ಶಾಸಕ ಆನಂದ್‌ಸಿಂಗ್‌ಗೆ ಕಣ್ಣಿನ ಚಿಕಿತ್ಸೆ


Team Udayavani, Jan 25, 2019, 1:15 AM IST

65.jpg

ಬೆಂಗಳೂರು: ಈಗಲ್‌ಟನ್‌ ರೆಸಾರ್ಟ್‌ನಲ್ಲಿ ನಡೆದ ಮಾರಾಮಾರಿಯಿಂದ ಗಾಯಗೊಂಡು ಶೇಷಾದ್ರಿಪುರಂನ ಅಪೊಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಶಾಸಕ ಆನಂದ್‌ಸಿಂಗ್‌ಗೆ ನಾರಾಯಣ ನೇತ್ರಾಲಯದಲ್ಲಿ ಪರೀಕ್ಷೆ ನಡೆಸಲಾಗಿದೆ.

ಹಲ್ಲೆಯಿಂದ ಕಣ್ಣಿಗೂ ಗಂಭೀರ ಗಾಯ ಆಗಿರುವ ಹಿನ್ನೆಲೆಯಲ್ಲಿ ಆನಂದ್‌ಸಿಂಗ್‌ ಅವರಿಗೆ ನಾರಾಯಣ ನೇತ್ರಾಲಯದಲ್ಲಿ ನೇತ್ರ ಪರೀಕ್ಷೆ ನಡೆಸಿ ನಂತರ ಮತ್ತೆ ವಾಪಸ್‌ ಅಪೋಲೋ ಆಸ್ಪತ್ರೆಗೆ ಕಳುಹಿಸಲಾಗಿದೆ. ಆನಂದ್‌ಸಿಂಗ್‌ ಅವರ ಕಣ್ಣು ಸುತ್ತುವರಿದ ಮೂಳೆ ಹಾನಿಗೊಂಡಿರುವುದರಿಂದ ಅವರ ಬಲಗಣ್ಣು ಗಾಯಗೊಂಡು ಕೆಲ ಕೋನಗಳಲ್ಲಿ ಎರಡು ನೋಟ ಕಾಣುತ್ತಿದೆ. ಅವರಿಗೆ ಹೊರಗಿನ ರಕ್ತಸ್ರಾವವೂ ಆಗಿದ್ದು ಅದು ಗುಣವಾಗಲು 10 ರಿಂದ 15 ದಿನಗಳು ಬೇಕಾಗುತ್ತದೆ. ಗಾಯದಿಂದ ಅವರ ಎರಡೂ ಕಣ್ಣಿನ ರೆಪ್ಪೆಗಳು ಊದಿಕೊಂಡಿವೆ. ಆದರೆ, ದೃಷ್ಟಿಗೆ ಯಾವುದೇ ಹಾನಿಯುಂಟಾಗಿಲ್ಲ. ಒಂದು ವಾರದ ಚಿಕಿತ್ಸೆ ನೀಡಿ ನಂತರ ಅವರ ಸ್ಥಿತಿಯನ್ನು ಮತ್ತೆ ಪರೀಕ್ಷಿಸಲಾಗುತ್ತದೆ. ಸುಧಾರಣೆಯಾಗದೆ ಇದ್ದಲ್ಲಿ ಶಸ್ತ್ರಚಿಕಿತ್ಸೆ ನಡೆಸಬೇಕಾಗುತ್ತದೆ ಎಂದು ವೈದ್ಯರು ತಿಳಿಸಿದ್ದಾರೆ.

ಆನಂದ್‌ಸಿಂಗ್‌ ಅವರಿಗೆ ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಿರುವುದು, ನಾರಾಯಣ ನೇತ್ರಾಲಯದಲ್ಲಿ ಪರೀಕ್ಷೆ ನಡೆಸಿರುವುದನ್ನು ನೋಡಿದರೆ ಮಾರಾಮಾರಿಯಲ್ಲಿ ತೀವ್ರವಾಗಿಯೇ ಗಾಯಗೊಂಡಿರುವುದು ಸಾಬೀತಾಗಿದೆ. ಈ ಮಧ್ಯೆ, ನಾರಾಯಣ ನೇತ್ರಾಲಯದ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕ ಡಾ.ಭುಜಂಗ ಶೆಟ್ಟಿ ಅವರು ಮಾತನಾಡಿ, ಆನಂದ್‌ಸಿಂಗ್‌ ಅವರಿಗೆ ತಪಾಸಣೆ ನಡೆಸಿ ಸಲಹೆ ನೀಡಲಾಗಿದೆ. ಒಂದು ವಾರದ ಚಿಕಿತ್ಸೆ ನಂತರ ಮತ್ತೆ ಪರೀಕ್ಷೆ ಮಾಡಿ ಅಗತ್ಯ ಬಿದ್ದರೆ ಶಸ್ತ್ರಚಿಕಿತ್ಸೆ ಮಾಡಲಿದ್ದೇವೆ ಎಂದು ತಿಳಿಸಿದ್ದಾರೆ.

ಅಮಾನತು ವಾಪಸ್‌ ಪಡೆಯುವಂತೆ ಬೆಂಬಲಿಗರ ಮನವಿ

ಶಾಸಕ ಆನಂದ್‌ ಮೇಲೆ ಹಲ್ಲೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಪಕ್ಷದಿಂದ ಅಮಾನತುಗೊಂಡಿರುವ ಕಂಪ್ಲಿ ಶಾಸಕ ಜೆ.ಎನ್‌.ಗಣೇಶ್‌ ಅವರ ಮೇಲಿನ ಅಮಾನತು ಆದೇಶವನ್ನು ವಾಪಸ್‌ ಪಡೆಯುವಂತೆ ಅವರ ಬೆಂಬಲಿಗರು ಗುರುವಾರ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನು ಭೇಟಿ ಮಾಡಿ ಮನವಿ ಮಾಡಿದ್ದಾರೆ.

ಕಂಪ್ಲಿ ಕ್ಷೇತ್ರದ ಕಾರ್ಯಕರ್ತರು ಯುವ ಮುಖಂಡ ಜಗದೀಶ್‌ ನೇತೃತ್ವದಲ್ಲಿ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಅವರನ್ನು ಅವರ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿ, ಆನಂದ್‌ ಸಿಂಗ್‌ ಹಾಗೂ ಗಣೇಶ್‌ ನಡುವೆ ಉತ್ತಮ ಬಾಂಧವ್ಯ ಇದೆ. ಇಬ್ಬರೂ ಸಹೋದರರ ರೀತಿ ಇದ್ದಾರೆ. ರೆಸಾರ್ಟ್‌ನಲ್ಲಿ ಆಗಿರುವ ಘಟನೆ ದುರದೃಷ್ಠಕರ. ಈಗ ಅವರನ್ನು ಪಕ್ಷದಿಂದ ಅಮಾನತು ಮಾಡಿರುವುದು ಪಕ್ಷದ ಕಾರ್ಯಕರ್ತರಾಗಿ ನಮಗೆ ಆತಂಕವುಂಟು ಮಾಡಿದೆ ಎಂದು ತಮ್ಮ ಅಳಲು ತೋಡಿಕೊಂಡಿದ್ದಾರೆ.

ಅಲ್ಲದೇ ಅವರನ್ನು ಅಮಾನತು ಮಾಡಿರುವುದರಿಂದ ಲೋಕಸಭೆ ಚುನಾವಣೆಯಲ್ಲಿ ನಾವು ಹೇಗೆ ಕೆಲಸ ಮಾಡುವುದು ಎಂಬ ಗೊಂದಲ ಉಂಟಾಗಿದೆ. ಹೀಗಾಗಿ, ಅವರಿಬ್ಬರನ್ನೂ ಕರೆಸಿ ಸಂಧಾನ ಮಾಡಿ, ಅವರ ಮೇಲಿನ ಅಮಾನತು ಆದೇಶ ವಾಪಸ್‌ ಪಡೆಯುವಂತೆ ಮನವಿ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ಭೇಟಿ ಬಳಿಕ ಮಾತನಾಡಿದ ಜಗದೀಶ್‌, ಶಾಸಕ ಆನಂದ್‌ ಸಿಂಗ್‌ ಹಾಗೂ ಗಣೇಶ್‌ ಇಪ್ಪತ್ತು ವರ್ಷಗಳಿಂದಲೂ ಸ್ನೇಹಿತರು. ಇಬ್ಬರೂ ಅಣ್ಣ ತಮ್ಮಂದಿರಂತಿದ್ದರು. ಆದರೆ, ಯಾಕೆ ಹೀಗೆ ಗಲಾಟೆ ಮಾಡಿಕೊಂಡಿದ್ದಾರೋ ಗೊತ್ತಿಲ್ಲ. ಪಕ್ಷದಿಂದ ಅವರನ್ನು ಅಮಾನತು ಮಾಡಿದ್ದಾರೆ. ಇದರಿಂದ ನಮಗೆ ಸಾಕಷ್ಟು ಆತಂಕವಾಗಿದೆ ಎಂದರು. ನಂತರ, ಕೆಪಿಸಿಸಿ ಅಧ್ಯಕ್ಷ ದಿನೇಶ್‌ ಗುಂಡೂರಾವ್‌ ಅವರನ್ನೂ ಪಕ್ಷದ ಕಚೇರಿಯಲ್ಲಿ ಭೇಟಿ ಮಾಡಿ ಅಮಾನತು ಆದೇಶ ವಾಪಸ್‌ ಪಡೆಯುವಂತೆ ಮನವಿ ಮಾಡಿದರು.

ಕಂಪ್ಲಿ ಗಣೇಶ್‌ ಶೀಘ್ರ ಬಂಧನ: ಪರಮೇಶ್ವರ್‌

ಈ ಮಧ್ಯೆ, ಸುದ್ದಿಗಾರರ ಜೊತೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್‌, ಕಂಪ್ಲಿ ಶಾಸಕ ಗಣೇಶ್‌ ನಾಪತ್ತೆ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ಎಫ್ಐಆರ್‌ ದಾಖಲು ಮಾಡಿ ಹುಡುಕುತ್ತಿದ್ದಾರೆ. ಆದಷ್ಟು ಬೇಗ ಬಂಧನವಾಗಬಹುದು ಎಂದು ತಿಳಿಸಿದರು. ರೆಸಾರ್ಟ್‌ನಲ್ಲಿ ನಡೆದ ಘಟನೆ ಬಗ್ಗೆ ನನ್ನ ನೇತೃತ್ವದಲ್ಲಿ ಸಮಿತಿ ರಚಿಸಲಾಗಿದ್ದು, ಹೈಕಮಾಂಡ್‌ಗೆ ವರದಿ ನೀಡಲಾಗುವುದು. ವರದಿ ಕೊಟ್ಟ ನಂತರ ಹೈಕಮಾಂಡ್‌ ಮುಂದಿನ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

ಹಲ್ಲೆ ಹಿಂದೆ ಬಿಜೆಪಿ?

ಉಡುಪಿ: ಶಾಸಕ ಗಣೇಶ್‌ ಮತ್ತು ಆನಂದ ಸಿಂಗ್‌ ವೈಯಕ್ತಿಕ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಇದಕ್ಕೆ ಪಕ್ಷ ಏನು ಮಾಡೋಕ್ಕಾಗುತ್ತೆ ಎಂದು ಸಚಿವೆ ಡಾ. ಜಯಮಾಲಾ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗಾರರ ಜೊತೆ ಮಾತನಾಡಿ, ಶಾಸಕ ಗಣೇಶ್‌ ಮತ್ತು ಆನಂದ ಸಿಂಗ್‌ ವೈಯಕ್ತಿಕ ವಿಚಾರವಾಗಿ ಹೊಡೆದಾಡಿಕೊಂಡಿದ್ದಾರೆ. ಬೇರೆ ಪಕ್ಷದವರು ಕೂಡ ಹೊಡೆದಾಡಿಕೊಳ್ಳುವುದಿಲ್ಲವೆ? ಇದರ ಹಿಂದೆ ಬೇರೆಯವರ ಕೈ ಕೂಡ ಇರಬಹುದು. ಬಿಜೆಪಿ ಯವರೇ ಮಾಡಿರಬಹುದಲ್ಲವೆ? ಯಾರೇ ಹೊಡೆದಾಡಿ ಕೊಂಡರೂ ನಾವ್ಯಾರೂ ಬೆಂಬಲಿಸುವುದಿಲ್ಲ ಎಂದರು.

ಗಣೇಶ ಹಾಗೂ ಆನಂದ ಸಿಂಗ್‌ ಇಬ್ಬರೂ ಸ್ನೇಹಿತರು. ಸ್ನೇಹಿತರ ಮಧ್ಯೆ ಸಣ್ಣ ಪುಟ್ಟ ಜಗಳ ಬರುವುದು ಸಹಜ. ಹೊಡೆದಾಟಕ್ಕೆ ಸಂಬಂಧಿಸಿ ಈಗಾಗಲೇ ಗಣೇಶ ಅವರು ಆನಂದ ಸಿಂಗ್‌ ಬಳಿ ಕ್ಷಮೆ ಕೇಳಿದ್ದಾರೆ. ಈ ಘಟನೆ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನಿಂದ ಅವರ ಉಚ್ಚಾಟನೆಯನ್ನೂ ಮಾಡಲಾಗಿದೆ. ಆನಂದ ಸಿಂಗ್‌ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪೊಲೀಸರು ಗಣೇಶ ಅವರನ್ನು ಹುಡುಕುತ್ತಿದ್ದಾರೆ. ಆದಷ್ಟು ಬೇಗ ಪೊಲೀಸರು ಅವರನ್ನು ಬಂಧಿಸಲಿದ್ದಾರೆ. ಕಾನೂನು ಎಲ್ಲರಿಗೂ ಒಂದೇ. ● ಜಮೀರ್‌ ಅಹಮದ್‌ ಖಾನ್‌, ಸಚಿವ

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

ಶಾಸಕರ ನಿವಾಸಕ್ಕೆ ಮುತ್ತಿಗೆ ಹಾಕಲು ಸಿದ್ಧತೆ.. ದಲಿತ ಮುಖಂಡರನ್ನು ವಶಕ್ಕೆ ಪಡೆದ ಪೊಲೀಸರು

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

Vijayapura: ಅಪಹರಿಸಿದ ಮಗು ಮರಳಿಸಿದ ಅಪರಿಚಿತ!: ಕಂದಮ್ಮನ ಕಿಡ್ನ್ಯಾಪ್ ಕೇಸ್‌ ಸುಖಾಂತ್ಯ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.