Modi 3.0; ಮೋದಿ ಸಂಪುಟದಲ್ಲಿ ಕರ್ನಾಟಕದ ಐವರಿಗೆ ಸ್ಥಾನ: ಸೋಮಣ್ಣಗೆ ಒಲಿದ ಲಕ್
Team Udayavani, Jun 9, 2024, 3:05 PM IST
ಹೊಸದಿಲ್ಲಿ: ಸತತ ಮೂರನೇ ಬಾರಿಗೆ ಪ್ರಧಾನಿ ಮಂತ್ರಿಯಾಗಿ ನರೇಂದ್ರ ಮೋದಿ ಅವರು ಇಂದು ಸಂಜೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15ಕ್ಕೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪಿಎಂ ಮೋದಿ ಜೊತೆಗೆ ಹಲವು ಸಂಸದರು ಸಚಿವರಾಗಿ ಸಂಪುಟ ಸೇರಲಿದ್ದಾರೆ.
ಕರ್ನಾಟಕದಿಂದ ಯಾರೆಲ್ಲಾ ಸಚಿವರಾಗಬಹುದು ಎಂಬ ಕುತೂಹಲವಿತ್ತು. ಇದಕ್ಕೆ ಇದೀಗ ತೆರೆ ಬಿದ್ದಿದೆ. ಕರ್ನಾಟಕದಲ್ಲಿ ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿದ್ದ ಜೆಡಿಎಸ್ ನ ಎಚ್ ಡಿ ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾಗುವುದು ಮೊದಲೇ ಬಹುತೇಕ ಖಚಿತವಾಗಿತ್ತು. ಇದಕ್ಕೆ ಇದೀಗ ಅಧಿಕೃತ ಮುದ್ರೆ ಬಿದ್ದಿದೆ.
ಕರ್ನಾಟಕದಿಂದ ಐವರು ಸಚಿವರಾಗಿ ಮೋದಿ ಸಂಪುಟ ಸೇರುತ್ತಿದ್ದಾರೆ. ಕರ್ನಾಟಕದಿಂದ ರಾಜ್ಯಸಭೆಗೆ ಆಯ್ಕೆಯಾದ ನಿರ್ಮಲಾ ಸೀತಾರಾಮನ್, ಹುಬ್ಬಳ್ಳಿ-ಧಾರವಾಡ ಸಂಸದ ಪ್ರಹ್ಲಾದ ಜೋಶಿ, ಬೆಂಗಳೂರು ಉತ್ತರ ಸಂಸದೆ ಶೋಭಾ ಕರಾಂದ್ಲಾಜೆ, ತುಮಕೂರು ಸಂಸದ ವಿ.ಸೋಮಣ್ಣ ಮತ್ತು ಮಂಡ್ಯ ಜೆಡಿಎಸ್ ಸಂಸದ ಎಚ್ ಡಿ ಕುಮಾರಸ್ವಾಮಿ ಅವರು ಇಂದು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.
ಇವರಲ್ಲಿ ಮೂವರು ಈ ಹಿಂದೆಯೂ ಸಚಿವರಾಗಿದ್ದವರು. ನಿರ್ಮಲಾ ಸೀತಾರಾಮನ್ ಅವರು ಹಣಕಾಸು ಸಚಿವರಾಗಿದ್ದರೆ, ಆಹಾರ ಸಂಸ್ಕರಣಾ ಕೈಗಾರಿಕೆಗಳ ಸಚಿವಾಲಯದ ರಾಜ್ಯ ಸಚಿವರಾಗಿದ್ದ ಶೋಭಾ ಕರಾಂದ್ಲಾಜೆ ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಪ್ರಹ್ಲಾದ ಜೋಶಿ ಅವರನ್ನು ಮತ್ತೆ ಕ್ಯಾಬಿನೆಟ್ ನಲ್ಲಿ ಮುಂದುವರಿಸಲಾಗಿದೆ.
ಉಳಿದಂತೆ ಲಿಂಗಾಯತ ನಾಯಕ ವಿ.ಸೋಮಣ್ಣ ಅವರು ಅಚ್ಚರಿಯ ರೀತಿಯಲ್ಲಿ ಮೋದಿ ಕ್ಯಾಬಿನೆಟ್ ಸೇರಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಗೆದ್ದ ಮಾಜಿ ಸಿಎಂಗಳಾದ ಬಸವರಾಜ ಬೊಮ್ಮಾಯಿ ಅಥವಾ ಜಗದೀಶ್ ಶೆಟ್ಟರ್ ಅವರಿಗೆ ಮೋದಿ ಸಂಪುಟದಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ ಅವರನ್ನು ಮೀರಿ ಸೋಮಣ್ಣ ಮಂತ್ರಿಗಿರಿ ಗಿಟ್ಟಿಸಿಕೊಂಡಿದ್ದಾರೆ.
ದೆಹಲಿಯಲ್ಲಿ ಮಾತನಾಡಿದ ಸೋಮಣ್ಣ, ”ನನಗೆ ಕೇಂದ್ರ ಸಚಿವನಾಗುವ ಅವಕಾಶ ಸಿಕ್ಕಿದೆ. ನಾನು ಪ್ರಧಾನಿ, ಅಮಿತ್ ಶಾ, ಜೆಪಿ ನಡ್ಡಾ ಮತ್ತು ಪಕ್ಷದ ನಾಯಕರಿಗೆ ಧನ್ಯವಾದ ಹೇಳುತ್ತೇನೆ… ನಿರ್ಮಲಾ ಸೀತಾರಾಮನ್, ಪ್ರಹ್ಲಾದ್ ಜೋಶಿ, ಶೋಭಾ ಕರಂದ್ಲಾಜೆ, ಎಚ್‌ಡಿ ಕುಮಾರಸ್ವಾಮಿ ಮತ್ತು ನಾನು, ಹೀಗೆ ಇಂದು ಕರ್ನಾಟಕದ 5 ಜನರು ಕೇಂದ್ರ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುತ್ತಿದ್ದಾರೆ” ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
Mudhol: ಕೈಕೊಟ್ಟ ಬೆಳೆ… ಸಾಲಬಾಧೆಗೆ ಹೆದರಿ ನೇಣಿಗೆ ಶರಣಾದ ರೈತ
MUST WATCH
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ
ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು
ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್ ನಕ್ಸಲ್ ಸಾವು
ಹೊಸ ಸೇರ್ಪಡೆ
Thailand ನಲ್ಲಿ ಜೇನಿನ ಆಯುರ್ವೇದ ಔಷಧ ಕಥೆ ಹೇಳಿದ ಅಪ್ಪ,ಮಗಳು
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Belagavi: ಪೂರ್ಣಾವಧಿ ಅಧಿವೇಶನದಲ್ಲಿ ಸಮಸ್ಯೆಗಳ ಪೂರ್ಣ ಚರ್ಚೆಯಾಗಲಿ: ಡಾ.ಪ್ರಭಾಕರ್ ಕೋರೆ
Pakistan; ಶಿಯಾ ಮುಸ್ಲಿಮರನ್ನು ಗುರಿಯಾಗಿರಿಸಿ ಗುಂಡಿನ ದಾಳಿ: ಕನಿಷ್ಠ 38 ಬ*ಲಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.