ವಾಲ್ಮೀಕಿ ನಿಗಮದ ಅಕ್ರಮದಲ್ಲಿ ಪಾತ್ರವಿಲ್ಲ: ಶಾಸಕ ದದ್ದಲ್ ಸ್ಪಷ್ಟನೆ
Team Udayavani, Jun 8, 2024, 10:44 PM IST
ರಾಯಚೂರು: ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ ನಡೆದಿದೆ ಎನ್ನಲಾದ ಅಕ್ರಮದಲ್ಲಿ ನನ್ನ ಪಾತ್ರವಿರುವ ದಾಖಲೆಗಳಿದ್ದರೆ ತನಿಖಾ ಸಂಸ್ಥೆಗೆ ಒದಗಿಸುವಂತೆ ಶಾಸಕ ಬಸನಗೌಡ ದದ್ದಲ್ ತಾಕೀತು ಮಾಡಿದ್ದಾರೆ.
ದದ್ದಲ್ ಅವರೇ ನಿಗಮದ ಅಧ್ಯಕ್ಷರಾಗಿರುವುದರಿಂದ ಅವರ ಅನುಮತಿ ಇಲ್ಲದೆ ಇಷ್ಟೊಂದು ಹಣ ಹೇಗೆ ವರ್ಗಾವಣೆಯಾಗಲು ಸಾಧ್ಯ ಎಂಬ ವಿಪಕ್ಷ ಆರೋಪಕ್ಕೆ ಪ್ರತಿಕ್ರಿಯಿಸಿರುವ ದದ್ದಲ್, ನಾನು ಅಧ್ಯಕ್ಷನಾದ ಕೆಲವೇ ದಿನಗಳಲ್ಲಿ ಲೋಕಸಭೆ ಚುನಾವಣೆಯ ನೀತಿ ಸಂಹಿತೆ ಜಾರಿಯಾಯಿತು. ಹೀಗಾಗಿ ಈವರೆಗೆ ಯಾವುದೇ ಹಣದ ವಹಿವಾಟು ನಡೆದಿಲ್ಲ. ಈ ಅಕ್ರಮಕ್ಕೂ ನನಗೂ ಸಂಬಂಧವಿಲ್ಲ. ಆದರೆ ಕೆಲವು ಪಟ್ಟಭದ್ರ ಹಿತಾಸಕ್ತಿಗಳು ದುರುದ್ದೇಶದಿಂದ ನನ್ನ ಹೆಸರನ್ನು ತಳಕು ಹಾಕುವ ಮೂಲಕ ಷಡ್ಯಂತ್ರ ರೂಪಿಸುತ್ತಿದ್ದಾರೆ. ಪರಿಶಿಷ್ಟ ಪಂಗಡ ಮೀಸಲಾತಿಯಡಿ ಗೆಲುವು ಸಾಧಿ ಸಿರುವ ನಾನು ಯಾವುದೇ ಕಾರಣಕ್ಕೂ ಎಸ್‌ಟಿ ಸಮುದಾಯಕ್ಕೆ ಎರಡು ಬಗೆಯಲಾರೆ. ವಾಲ್ಮೀಕಿ ಸಮಾಜ ನನ್ನ ಮೇಲಿಟ್ಟಿರುವ ವಿಶ್ವಾಸಕ್ಕೆ ಎಂದೂ ದ್ರೋಹ ಬಗೆಯುವ ಚಿಂತನೆ ಮಾಡಿಲ್ಲ ಎಂದಿದ್ದಾರೆ.
ಯೂನಿಯನ್ ಬ್ಯಾಂಕ್ ನೀಡಿದ ದೂರಿನ ಮೇರೆಗೆ ಸಿಬಿಐ ಈಗಾಗಲೇ ಅಕ್ರಮ ಹಣ ವರ್ಗಾವಣೆ ತನಿಖೆ ಆರಂಭಿಸಿದೆ. ಪ್ರಕರಣಕ್ಕೆ ಸಂಬಂಧಿಸಿ ಈವರೆಗೆ ಐವರನ್ನು ಬಂ ಧಿಸಲಾಗಿದೆ. ನಿಗಮದ ಹಣ ಯಾರೇ ಕಬಳಿಸಲು ಯತ್ನಿಸಿದರೂ ತನಿಖೆಯಲ್ಲಿ ಸತ್ಯ ಬಯಲಾಗಲಿದೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಜರಗಲಿದೆ. ಇಲ್ಲಿ ಯಾರನ್ನೂ ರಕ್ಷಿಸುವ ಮಾತೇ ಇಲ್ಲ. ನನ್ನ ವಿರುದ್ಧ ಆರೋಪಿಸುವವರಲ್ಲಿ ದಾಖಲೆಗಳಿದ್ದರೆ ಅವುಗಳನ್ನು ತನಿಖಾ ತಂಡಕ್ಕೆ ಕೊಡಲಿ ಎಂದು ಅವರು ಹೇಳಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.