ಶಾಸಕ ರಾಜುಗೌಡಗೆ ಮಾತೃ ವಿಯೋಗ
Team Udayavani, Jan 14, 2020, 3:04 AM IST
ನಾರಾಯಣಪುರ: ಎರಡು ತಿಂಗಳಿನಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಸುರಪುರ ಕ್ಷೇತ್ರದ ಶಾಸಕ ನರಸಿಂಹನಾಯಕ (ರಾಜುಗೌಡ) ಅವರ ತಾಯಿ ತಿಮ್ಮಮ್ಮ ಶಂಭನ ಗೌಡ (64) ಸೋಮವಾರ ಚಿಕಿತ್ಸೆ ಫಲಿಸದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಮೃತರು ಪತಿ, ನಿವೃತ್ತ ಅಬಕಾರಿ ಡಿವೈಎಸ್‌ಪಿ ಶಂಭನಗೌಡ ಪಾಟೀಲ, ಪುತ್ರರಾದ ಸುರಪುರ ಶಾಸಕ ರಾಜುಗೌಡ, ಆರ್‌ಟಿಜೆ ಶಿಕ್ಷಣ ಸಂಸ್ಥೆ ಅಧ್ಯಕ್ಷ ಹಣಮಂತನಾಯಕ (ಬಬಲುಗೌಡ) ಹಾಗೂ ಪುತ್ರಿ ಚೈತ್ರಾ ಸೇರಿ ಬಂಧುಗಳನ್ನು ಅಗಲಿದ್ದಾರೆ. ಮಂಗಳವಾರ ಮಧ್ಯಾಹ್ನ 12:30ಕ್ಕೆ ಸ್ವಗ್ರಾಮ ಕೊಡೇಕಲ್ ಸ್ವಂತ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ತಿಮ್ಮಮ್ಮ ಶಂಭನಗೌಡ ನಿಧನಕ್ಕೆ ಹುಣಸಿಹೊಳೆ ಕಣ್ವಮಠ ಶ್ರೀ ವಿದ್ಯಾಕಣ್ವ ವಿರಾಜತೀರ್ಥರು, ಸ್ಥಳೀಯ ಮಹಲಿನಮಠದ ಪೀಠಾಧಿ ಪತಿ ವೃಷಬೇಂದ್ರ ಅಪ್ಪ, ವಿರಕ್ತಮಠದ ಶಿವಕುಮಾರ ಸ್ವಾಮೀಜಿ, ದೇವಪುರ ಶ್ರೀ, ಕಕ್ಕೇರಾ ಶ್ರೀ, ಗುಳಬಾಳ ಶ್ರೀ, ಶಿವಶರಣೆಯರಾದ ಸಾತಮ್ಮ ತಾಯಿ ಸೇರಿದಂತೆ ಮಠಾಧೀಶರು, ಗಣ್ಯರು ಸಂತಾಪ ವ್ಯಕ್ತಪಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Chikkaballapur: 5 ವರ್ಷದಲ್ಲಿ 514 ತಾಯಿ-ಮಗು ಸಾವಿನ ಪ್ರಕರಣ!
ಪರ್ಯಾಯ ಶ್ರೀ ಪುತ್ತಿಗೆ ಶ್ರೀಕೃಷ್ಣ ಮಠ: ಸ್ಮೃತಿ ಪ್ರತಿಭಾ,ಗೀತಾ ತ್ರಯೋದಶಾವಧಾನ’ ಸಂಪನ್ನ
Video: ನ್ಯಾಯ ಕೇಳಲು ಬಂದ ವ್ಯಕ್ತಿಗೆ ಖಾಕಿಯಿಂದ 41 ಸೆಕೆಂಡ್‌ಗಳಲ್ಲಿ 31 ಬಾರಿ ಕಪಾಳ ಮೋಕ್ಷ
Atlee Kumar; ಸಲ್ಮಾನ್ ಖಾನ್ ಜತೆಗೆ ಅಟ್ಲಿ ಸಿನಿಮಾ
ಪ್ರಧಾನ ಸಂಪಾದಕ ನ್ಯೂಯಾರ್ಕ್ ನ ಬೆಂಕಿ ಬಸಣ್ಣ ವಿರಚಿತ ‘ವಿಶ್ವಕನ್ನಡ ಕೂಟಗಳ ಕೈಪಿಡಿ’ ಬಿಡುಗಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.