ಯಡಿಯೂರಪ್ಪರನ್ನು ಅಭಿನಂದಿಸಿದ ಮೋದಿ
Team Udayavani, Dec 15, 2019, 3:05 AM IST
ಬೆಂಗಳೂರು: ಉಪಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ದಾಖಲಿಸಿರುವ ಬಗ್ಗೆ ಇತ್ತೀಚೆಗಷ್ಟೇ ದೆಹಲಿಯಲ್ಲಿ ಸಂಸದರ ಸಭೆಯಲ್ಲಿ ಮೆಚ್ಚುಗೆ ವ್ಯಕ್ತಪಡಿಸಿದ್ದ ಪ್ರಧಾನಿ ನರೇಂದ್ರ ಮೋದಿಯವರು, ಶನಿವಾರ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ದೂರವಾಣಿ ಕರೆ ಮಾಡಿ ಅಭಿನಂದಿಸಿದ್ದಾರೆ.
ಶನಿವಾರ ಬೆಳಗ್ಗೆ ಕರೆ ಮಾಡಿದ ಪ್ರಧಾನಿಯವರು ಸುಮಾರು ಎಂಟು ನಿಮಿಷಗಳ ಕಾಲ ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದರು. ಇತ್ತೀಚೆಗೆ ನಡೆದ 15 ಕ್ಷೇತ್ರಗಳ ಉಪಚುನಾವಣೆ ಯಲ್ಲಿ ಬಿಜೆಪಿ 12 ಸ್ಥಾನ ಗೆದ್ದು ಸರ್ಕಾರವನ್ನು ಸುಭದ್ರಪಡಿಸಿಕೊಂಡಿದ್ದಕ್ಕೆ ಮೆಚ್ಚುಗೆ ವ್ಯಕ್ತಪಡಿಸಿ ಪ್ರಧಾನಿ ಅಭಿನಂದನೆ ಸಲ್ಲಿಸಿದರು ಎಂದು ಮುಖ್ಯಮಂತ್ರಿಗಳ ಆಪ್ತ ಮೂಲಗಳು ಹೇಳಿವೆ.
ಹಾಗೆಯೇ ಜಿಎಸ್‌ಟಿ ಸೇರಿದಂತೆ ಇತರ ಮೂಲಗಳಿಂದ ಉತ್ತಮವಾಗಿ ತೆರಿಗೆ ಸಂಗ್ರಹಕ್ಕೆ ಆದ್ಯತೆ ನೀಡುವ ಮೂಲಕ ಆರ್ಥಿಕ ಬಲವರ್ಧನೆಗೆ ಒತ್ತು ನೀಡಬೇಕು. ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಕೇಂದ್ರದಿಂದ ಅಗತ್ಯ ಸಹಕಾರ ನೀಡಲಾಗುವುದು. ಪೌರತ್ವ ತಿದ್ದುಪಡಿ ಕಾಯ್ದೆ ಜಾರಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಯಾವು ದೇ ರೀತಿಯಲ್ಲೂ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ಪರಿಸ್ಥಿತಿ ನಿಯಂತ್ರಿಸಬೇಕು ಎಂದು ಮೋದಿಯವರು ಸೂಚನೆ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Gangolli: ಪಂಚಾಯತ್‌ನೊಳಗೆ ನಮಾಜ್; ಹಿಂದೂ ಹಿತರಕ್ಷಣಾ ಸಮಿತಿ ಪ್ರತಿಭಟನೆ
Anandpur: ಮುಂದುವರೆದ ಕಾಡಾನೆಗಳ ದಾಳಿ… ಇಲಾಖೆ ವಿರುದ್ಧ ರೈತರ ಆಕ್ರೋಶ
ನಾನು ಶೀಶಮಹಲ್ ಕಟ್ಟಿಲ್ಲ, ಜನರಿಗೆ ಮನೆ ಕಟ್ಟಿಸಿದ್ದೇನೆ: ಕೇಜ್ರಿವಾಲ್ ಗೆ ಮೋದಿ ಟಾಂಗ್
Venur; ಚಿರತೆ ಓಡಾಟ; ಸಾರ್ವಜನಿಕರಲ್ಲಿ ಆತಂಕ; ಅರಣ್ಯಾಧಿಕಾರಿ- ಸಾರ್ವಜನಿಕರ ಸಭೆ
Bengaluru:ಕುಡಿದ ಅಮಲಲ್ಲಿದ್ದ ಚಾಲಕ; ರಕ್ಷಣೆಗಾಗಿ ಚಲಿಸುತ್ತಿದ್ದ ರಿಕ್ಷಾದಿಂದ ಜಿಗಿದ ಮಹಿಳೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.