ನಿರ್ಮಾಪಕನ ಜೊತೆ ಶಾಸಕನ ಪುತ್ರಿ ನಾಪತ್ತೆ
Team Udayavani, Mar 8, 2018, 11:21 AM IST
ಬೆಂಗಳೂರು : ಮಾಯಕೊಂಡ ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿ ಲಕ್ಷ್ಮೀ ನಾಯ್ಕ್ ಮಾಸ್ತಿಗುಡಿ ಚಿತ್ರದ ನಿರ್ಮಾಪಕ ಪಿ.ಸುಂದರ್ ಗೌಡ ಜೊತೆ ನಾಪತ್ತೆಯಾಗಿರುವ ಘಟನೆ ಸಂಭವಿಸಿದೆ.
ಲಕ್ಷ್ಮೀ ನಾಯ್ಕ್ ಪೋಷಕರು ಪುತ್ರಿಯನ್ನು ಹುಡುಕಿಕೊಡುವಂತೆ ಯಲಹಂಕ ನ್ಯೂಟೌನ್ ಪೊಲೀಸ್ ಠಾಣೆಯಲ್ಲಿ ಪ್ರಕರಣವನ್ನು ದಾಖಲುಮಾಡಲಾಗಿದೆ.
ಶಾಸಕ ಶಿವಮೂರ್ತಿ ನಾಯ್ಕ್ ಪುತ್ರಿಗೆ ಮದುವೆ ನಿಶ್ಚಯವಾಗಿತ್ತು ಎಂದು ಹೇಳಲಾಗಿದೆ. ಇದರ ಬೆನ್ನಲ್ಲೇ ಶಾಸಕರ ಪುತ್ರಿ ಮಾಸ್ತಿಗುಡಿ ಚಿತ್ರ ನಿರ್ಮಾಪಕ ಪಿ ಸುಂದರ್ ಗೌಡ ಜೊತೆ ನಾಪತ್ತೆಯಾಗಿದ್ದರೆಂದು ಪೋಷಕರು ಠಾಣೆಯಲ್ಲಿ ದೂರು ನೀಡಿದ್ದಾರೆ.
ನಾವು ಮದುವೆಯಾಗಲು ಹೋಗುತ್ತಿದ್ದೇವೆ: ಈ ಪ್ರಕರಣಕ್ಕೆ ಸಂಬಂಧಿಸಿ ಶಾಸಕರ ಪುತ್ರಿ ತಮ್ಮ ಸ್ನೇಹಿತರಿಗೆ ಕರೆಮಾಡಿ ನಾವು ಮದುವೆಯಾಗಲು ಮೈಸೂರಿಗೆ ಹೋಗುತ್ತಿದ್ದೇವೆ ಎಂದು ತಿಳಿಸಿದ್ದು ಬೆಳಕಿಗೆ ಬಂದಿದೆ, ಪ್ರಕರಣದ ಬೆನ್ನು ಹತ್ತಿದ ಪೊಲೀಸರು ಮೈಸೂರಿಗೆ ಪ್ರಯಾಣ ಬೆಳೆಸಿದ್ದಾರೆ ಎಂದು ತಿಳಿದುಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಬ್ಬಾಳ್ಕರ್‌ಗೆ ರವಿ ಅಶ್ಲೀಲ ಪದ ಬಳಸಿದ್ದು ನಿಜ: ಯತೀಂದ್ರ ಹೇಳಿಕೆ
MLA ಮುನಿರತ್ನ ವಿರುದ್ಧ ಮತ್ತೊಂದು ಜಾತಿ ನಿಂದನೆ ಪ್ರಕರಣ
BJP; ವಿಜಯೇಂದ್ರ ವಿರುದ್ಧ ಧ್ವನಿ ಎತ್ತಿದ್ದು ಬಿ.ಪಿ. ಹರೀಶ್ ಮಾತ್ರ!
High Court: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಲು ವಿಫಲ: ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್
Kalaburagi: ಬಂಧನಕ್ಕೆ ಹೋದ ಪೊಲೀಸರ ಮೇಲೆ ಹಲ್ಲೆಗೆ ಯತ್ನ, ಆರೋಪಿಗೆ ಗುಂಡೇಟು