ಕಾಫಿ ಮಂಡಳಿ ರದ್ದುಪಡಿಸುವಂತೆ ವಿಧಾನಸಭೆಯಲ್ಲಿ ಶಾಸಕ ಎಂ.ಪಿ.ಕುಮಾರಸ್ವಾಮಿ ಆಗ್ರಹ
Team Udayavani, Sep 20, 2022, 5:31 PM IST
ಬೆಂಗಳೂರು: ಕಾಫಿನಾಡಿನ ರೈತರಿಗೆ ಉಪಯೋಗವಿಲ್ಲದ ಈಗಾಗಲೇ ಅಸ್ತಿತ್ವದಲ್ಲಿರುವ ಕಾಫಿ ಅಭಿವೃದ್ಧಿ ಮಂಡಳಿಯನ್ನು ರದ್ದುಗೊಳಿಸಬೇಕು ಎಂದು ಮೂಡಿಗೆರೆ ಶಾಸಕ ಎಂ.ಪಿ.ಕುಮಾರಸ್ವಾಮಿ ಹೇಳಿದ್ದಾರೆ.
ವಿಧಾನಸಭೆಯಲ್ಲಿಂದು ಶೂನ್ಯ ವೇಳೆಯಲ್ಲಿ ಈ ವಿಷಯ ಪ್ರಸ್ತಾಪಿಸಿ ಮಾತನಾಡಿದ ಅವರು, ಕಾಫಿ ಅಭಿವೃದ್ಧಿ ಮಂಡಳಿಯಿಂದ 2018ರಿಂದ ಕಾಫಿ ಬೆಳೆ ರೈತರಿಗೆ ಇದುವರೆಗೂ ಯಾವುದೇ ಅತಿವೃಷ್ಟಿ ಪರಿಹಾರ ಬಂದಿಲ್ಲ, ಈ ಬಾರಿ ಮಲೆನಾಡು ಭಾಗದಲ್ಲಿ ಶೇ 33ರಷ್ಟು ಮಳೆಯಾಗಿದೆ ಎಂದು ಕೃಷಿ, ಕಂದಾಯ ಇಲಾಖೆ, ತೋಟಗಾರಿಕಾ ಇಲಾಖೆ ವರದಿ ನೀಡಿದೆ. ಆದರೆ ಕಾಫಿ ಅಭಿವೃದ್ಧಿ ಮಂಡಳಿ ಶೇ 22ರಷ್ಟು ಮಳೆಯಾಗಿದೆ ಎಂದು ವರದಿ ನೀಡಿದೆ. ಆದರೆ ಈ ಬಾರಿ ಮಲೆನಾಡು ಭಾಗದಲ್ಲಿ ಅತ್ಯಧಿಕ ಮಳೆಯಾಗಿದೆ ಈ ರೀತಿ ಸುಳ್ಳು ವರದಿ ನೀಡಿ ಜನರ ಹಾದಿ ತಪ್ಪಿಸುವುದು ಸರಿಯಲ್ಲ ಎಂದು ತಿಳಿಸಿದರು.
ಕಾಫಿ ಅಭಿವೃದ್ಧಿ ಮಂಡಳಿಯಿಂದ ಯಾವುದೇ ಉಪಯೋಗವಿಲ್ಲ, ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ತಮ್ಮನ್ನು ನಿರ್ಲಕ್ಷಿಸಿವೆ ಎಂಬ ಆತಂಕದಲ್ಲಿ ಬೆಳೆಗಾರರು ಇದ್ದಾರೆ. ಕಾಫಿಯಿಂದ ಈ ಹಿಂದೆ ವಾರ್ಷಿಕವಾಗಿ ವಿದೇಶಿ ವಿನಿಮಯದಿಂದ ಐದು ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತಿತು, ಪ್ರಸ್ತುತ 9 ಸಾವಿರ ಕೋಟಿ ರೂಪಾಯಿ ಆದಾಯ ಪಡೆಯಲಾಗುತ್ತದೆ ಎಂದು ಹೇಳಿದರು.
ಕಾಫಿಯನ್ನು ದೊಡ್ಡ ಉದ್ಯಮ, ವಾಣಿಜ್ಯ ಬೆಳೆಯನ್ನಾಗಿ ಪರಿಗಣಿಸಿರುವುದು ಸರಿಯಲ್ಲ. ಇದನ್ನು ಕೃಷಿ ಬೆಳೆಯನ್ನಾಗಿ ಪರಿಗಣಿಸಿದರೆ ರೈತರಿಗೆ ಸರ್ಕಾರದ ಸವಲತ್ತುಗಳು ದೊರೆಯಲಿದೆ. ಕೇಂದ್ರ ಫಸಲ್ ಬೀಮಾ ಯೋಜನೆಯ ವ್ಯಾಪ್ತಿಯಲ್ಲಿ ತರಬೇಕು ಎಂದು ಆಗ್ರಹಿಸಿದರು.
ಮಲೆನಾಡು ಭಾಗದಲ್ಲಿ ಪ್ರತಿವರ್ಷ ಹೆಚ್ಚು ಪ್ರಮಾಣದ ಮಳೆಯಾಗಿ ರೈತರು ಸಾಕಷ್ಟು ನಷ್ಟ ಅನುಭವಿಸುತ್ತಿದ್ದಾರೆ. ಚಿಕ್ಕಮಗಳೂರು, ಮಡಿಕೇರಿ, ಹಾಸನ ಜಿಲ್ಲೆಯನ್ನು ಅತಿವೃಷ್ಢಿ ಪ್ರದೇಶ ಎಂದು ಘೋಷಿಸಬೇಕು ಎಂದು ಒತ್ತಾಯಿಸಿದರು
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
ಗಾಂಧಿ ಭಾರತ್ ಕಾರ್ಯಕ್ರಮದ ಬಗ್ಗೆ ಶೆಟ್ಟರ್ ಅಪಸ್ವರ ತೆಗೆದಿದ್ದು ದುರ್ದೈವ – ಎಚ್ ಕೆ ಪಾಟೀಲ
Congress ಅಧಿವೇಶನದ ಶತಮಾನೋತ್ಸವ ಕಾರ್ಯಕ್ರಮ ದೇಶದ ಇತಿಹಾಸದ ಒಂದು ಐತಿಹಾಸಿಕ ಕಾರ್ಯಕ್ರಮ
Vijayapura: ಬಿಜೆಪಿಯಲ್ಲಿ ನಾಯಕತ್ವದ ಕೊರತೆಯಿಲ್ಲ; ಮೋದಿ ನಂತರ ಯೋಗಿ ಎಂದ ಯತ್ನಾಳ್
Haveri: ಕಾರುಗಳ ನಡುವೆ ಭೀಕರ ಅಪಘಾತ; ನಾಲ್ವರ ದುರ್ಮರಣ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.