![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
![Delhi-Stamp](https://www.udayavani.com/wp-content/uploads/2025/02/Delhi-Stamp-415x249.jpg)
Team Udayavani, Oct 24, 2021, 4:11 PM IST
ವಿಜಯಪುರ: ಸಿದ್ದರಾಮಯ್ಯ ಅವರನ್ನು ಅಲ್ಪಸಂಖ್ಯಾತ ವಿರೋಧಿ ಎಂದು ಟೀಕಿಸುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಅಲ್ಪಸಂಖ್ಯಾತ ನಿಜವಾದ ವಿರೋಧಿ. ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವುದೇ ಅವರ ಗುರಿಯಾಗಿದೆ ಎಂದು ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ ಖಾನ್ ಜೆಡಿಎಸ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಭಾನುವಾರ ಸಿಂದಗಿ ವಿಧಾನಸಭೆ ಚುನಾವಣೆ ಪ್ರಚಾರದ ಸಂದರ್ಭದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎಚ್.ಡಿ. ದೇವೇಗೌಡರು ಕೂಡ ಅಲ್ಪಸಂಖ್ಯಾತರ ವಿರೋಧಿಯಲ್ಲ. ಕುಮಾರಸ್ವಾಮಿ ಮಾತ್ರ ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಕುಟುಕಿದರು.
ಇದನ್ನೂ ಓದಿ:ನಾನು ಹಿಂದೆ ಕಸ ಸಂಗ್ರಹಿಸುವ ಗುತ್ತಿಗೆ ಪಡೆದು ವ್ಯಾಸಂಗ ಮಾಡಿದವ:ಎಚ್ ಡಿಕೆ
ಕುಮಾರಸ್ವಾಮಿ ಅವರಿಗೆ ಇದ್ದಕ್ಕಿದ್ದಂತೆ ಉಪ ಚುನಾವಣೆ ಸಂದರ್ಭದಲ್ಲಿ ಅಲ್ಪಸಂಖ್ಯಾತರ ಮೇಲೆ ಪ್ರೀತಿ ಉಕ್ಕುತ್ತಿದೆ. ಅಲ್ಪಸಂಖ್ಯಾತರ ಮತಗಳ ವಿಭಜನೆಗಾಗಿ ಉಪ ಚುನಾವಣೆಯಲ್ಲಿ ಸಿಂದಗಿ, ಹಾನಗಲ್ ಕ್ಷೇತ್ರಗಳಲ್ಲಿ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಿ ರಾಜಕೀಯವಾಗಿ ಬಲಿಕೊಡುವ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಾ ಪ್ರಹಾರ ನಡೆಸಿದರು.
ಅಲ್ಪಸಂಖ್ಯಾತರನ್ನು ರಾಜಕೀಯವಾಗಿ ಮುಗಿಸುವ ಕೆಲಸವನ್ನು ಕುಮಾರಸ್ವಾಮಿ ಹಿಂದಿನಿಂದಲೇ ಮಾಡುತ್ತಾ ಬರುತ್ತಿದ್ದಾರೆ. ಈ ಬಗ್ಗೆ ದೊಡ್ಡ ಇತಿಹಾಸವೇ ಇದೆ ಎಂದು ಹರಿಹಾಯ್ದರು.
Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್
Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್
Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
You seem to have an Ad Blocker on.
To continue reading, please turn it off or whitelist Udayavani.