ಕಂಪ್ಲಿ ಗಣೇಶ್ ಜಾಮೀನು ಅರ್ಜಿ: ಪೊಲೀಸರಿಗೆ ನೋಟಿಸ್
Team Udayavani, Apr 2, 2019, 6:35 AM IST
ಬೆಂಗಳೂರು: ವಿಜಯನಗರ (ಹೊಸಪೇಟೆ) ಕ್ಷೇತ್ರದ ಶಾಸಕ ಆನಂದ್ ಸಿಂಗ್ ಮೇಲಿನ ಹಲ್ಲೆ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕಂಪ್ಲಿ ಶಾಸಕ ಜೆ.ಎನ್. ಗಣೇಶ್ ಸಲ್ಲಿಸಿರುವ ಜಾಮೀನು ಅರ್ಜಿ ವಿಚಾರವಾಗಿ ಹೈಕೋರ್ಟ್ ಸೋಮವಾರ ಬಿಡಿದಿ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೊಳಿಸಿದೆ.
ಜಾಮೀನು ಕೋರಿ ಶಾಸಕ ಗಣೇಶ್ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ಬಿ.ಎ. ಪಾಟೀಲ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ಪ್ರತಿವಾದಿಗಳಾದ ಬಿಡದಿ ಪೊಲೀಸ್ ಠಾಣಾಧಿಕಾರಿಗೆ ನೋಟಿಸ್ ಜಾರಿಗೆ ಆದೇಶಿಸಿ ವಿಚಾರಣೆಯನ್ನು ಏ.8ಕ್ಕೆ ಮುಂದೂಡಿತು.
ವಿಚಾರಣೆ ವೇಳೆ ಗಣೇಶ್ ಪರ ವಕೀಲರು ವಾದ ಮಂಡಿಸಿ, ಅರ್ಜಿದಾರರು ಶಾಸಕರಾಗಿದ್ದು, ಲೋಕಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿ ಪರ ಕ್ಷೇತ್ರದಲ್ಲಿ ಪ್ರಚಾರ ಕೈಗೊಳ್ಳಬೇಕಿದೆ. ಹಾಗಾಗಿ ಜಾಮೀನು ಮಂಜೂರು ಮಾಡಬೇಕು ಎಂದು ನ್ಯಾಯಪೀಠವನ್ನು ಕೋರಿದರು. ವಾದ ಆಲಿಸಿದ ನ್ಯಾಯಪೀಠ, ವಿಚಾರಣೆ ಮುಂದೂಡಿತು.
ಈ ಪ್ರಕರಣದಲ್ಲಿ ಜಾಮೀನು ಕೋರಿ ಶಾಸಕ ಗಣೇಶ್ ಸಲ್ಲಿಸಿದ್ದ ಅರ್ಜಿಯನ್ನು ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಮಾ.25ರಂದು ವಜಾಗೊಳಿಸಿತ್ತು. ಆ ಹಿನ್ನೆಲೆಯಲ್ಲಿ ಅವರು ಜಾಮೀನು ಕೋರಿ ಹೈಕೋರ್ಟ್‌ಗೆ ಮೊರೆ ಹೋಗಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Namma Metro; ಡಿಸೆಂಬರ್ 31ರಂದು ಮಧ್ಯರಾತ್ರಿ 2 ಗಂಟೆಯವರೆಗೆ ಮೆಟ್ರೋ ಸಂಚಾರ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
Hubli: ಮನೆ ದರೋಡೆಗೆ ಯತ್ನಿಸಿದ ದರೋಡಕೋರನ ಕಾಲಿಗೆ ಗುಂಡೇಟು
Davangere: ಉತ್ತಮ ಹಿಂಗಾರು: ಬಂಪರ್ ಇಳುವರಿ ನಿರೀಕ್ಷೆಯಲ್ಲಿ ಬೆಳೆಗಾರರು
Honey Trap; ಗುತ್ತಿಗೆದಾರನನ್ನು ಟೀಗೆ ಕರೆದು ಖೆಡ್ಡಾಕ್ಕೆ ಕೆಡವಿದಳು!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.