಧ್ಯಕ್ಷ ವಿ.ನಾರಾಯಣನ್
Mollywood: ನಟಿ ಹನಿ ರೋಸ್ ವಿರುದ್ಧ ಅಶ್ಲೀಲ ಪದ ಬಳಕೆ; ಖ್ಯಾತ ಉದ್ಯಮಿ ಪೊಲೀಸ್ ವಶಕ್ಕೆ
OnePlus 13 ಮತ್ತು 13R ಬಿಡುಗಡೆ: ಹೊಸ ವೈಶಿಷ್ಟ್ಯಗಳ ಪವರ್ ಹೌಸ್ ಫೋನ್
Fraud: ಸಿಬಿಐ ಹೆಸರಲ್ಲಿ ಕಾರ್ಕಳದ ಮಹಿಳೆಗೆ 24 ಲಕ್ಷ ರೂ. ವಂಚನೆ
Caught On Cam!;ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ: Video
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.