Rain ರಾಜ್ಯದ ದಕ್ಷಿಣ-ಉತ್ತರ ಭಾಗದಲ್ಲಿ ತಂಪೆರೆದ ಮಳೆ; ಜನಜೀವನ ಅಸ್ತವ್ಯಸ್ತ
ದಕ್ಷಿಣ ಕನ್ನಡ, ಕೊಪ್ಪಳದಲ್ಲಿ ಸಿಡಿಲು ಬಡಿದು ಇಬ್ಬರು ಸಾವು ನಂಜನಗೂಡಿನಲ್ಲಿ ಮನೆ ಮೇಲೆ ಉರುಳಿದ ಬೃಹತ್ ಆಲದ ಮರ
Team Udayavani, May 11, 2024, 11:12 PM IST
ಹುಬ್ಬಳ್ಳಿ/ಬೆಂಗಳೂರು/ಮಣಿಪಾಲ: ರಾಜ್ಯದ ದಕ್ಷಿಣ ಹಾಗೂ ಉತ್ತರ ಭಾಗದ ಬಹುತೇಕ ಜಿಲ್ಲೆಗಳಲ್ಲಿ ಶನಿವಾರ ಧಾರಾಕಾರ ಮಳೆಯಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಕಡಬ ಹಾಗೂ ಕೊಪ್ಪಳದಲ್ಲಿ ಸಿಡಿಲು ಬಡಿದು ಇಬ್ಬರು ಸಾವನ್ನಪ್ಪಿದ್ದು, ಮೂವರು ಗಾಯಗೊಂಡಿದ್ದಾರೆ.
ಹುಬ್ಬಳ್ಳಿಯಲ್ಲಿ ಸುರಿದ ಮಳೆ ಸಾಕಷ್ಟು ಅವಘಡಗಳನ್ನೇ ಸೃಷ್ಟಿಸಿದ್ದು, ಬೆಳಗಾವಿ ಯಲ್ಲಿ ಬಿರುಗಾಳಿ ಸಹಿತ ಸುರಿದ ಮಳೆಗೆ ಜನಜೀವನ ಅಸ್ತವ್ಯಸ್ತಗೊಂಡಿತ್ತು.
ಬೆಳಗಾವಿ, ಧಾರವಾಡ, ಚಿಕ್ಕಮಗ ಳೂರು, ಚಿತ್ರದುರ್ಗ, ರಾಯಚೂರು ಹಾಗೂ ಉತ್ತರಕನ್ನಡ ಜಿಲ್ಲೆಯ ಹಲವೆಡೆ ಶನಿವಾರ ಗುಡುಗು-ಸಿಡಿಲು ಹಾಗೂ ಬಿರುಗಾಳಿ ಸಹಿತ ಸುರಿದ ಮಳೆಯಿಂದಾಗಿ ಮರ-ಗಿಡಗಳು ಧರೆಗುರುಳಿವೆ. ಅಂಗಡಿ-ಮುಂಗಟ್ಟು ಹಾಗೂ ಮನೆಗಳಿಗೆ ನೀರು ನುಗ್ಗಿ ಹಾನಿಯಾಗಿದೆ. ಹಲವೆಡೆ ರಸ್ತೆಗಳಲ್ಲೇ ನೀರು ಹರಿದು ಸಂಚಾರ ಅಸ್ತವ್ಯಸ್ತಗೊಂಡಿತ್ತು.
ಸಿಡಿಲಿಗೆ ಕಾರ್ಮಿಕ ಬಲಿ
ದಕ್ಷಿಣ ಕನ್ನಡ ಜಿಲ್ಲೆ ಕಡಬ ತಾಲೂಕಿನ ನೂಜಿಬಾಳ್ತಿಲ ಗ್ರಾಮದ ಬಳಿ ಸಿಡಿಲು ಬಡಿದು ಉತ್ತರ ಪ್ರದೇಶ ಮೂಲದ ಕಾರ್ಮಿಕ ಶ್ರೀಕಿಶನ್ (56) ಸಾವನ್ನಪ್ಪಿದ್ದು, ಬಿಹಾರ ಮೂಲದ ಇಬ್ಬರು ಕಾರ್ಮಿಕರು ಗಾಯಗೊಂಡಿದ್ದಾರೆ.
ಕೊಪ್ಪಳ ಜಿಲ್ಲೆಯ ತಾವರಾಗೇರಾ ಸಮೀಪದ ಹಿರೇಮುಕರ್ತನಾಳ ಗ್ರಾಮದ ಹೊಲದಲ್ಲಿ ಕುರಿಕಾಯು ತ್ತಿದ್ದ ಕನಕರಾಯಪ್ಪ ಕಾಟಾಪುರ ಸಿಡಿಲು ಬಡಿದು ಮೃತಪಟ್ಟಿದ್ದಾರೆ. ರಾಯಚೂರು ಜಿಲ್ಲೆಯ ಲಿಂಗಸುಗೂರು ತಾಲೂಕಿನ ಜಂಗಿರಾಂಪುರ ತಾಂಡಾದಲ್ಲಿ ಸಿಡಿಲು ಬಡಿದು ಹೊಲದಲ್ಲಿ ಕೆಲಸ ಮಾಡುತ್ತಿದ್ದ ಹನುಮಂತ ಮೇಘಪ್ಪ ಗಾಯಗೊಂಡಿದ್ದಾರೆ.
ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ, ಮೂಡಿಗೆರೆ, ಕಳಸ, ಕೊಪ್ಪ, ನರಸಿಂಹರಾಜಪುರ, ಶೃಂಗೇರಿ ಹಾಗೂ ಚಿಕ್ಕಮಗಳೂರು ನಗರದ ಕೆಲವೆಡೆ ಮಳೆಯಾಗಿದೆ. ಹುಬ್ಬಳ್ಳಿ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ಮಧ್ಯಾಹ್ನದ ವೇಳೆ ಆರಂಭವಾದ ಮಳೆ ರಾತ್ರಿವರೆಗೂ ಮುಂದುವರಿದಿತ್ತು. ಬಹುತೇಕ ಕಡೆ ರಸ್ತೆಗಳಲ್ಲೇ ನೀರು ಹರಿದು, ಜನ ಹಾಗೂ ವಾಹನ ಸಂಚಾರಕ್ಕೆ ಪರದಾಡಬೇಕಾಯಿತು. ಕೆಲವು ಅಡಿಗಳಷ್ಟು ನೀರು ನಿಂತಿದ್ದ ಪರಿಣಾಮ ದ್ವಿಚಕ್ರ ವಾಹನಗಳು ಅರ್ಧದಷ್ಟು ಮುಳುಗಿದ್ದವು. ಬೆಳಗಾವಿ ಜಿಲ್ಲೆಯಲ್ಲೂ ನಗರ ಸಹಿತ ಗ್ರಾಮೀಣ ಪ್ರದೇಶದಲ್ಲಿ ಭಾರೀ ಮಳೆಯಾಗಿದೆ. ಚಿತ್ರದುರ್ಗ ನಗರ ಹಾಗೂ ಉತ್ತರ ಕನ್ನಡ ಜಿಲ್ಲೆಯ ದಾಂಡೇಲಿಯಲ್ಲಿ ಸುರಿದ ಮಳೆ ಸಾಕಷ್ಟು ಅವಾಂತರಗಳನ್ನೇ ಸೃಷ್ಟಿಸಿದೆ.
ಮಳೆ ಗಾಳಿಗೆ ನೆಲಕ್ಕೊರಗಿದ ಬಾಳೆ ಫಸಲು
ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನಲ್ಲಿ ಗಾಳಿ ಸಹಿತ ಮಳೆಗೆ ಭಾರಿ ಗಾತ್ರದ ಆಲದ ಮರ ಬಿದ್ದು ನಾಲ್ಕು ಮನೆಗಳು ಜಖಂಗೊಂಡಿವೆ. ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಪಿರಿಯಾಪಟ್ಟಣದಲ್ಲೂ ಧಾರಾಕಾರ ಮಳೆಯಾಗಿದೆ. ಚಾಮರಾಜನಗರದಲ್ಲಿ ಶನಿವಾರ ಮಧ್ಯಾಹ್ನ ಗಾಳಿ ಮಳೆಯಿಂದಾಗಿ ಬ್ಯಾಡಮೂಡ್ಲು ಗ್ರಾಮದ ಶ್ರೀನಿವಾಸ್ ಎಂಬವರ ಜಮೀನಿನಲ್ಲಿ ಬೆಳೆದಿದ್ದ ಸುಮಾರು 1,500 ಬಾಳೆಗಿಡಗಳು ನೆಲಕಚ್ಚಿದವು. ಹಾಸನ ಜಿಲ್ಲೆಯ ವಿವಿಧೆಡೆ ಶುಕ್ರವಾರ ಸಂಜೆ ಹಾಗೂ ಶನಿವಾರ ಮಧ್ಯಾಹ್ನ ಸಾಧಾರಣ ಮಳೆಯಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯಲ್ಲೂ ಧಾರಾಕಾರ ಮಳೆಯಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
ಸಿಎಂ ಗೆ ರೈತರ ಬಗ್ಗೆ ಕಾಳಜಿ ಇದ್ದರೆ ವಕ್ಫ್ ಗೆಜೆಟ್ ನೋಟಿಫಿಕೇಶನ್ ರದ್ದು ಮಾಡಲಿ: ಬೊಮ್ಮಾಯಿ
ಹಾಸನಾಂಬೆ ದರ್ಶನಕ್ಕೆ ವಿಧ್ಯುಕ್ತ ತೆರೆ; 9 ದಿನದಲ್ಲಿ 19 ಲಕ್ಷಕ್ಕೂ ಹೆಚ್ಚು ಭಕ್ತರಿಂದ ದರ್ಶನ
MUST WATCH
ಹೊಸ ಸೇರ್ಪಡೆ
Bagheera: 3ನೇ ದಿನವೂ ಮುಂದುವರೆದ ʼಬಘೀರʼ ಬಾಕ್ಸಾಫೀಸ್ ಓಟ; ಗಳಿಸಿದ್ದೆಷ್ಟು?
Waqf ಗೆಜೆಟ್ ನೋಟಿಫಿಕೇಶನ್ ನಲ್ಲಿ ಬಿಜೆಪಿ ಪಾಲಿದೆ: ಎಚ್.ಕೆ. ಪಾಟೀಲ್ ಕಿಡಿ
Waqf ವಿಷಯ ಮುಗಿದು ಹೋಗಿದೆ.. ಬಿಜೆಪಿಯವರಿಂದ ಗೊಂದಲ: ಲಕ್ಷ್ಮಣ ಸವದಿ
Dandeli: ಅಪರಿಚಿತ ವಾಹನ ಡಿಕ್ಕಿ; ಕರು ಸಾವು
Covid ಗಿಂತ ಬಿಜೆಪಿ ಭ್ರಷ್ಟಾಚಾರದಿಂದ ಹೆಚ್ಚು ಜನ ಪ್ರಾಣ ಕಳೆದುಕೊಂಡಿದ್ದಾರೆ: ಖಂಡ್ರೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.