ರಾಜ್ಯ ಸರ್ಕಾರ ಅಲುಗಾಡಿಸುವಲ್ಲಿ ಮೋದಿ ಪಾತ್ರವಿಲ್ಲ;ಮಾಜಿ ಪ್ರಧಾನಿ HDD
Team Udayavani, Feb 4, 2019, 10:00 AM IST
ಬೆಂಗಳೂರು; ರಾಜ್ಯದಲ್ಲಿರುವ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರವನ್ನು ಅಲುಗಾಡಿಸುವಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಪಾತ್ರ ಇದೆ ಅಂತ ನನಗೆ ಅನ್ನಿಸೋದಿಲ್ಲ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಸೋಮವಾರ ಬಿಜೆಪಿಯ ಆಪರೇಶನ್ ಕಮಲದ ಕುರಿತು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೇವಲ ಮೂರು ದಿನಕ್ಕೆ ಮುಖ್ಯಮಂತ್ರಿಯಾಗಿರುವುದಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪನವರಿಗೆ ಅಸಮಧಾನವಿದೆ. ಹೀಗಾಗಿ ರಾಜ್ಯ ಬಿಜೆಪಿ ನಾಯಕರಿಂದಲೇ ರಾಜ್ಯ ಸರ್ಕಾರ ಅಸ್ಥಿರಗೊಳಿಸುವ ಯತ್ನ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.
ರಾಜ್ಯ ಸರ್ಕಾರ ಕೆಡವಲು ಪ್ರಧಾನಿ ಮೋದಿ ಅವರ ಪಾತ್ರ ಇದೆ ಅಂತ ನನಗೆ ಅನ್ನಿಸುತ್ತಿಲ್ಲ. ಇದೆಲ್ಲಾ ರಾಜ್ಯ ನಾಯಕರೇ ಸಂಚು ಎಂದು ಹೇಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಬಗ್ಗೆ ಮೃದು ಧೋರಣೆ ವ್ಯಕ್ತಪಡಿಸಿದ್ದಾರೆ. ಫೆಬ್ರುವರಿ 8ಕ್ಕೆ ರಾಜ್ಯ ಸಮ್ಮಿಶ್ರ ಸರ್ಕಾರದ ಬಜೆಟ್ ಮಂಡಿಸಲು ದಿನಾಂಕ ನಿಗದಿಯಾಗಿದೆ.
ಏತನ್ಮಧ್ಯೆ ಬಜೆಟ್ ಮಂಡನೆ ಮಂಡಿಸುವ ದಿನ ಅಥವಾ ಅದಕ್ಕೂ ಮುನ್ನವೇ ಸಮ್ಮಿಶ್ರ ಸರ್ಕಾರ ಪತನವಾಗಲಿದೆ ಎಂಬ ಊಹಾಪೋಹ ದಟ್ಟವಾಗಿದೆ. ಈ ನಿಟ್ಟಿನಲ್ಲಿ ಮಾಜಿ ಪ್ರಧಾನಿ ದೇವೇಗೌಡರು ಈ ಪ್ರತಿಕ್ರಿಯೆ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Davangere: ಮದುವೆಯಾಗುವುದಾಗಿ ಯುವತಿಯರಿಗೆ 62 ಲಕ್ಷ ರೂ.ಗೂ ಹೆಚ್ಚು ವಂಚಿಸಿದವನ ಬಂಧನ
C.P.Yogeshwara; ಜಮೀರ್ ಹೇಳಿಕೆ ಪರಿಣಾಮ…: ಸೋಲಿನ ಆತಂಕ ಹೊರ ಹಾಕಿದ ಸೈನಿಕ?!
CTRavi; ಯಾರು,ಯಾರನ್ನು,ಯಾವಾಗ ಖರೀದಿಸಲು ಪ್ರಯತ್ನಿಸಿದ್ದಾರೆ?: ಸಿಎಂಗೆ ಸಿ.ಟಿ.ರವಿ ಪ್ರಶ್ನೆ
Belagavi: ಸಿಎಂ ಮುಟ್ಟೋಕೆ ಆಗುತ್ತಾ…: ಸಿದ್ದರಾಮಯ್ಯ ಹೇಳಿಕೆಗೆ ವ್ಯಂಗ್ಯವಾಡಿದ ಸೋಮಣ್ಣ
Maharashtra Election; ಬಿಜೆಪಿ ಬಳಿ 370 ಬಿಟ್ಟರೆ ಏನೂ ಇಲ್ಲ: ಮಲ್ಲಿಕಾರ್ಜುನ ಖರ್ಗೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.