ಜೈಲುಗಳಲ್ಲಿ ಇನ್ನು ಸಿಬಂದಿಗೂ ಮೊಬೈಲ್ ನಿಷೇಧ!
ಮುಖ್ಯ ಅಧೀಕ್ಷಕರು, ಅಧೀಕ್ಷಕರಿಗೆ ಮಾತ್ರ ಅವಕಾಶ; ಅಕ್ರಮ ತಡೆಯಲು ಈ ಕ್ರಮ
Team Udayavani, Oct 20, 2021, 6:05 AM IST
ಸಾಂದರ್ಭಿಕ ಚಿತ್ರ.
ಬೆಂಗಳೂರು: ಜೈಲುಗಳಲ್ಲಿ ನಡೆಯುವ ಎಲ್ಲ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಕಾರಾಗೃಹ ಮತ್ತು ಸುಧಾರಣ ಸೇವೆಗಳ ಇಲಾಖೆ ಮುಂದಾಗಿದೆ.
ಬೆಂಗಳೂರಿನ ಕೇಂದ್ರ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಪ್ರಾಯೋಗಿಕವಾಗಿ ಈ ಪ್ರಕ್ರಿಯೆ ಆರಂಭವಾಗಿದ್ದು, ಜೈಲಿನ ಮುಖ್ಯ ಅಧೀಕ್ಷಕರು, ಅಧೀಕ್ಷಕರಿಗೆ ಮಾತ್ರ ಮೊಬೈಲ್ ಬಳಕೆಗೆ ಅವಕಾಶವಿರಲಿದೆ. ಕಾರಾಗೃಹದ ಮುಂಭಾಗದಲ್ಲೇ “ಮೊಬೈಲ್, ಲ್ಯಾಪ್‌ಟಾಪ್ ಮತ್ತು ಇತರ ಎಲೆಕ್ಟ್ರಾನಿಕ್ ವಸ್ತುಗಳ ಸಹಿತ ನಿಷೇಧಿತ ವಸ್ತುಗಳನ್ನು ಜೈಲಿನ ಒಳಗೆ ಕೊಂಡೊಯ್ಯುವಂತಿಲ್ಲ’ ಎಂಬ ಸೂಚನೆ ಫಲಕ ಹಾಕಲಾಗಿದೆ. ಇದೇ ಮಾದರಿಯ ಕ್ರಮಗಳನ್ನು ದಾವಣಗೆರೆ, ಮೈಸೂರು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬಳ್ಳಾರಿ ಸಹಿತ ರಾಜ್ಯದ ಎಲ್ಲ ಕಾರಾಗೃಹಗಳಲ್ಲಿಯೂ ಅಳವಡಿಸಲಾಗುತ್ತದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬುಲೆಟ್‌ಪ್ರೂಫ್ ಗಾಜು
ವಿಚಾರಣಾಧೀನ ಅಥವಾ ಸಜಾ ಕೈದಿಗಳ ಭೇಟಿಗೆ ಬರುವವರು ಕೈದಿಗಳನ್ನು ದೈಹಿಕವಾಗಿ ಮುಟ್ಟಿ ಮಾತಾಡಲು ಅವಕಾಶ ನಿರಾಕರಿಸಲಾಗಿದೆ. ಅದಕ್ಕಾಗಿ ಈ ವಿಭಾಗದಲ್ಲಿ ಬುಲೆಟ್‌ಪ್ರೂಫ್ ಗಾಜು ಅಳವಡಿಸಲಾಗಿದ್ದು, ದೂರವಾಣಿ ಸಂಪರ್ಕ ನೀಡಲಾಗಿದೆ. ಈ ಅಂತರದಲ್ಲಿಯೇ ಕೈದಿಗಳ ಸಂಬಂಧಿಗಳು ಮಾತನಾಡಬೇಕಾಗಿದೆ. ಒಮ್ಮೆಲೆ 10 ಕೈದಿಗಳಿಗೆ ಸಾಧ್ಯವಾಗುವಂತೆ ಇದನ್ನು ಸಿದ್ಧಪಡಿಸಲಾಗಿದೆ ಎಂದು ಜೈಲಿನ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ:ಬಾಂಗ್ಲಾ ಹಿಂದುಗಳ ರಕ್ಷಣೆಗೆ ಸಿಎಎ ಬೇಕು: ಕಾಂಗ್ರೆಸ್ ನಾಯಕ ಮಿಲಿಂದ್ ದೇವ್ರಾ!
ಯಾಕೆ ಈ ಮಾರ್ಪಾಡು?
ನಾನಾ ರೀತಿಯ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿ ಜೈಲು ವಾಸ ಅನುಭವಿಸುತ್ತಿರುವ ಸಜಾಕೈದಿಗಳು ಮತ್ತು ವಿಚಾರಣಾಧೀನ ಕೈದಿಗಳು ಜೈಲಿನಲ್ಲಿದ್ದೇ ಗಾಂಜಾ, ಗುಟ್ಕಾ ಸೇವನೆ, ಮೊಬೈಲ್ ಬಳಸಿಕೊಂಡು ಹೊರಗೆ ನಡೆಯುವ ಅಪರಾಧ ಪ್ರಕರಣಗಳಲ್ಲಿ ಪರೋಕ್ಷವಾಗಿ ಭಾಗಿಯಾಗುತ್ತಿದ್ದಾರೆ. ಮೊಬೈಲ್ ಮೂಲಕ ಜೀವ ಬೆದರಿಕೆ, ಕೊಲೆ, ಕೊಲೆ ಯತ್ನ, ವಂಚನೆ ಎಸಗುತ್ತಿದ್ದಾರೆ ಎಂಬುದು ಬೆಳಕಿಗೆ ಬಂದಿತ್ತು. ಇತ್ತೀಚೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿ ಸಿಮ್ ಕಾರ್ಡ್‌ಗಳು, ಮೊಬೈಲ್, ಗಾಂಜಾ ವಶಕ್ಕೆ ಪಡೆದುಕೊಂಡಿದ್ದರು.
ಇದರ ಬೆನ್ನಲ್ಲೇ ಪರಪ್ಪನ ಅಗ್ರಹಾರ ಕಾರಾಗೃಹದ ಮುಖ್ಯ ಅಧೀಕ್ಷಕ ರಂಗನಾಥ್ ಈ ಹೊಸ ಆದೇಶ ಹೊರಡಿಸಿದ್ದಾರೆ.
ಜೈಲಿನ ಒಳಗೆ ಪ್ರವೇಶಿಸುವ ಮೊದಲು ಎಲ್ಲರೂ ಮೊಬೈಲ್, ಸಿಮ್ ಕಾರ್ಡ್‌ಗಳು, ಚಾರ್ಜರ್‌ಗಳು, ಲ್ಯಾಪ್‌ಟಾಪ್, ನಗದು ಮತ್ತಿತರ ನಿಷೇಧಿತ ವಸ್ತುಗಳನ್ನು ಕಡ್ಡಾಯವಾಗಿ ಕೆಎಸ್‌ಐಎಸ್‌ಎಫ್ ಕಚೇರಿಯಲ್ಲಿ ಇಡಬೇಕು. ಖಾಸಗಿ ವಾಹನಗಳಿಗೆ ಒಳಗಡೆ ಪ್ರವೇಶವಿಲ್ಲ. ಜೈಲಿಗೆ ಭೇಟಿ ನೀಡುವವರೂ ಮೊಬೈಲ್‌ಗಳನ್ನು ಕಚೇರಿಯಲ್ಲಿ ಇಡುವುದು ಕಡ್ಡಾಯ. ಜೈಲಿನ ಸಿಬಂದಿ ಮತ್ತು ಅಧಿಕಾರಿಗಳು ಜೈಲು ಪ್ರವೇಶಿಸಬೇಕಾದರೆ ಮೂರು ಹಂತಗಳಲ್ಲಿ ಕಡ್ಡಾಯವಾಗಿ ತಪಾಸಣೆಗೆ ಒಳಪಡಬೇಕಾಗುತ್ತದೆ.
-ಮೋಹನ್ ಭದ್ರಾವತಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
SPB: ಎಸ್‌ಪಿಬಿ ಸ್ಮಾರಕ ನಿರ್ಮಾಣಕ್ಕಾಗಿ ಡಿ.8ರಂದು ಸಂಗೀತ ಕಛೇರಿ
Sandalwood: ನಿಮ್ಮ ನಿರೀಕ್ಷೆಗೆ ನಾವು ಜವಾಬ್ದಾರರು: ʼನಾ ನಿನ್ನ ಬಿಡಲಾರೆ’ ಇಂದು ತೆರೆಗೆ
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
Pension Fraud: ಕಲ್ಯಾಣ ಪಿಂಚಣಿ ಲಪಟಾವಣೆ; ಸಿಕ್ಕಿ ಬಿದ್ದ 1,458 ಸರಕಾರಿ ಸಿಬಂದಿ
Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಯಶಸ್ಸು, ಅನಿರೀಕ್ಷಿತ ಧನಾಗಮ ಸಂಭವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.