ಗ್ಯಾರಂಟಿ ಯೋಜನೆಗಳಿಂದ ಸಿದ್ದರಾಮಯ್ಯ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ: ಎಚ್ ವಿಶ್ವನಾಥ್
Team Udayavani, Jun 19, 2024, 3:07 PM IST
ಮೈಸೂರು: ಸಿದ್ದರಾಮಯ್ಯ ಅವರ ಸರ್ಕಾರ ಆರ್ಥಿಕವಾಗಿ ದಿವಾಳಿಯಾಗಿದೆ. ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕಾಗಿ ಪರದಾಡುತ್ತಿದೆ. ಇದರ ಬದಲು ಎಲ್ಲಿ, ಯಾವ ಕ್ಷೇತ್ರದಲ್ಲಿ ಸಮಸ್ಯೆಗಳು ಇವೆಯೋ ಅದಕ್ಕೆ ಪರಿಹಾರ ಕಂಡುಕೊಂಡಿದ್ದರೇ ಸಾಕಾಗಿತ್ತು ಎಂದು ಎಂಎಲ್ಸಿ ಎಚ್ ವಿಶ್ವನಾಥ್ ಹೇಳಿದರು.
ಮೈಸೂರಿನ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿಯುದ್ದೇಶಿಸಿ ಮಾತನಾಡಿದ ಎಚ್ ಅವರು, ಈ ಎಲ್ಲಾ ಗ್ಯಾರಂಟಿಗಳ ಬದಲು ಶಿಕ್ಷಣ ಹಾಗು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚು ಗಮನ ಹರಿಸಬೇಕಿತ್ತು. 1 ರಿಂದ 12ನೇ ತರಗತಿವರೆಗೆ ಉಚಿತ ಶಿಕ್ಷಣ ಕೊಡುವ ಕೆಲಸ ಮಾಡಬೇಕಿತ್ತು. ಲಕ್ಷಾಂತರ ರೂಪಾಯಿ ಕೊಟ್ಟು ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಮಕ್ಕಳನ್ನು ಸೇರಿಸಿ ಪೋಷಕರು ಪರದಾಡುತ್ತಾರೆ. ಉಚಿತ ಆರೋಗ್ಯದ ಜೊತೆಗೆ ಉಚಿತ ಶಿಕ್ಷಣ ನೀಡಬೇಕಿತ್ತು. ಗ್ಯಾರಂಟಿ ಯೋಜನೆಗಳ ಬದಲು ಎಲ್ಲರಿಗೂ ಉಚಿತ ಶಿಕ್ಷಣ ಯೋಜನೆ ಜಾರಿಗೊಳಿಸಲಿ. 65 ಸಾವಿರ ಕೋಟಿ ಖರ್ಚು ಮಾಡಿ ಅದಕ್ಕೊಬ್ಬ ಉಸ್ತುವಾರಿ, ಜಿಲ್ಲೆಗೊಬ್ಬ ಉಸ್ತುವಾರಿ ಕೊಟ್ಟು ಹಣ ದುರುಪಯೋಗ ಮಾಡುತ್ತಿರುವುದು ಸರಿಯಲ್ಲ ಎಂದು ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗಳ ಬಗ್ಗೆ ಅಸಮಧಾನ ವ್ಯಕ್ತಪಡಿಸಿದರು.
ರಾಜ್ಯದಲ್ಲಿ ಆರ್ಥಿಕ ವ್ಯವಸ್ಥೆ ಸಂಪೂರ್ಣ ದಿಕ್ಕು ತಪ್ಪಿದೆ. 14,15 ಬಾರಿ ಬಜೆಟ್ ಮಂಡಿಸಿರುವ ಮುಖ್ಯಮಂತ್ರಿಗಳು ಹಿಂದೆ ತಿರುಗಿ ನೋಡಿಲ್ಲ. ಎಸ್ಟಾಬ್ಲಿಸ್ಮೆಂಟ್ ಗೆ 50% ಡೆವಲಪ್ಮೆಂಟ್ ಗೆ 50% ಅನುದಾನ ಮೀಸಲಿಡಬೇಕು. ರಾಜ್ಯದಲ್ಲಿ ಬಜೆಟ್ ಅನುದಾನ ಅನಾವಶ್ಯಕವಾಗಿ ಸೋರಿಕೆ ಯಾಗುತ್ತಿದೆ. ಇಲಾಖೆಗಳಲ್ಲಿ ಹಣ ದಿಕ್ಕಾಪಾಲಾಗಿ ಪೋಲಾಗುತ್ತಿದೆ. ಎಸ್ಟಾಬ್ಲಿಸ್ಮೆಂಟ್ ಗೆ 70% ಹೋಗ್ತಾ ಇದೆ. ಡೆವಲಪ್ಮೆಂಟ್ ಗೆ ಕೇವಲ 30% ಹೋಗುತ್ತಿದೆ. ನೀವ್ಯಾವ ಸೀಮೆಯ ಹಣಕಾಸು ಸಚಿವ ಮಿಸ್ಟರ್ ಸಿದ್ದರಾಮಯ್ಯ. ರಾಜ್ಯ ಸರ್ಕಾರದ ಆರ್ಥಿಕ ನೀತಿ ದುರ್ಬಲವಾಗಿದೆ. ವಿವೇಚನಾ ರಹಿತವಾದ ನಿರ್ಧಾರಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಎಂದು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ರಾಜ್ಯದ ಆರ್ಥಿಕ ಪರಿಸ್ಥಿತಿ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಬೇಕು. ಗ್ಯಾರಂಟಿ ಯೋಜನೆಗಳ ಅನುಷ್ಠಾನದಿಂದಾಗಿ ಬೇರಾವುದೇ ಅಭಿವೃದ್ಧಿ ಕಾರ್ಯಗಳು ನಡೆಯುತ್ತಿಲ್ಲ. ಹಾಗಾಗಿ ರಾಜ್ಯ ಸರ್ಕಾರ ಗ್ಯಾರಂಟಿ ಯೋಜನೆಗೆ ಬಳಕೆಯಾಗುತ್ತಿರುವ ಹಣ ಎಷ್ಟು? ಅಭಿವೃದ್ಧಿ ಕಾರ್ಯಗಳಿಗೆ ಬಳಕೆಯಾದ ಹಣ ಎಷ್ಟು ಎಂಬುದರ ಬಗ್ಗೆ ಶ್ವೇತಪತ್ರ ಹೊರಡಿಸಬೇಕು ಎಂದು ಆಗ್ರಹಿಸಿದರು.
ರಾಜ್ಯ ಸರ್ಕಾರದ ವತಿಯಿಂದ ಯಾವುದೇ ಹುದ್ದೆಗಳು ಭರ್ತಿಯಾಗುತ್ತಿಲ್ಲ. ಖಾಲಿ ಹುದ್ದೆಗಳನ್ನು ತುಂಬುವ ಬದಲು, ಹೊರ ಗುತ್ತಿಗೆ ಆಧಾರದ ಮೇಲೆ ಸಂಬಳ ನೀಡಿ ಕೆಲಸ ಮಾಡಿಸುತ್ತಿದ್ದಾರೆ. ಇದರ ಟೆಂಡರನ್ನು ಮಂತ್ರಿಗಳ, ರಾಜಕಾರಣಿಗಳ ಸಂಬಂಧಿಕರಿಗೆ ಕೊಟ್ಟಿರುತ್ತಾರೆ. ಲೇಬರ್ ಆಕ್ಟ್ ಪ್ರಕಾರ 18 ಸಾವಿರ ಕೊಡಬೇಕು. ಆದರೆ, ಹೊರ ಗುತ್ತಿಗೆಯಲ್ಲಿ ಕೆಲಸ ಮಾಡುವ ನೌಕರನಿಗೆ ಕೊಡೋದೆ 12 ಸಾವಿರ, ಉಳಿದ 6 ಸಾವಿರ ಗುತ್ತಿಗೆದಾರನಿಗೆ ಹೋಗುತ್ತದೆ. ಇದರಲ್ಲೂ ಸರ್ಕಾರದ ಹಣ ಲೂಟಿ ಮಾಡುತ್ತಾರೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಆಡಳಿತ ನಡೆಸುವಲ್ಲಿ ವಿಫಲವಾಗಿದೆ. ಜಿಎಸ್ಟಿ ಎನ್ನುವುದು ಪ್ರತಿ ಹೆಜ್ಜೆಯಲ್ಲೂ ಜನ ಸಾಮಾನ್ಯರಿಗೆ ಬೀಳುತ್ತಿದೆ. ನಮ್ಮ ಮುಖ್ಯಮಂತ್ರಿಗಳು ಬುದ್ಧಿವಂತರು, ಆದರೂ ಸರ್ಕಾರದ ನೀತಿ ನಿಯಮಗಳನ್ನೇ ಉಲ್ಲಂಘನೆ ಮಾಡುತ್ತಿದ್ದಾರೆ ಎಂದರು.
ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಬಂಧನ ವಿಚಾರದ ಬಗ್ಗೆ ಮಾತನಾಡಿದ ಅವರು, ನಮ್ಮ ನಾಡು ಕಲೆ, ಸಂಸ್ಕೃತಿ, ಸಂಗೀತ, ಸಾಹಿತ್ಯ ಕ್ಷೇತ್ರದಲ್ಲಿ ಹೆಸರಾದುದು. ಕಲಾವಿದರಿಗೆ ಸಾಂಸ್ಕೃತಿಕ ಲೋಕದವರಿಗೆ ಅನುಕರಣೀಯ, ಆಧರಿಣೀಯವಾದವರು ಡಾ ರಾಜಕುಮಾರ್. ಅವರನ್ನು ನೋಡಿಕೊಂಡು ಕಲಿಯಲಿಲ್ಲ ಎಂದರೆ ಹೇಗೆ. ದರ್ಶನ್ ಬಗ್ಗೆ ಮಾತನಾಡಿ ನಾನೇಕೆ ಸಾಕ್ಷಿ ಹೇಳಲು ಹೋಗಿ ನಿಲ್ಲಬೇಕು. ದರ್ಶನ್ ಬಗ್ಗೆ ನಾನು ಏನನ್ನೂ ಹೇಳುವುದಿಲ್ಲ. ಕಳೆದ 2014ರ ಲೋಕಸಭಾ ಚುನಾವಣೆ ಸಂದರ್ಭದಲ್ಲಿ ನಟ ದರ್ಶನ್ ನನ್ನ ಪರವಾಗಿ ಪ್ರಚಾರ ಮಾಡಿದ್ದರು. ಆಗ ದರ್ಶನ್ ಅವರ ತಾಯಿ ಕಾಂಗ್ರೆಸ್ ನಲ್ಲಿ ಇದ್ದರು. ಹಾಗಾಗಿ ನಟ ದರ್ಶನ್ ನನ್ನ ಪರವಾಗಿ ಮೈಸೂರಿನಿಂದ ಕೊಡಗಿನವರೆಗೂ ಪ್ರಚಾರ ಮಾಡಿದರು ಎಂದು ಹಳೆಯ ದಿನಗಳನ್ನು ಸ್ಮರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
Naxalites; ಶರಣಾಗತಿ ಪ್ಯಾಕೇಜ್ ಬೆಚ್ಚಿಬೀಳಿಸಿದೆ: ಸುನಿಲ್ ಕುಮಾರ್ ತೀವ್ರ ಆಕ್ರೋಶ
Raichur; ಜೆಸ್ಕಾಂ ಜೆ.ಇ ಹುಲಿರಾಜ ಮನೆ ಮೇಲೆ ಲೋಕಾಯುಕ್ತ ದಾಳಿ
Naxal ಶರಣಾಗತಿ; ಚಿಕ್ಕಮಗಳೂರು ಡಿಸಿ ಕಚೇರಿ ಸುತ್ತಮುತ್ತ ಬಿಗಿ ಭದ್ರತೆ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Naxalites ಶರಣಾಗತಿಯಲ್ಲಿ ಟ್ವಿಸ್ಟ್; ಚಿಕ್ಕಮಗಳೂರು ಬದಲು ಬೆಂಗಳೂರಿನಲ್ಲಿ ನಕ್ಸಲರ ಶರಣಾಗತಿ
Belagavi: ತಹಶೀಲ್ದಾರ್ ಮನೆ ಮೇಲೆ ಲೋಕಾಯುಕ್ತ ದಾಳಿ
ISRO: ಇಸ್ರೋ ನೂತನ ಅಧ್ಯಕ್ಷರಾಗಿ ವಿ.ನಾರಾಯಣನ್ ನೇಮಕ: ಚಿನ್ನದ ಪದಕ ವಿಜೇತ VN ಪರಿಚಯ…
Sandalwood: ಸ್ಪಾನ್ಸರ್ಸ್ ಇದಿದ್ರೆ ನಾನ್ಯಾಕೆ 12 ವರ್ಷ ಕಷ್ಟಪಡಬೇಕಿತ್ತು: ರಚಿತಾ ರಾಮ್
Bengaluru: ಪಾಲುದಾರನ ಕಿರುಕುಳ: ಉದ್ಯಮಿ ಆತ್ಮಹತ್ಯೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.