ಪಂಚಮಸಾಲಿ ಸಮುದಾಯಕ್ಕೆ ಮಂತ್ರಿಸ್ಥಾನ ನೀಡಿ
Team Udayavani, Jun 6, 2018, 6:00 AM IST
ಬೆಂಗಳೂರು: ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಲಿಂಗಾಯತ ಕೋಟಾದಡಿ ಪಂಚಮಸಾಲಿ ಸಮುದಾಯದ ಶಾಸಕರಿಗೆ ಸಚಿವ ಸ್ಥಾನ ನೀಡಬೇಕು
ಮತ್ತು ಲಿಂಗಾಯತರಲ್ಲಿ ಒಬ್ಬರಿಗೆ ಉಪ ಮುಖ್ಯಮಂತ್ರಿ ಸ್ಥಾನ ನೀಡಬೇಕೆಂದು ಕೂಡಲ ಸಂಗಮ ಪಂಚಮಸಾಲಿ ಪೀಠದ ಬಸವ ಜಯ
ಮೃತ್ಯುಂಜಯ ಸ್ವಾಮೀಜಿ ಒತ್ತಾಯಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮಿಶ್ರ ಸರ್ಕಾರದಲ್ಲಿ 20 ಮಂದಿ ಲಿಂಗಾಯತ ಸಮುದಾಯದ ಶಾಸಕರಿದ್ದಾರೆ. ಕಾಂಗ್ರೆಸ್ ನಿಂದ 16, ಜೆಡಿಎಸ್‌ನಿಂದ ನಾಲ್ವರು ಲಿಂಗಾಯತ ಸಮುದಾಯದ ಶಾಸಕರು ಆಯ್ಕೆಯಾಗಿದ್ದಾರೆ.
ಇವರಲ್ಲಿ ಪಂಚಮಸಾಲಿ ಸಮುದಾಯದ ಶಿವಾನಂದ ಪಾಟೀಲ್, ಎಂ.ವೈ. ಪಾಟೀಲ್, ಗಣೇಶ್ ಹುಕ್ಕೇರಿ, ಲಕ್ಷ್ಮೀ ಹೆಬ್ಟಾಳ್ಕರ್ ಹಾಗೂ ಮಹೇಶ್ ಕಮಠಳ್ಳಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿದ್ದು, ಎಂ.ಸಿ. ಮನಗೂಳಿ ಜೆಡಿಎಸ್‌ನಿಂದ ಆಯ್ಕೆಯಾಗಿದ್ದಾರೆ. ಹೀಗಾಗಿ ಲಿಂಗಾಯತ ಸಮುದಾಯದಲ್ಲಿ ಹೆಚ್ಚು ಜನಸಂಖ್ಯೆ ಹೊಂದಿರುವ ಪಂಚಮಸಾಲಿ ಸಮುದಾಯದ ಶಾಸಕರಿಗೆ ಆದ್ಯತೆ ನೀಡುವಂತೆ ಸ್ವಾಮೀಜಿ ಮನವಿ ಮಾಡಿದ್ದಾರೆ. ಈಗಾಗಲೇ ಈ ಕುರಿತು ಉಪ ಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ಹಾಗೂ ಮಾಜಿ ಪ್ರಧಾನಿ ಎಚ್ .ಡಿ.ದೇವೇಗೌಡರಿಗೆ ಮನವಿ ಸಲ್ಲಿಸಲಾಗಿದ್ದು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಹಿಂದೆ ಜೆ.ಎಚ್.ಪಟೇಲ್, ಧರ್ಮಸಿಂಗ್, ಕುಮಾರಸ್ವಾಮಿ, ಸಿದ್ದರಾಮಯ್ಯ ಸರ್ಕಾರದಲ್ಲಿ ಪಂಚಮಸಾಲಿ ಸಮುದಾಯಕ್ಕೆ ಹೆಚ್ಚಿನ
ಸ್ಥಾನ ನೀಡಿದ್ದರು. ಅದರಂತೆ ಈ ಬಾರಿಯೂ ಹೆಚ್ಚಿನ ಸ್ಥಾನ ನೀಡುವ ವಿಶ್ವಾಸ ಇದೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBMP ಸೇರಿ 11 ಮಸೂದೆ ಮಂಡನೆ? ಡಿ. 9ರ ಬೆಳಗಾವಿ ಅಧಿವೇಶನದಲ್ಲಿ ಮಂಡನೆಗೆ ನಿರ್ಣಯ
Karnataka Govt,.: ಸಂಪುಟ ಹುತ್ತಕ್ಕೆ ಈಗಲೇ ಕೈಹಾಕಲು ಸಿಎಂ ನಿರಾಸಕ್ತಿ?
Karnataka Govt.,: ದಿಲ್ಲಿಯಲ್ಲಿ ಸಂಪುಟ ರಹಸ್ಯ; ಹೈಕಮಾಂಡ್ ಭೇಟಿ ಸಾಧ್ಯತೆ
DA Hike: ಸರಕಾರಿ ನೌಕರರಿಗೆ ಶೇ. 2 ತುಟ್ಟಿ ಭತ್ಯೆ ಹೆಚ್ಚಳ… ಸಿಎಂಗೆ ಅಭಿನಂದನೆ
DK Shivakumar: ಮಹದಾಯಿ, ಮೇಕೆದಾಟು ಯೋಜನೆ ಅನುಮತಿಗೆ ದಿಲ್ಲಿಯಲ್ಲಿ ಡಿಕೆಶಿ ಲಾಬಿ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.