ಮೋದಿಗೆ ಅಧಿಕಾರ ಕೊಟ್ಟಂತೆ ಜೆಡಿಎಸ್‌ಗೂ ಕೊಡಿ
Team Udayavani, Jan 22, 2017, 3:45 AM IST
ಬೆಂಗಳೂರು: “ಕೇಂದ್ರದಲ್ಲಿ ನರೇಂದ್ರ ಮೋದಿ ನೋಡಿ ಬಿಜೆಪಿಗೆ ಪೂರ್ಣ ಬಹುಮತ ನೀಡಿದ್ದೀರಿ, ರಾಜ್ಯದಲ್ಲಿ ನನ್ನನ್ನು ನೋಡಿ ಜೆಡಿಎಸ್‌ಗೆ ಸ್ವಂತ ಶಕ್ತಿ ಮೇಲೆ ಸರ್ಕಾರ ರಚಿಸುವ ಶಕ್ತಿ ಕೊಡಿ’ ಎಂದು ಕೈಗಾರಿಕೋದ್ಯಮಿಗಳಿಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಮನವಿ ಮಾಡಿದ್ದಾರೆ.
ಅಲ್ಲದೆ, ಅಧಿಕಾರಕ್ಕೆ ಬಂದ 24 ಗಂಟೆಗಳಲ್ಲಿ ಸಣ್ಣ ಹಾಗೂ ಮಧ್ಯಮ ಕೈಗಾರಿಕೆ ವಲಯ (ಎಸ್‌ಎಂಇ) ಎದುರಿಸುತ್ತಿರುವ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ. ನಗರದಲ್ಲಿ ಶನಿವಾರ ಕೈಗಾರಿಕೋದ್ಯಮಿಗಳ ಜತೆ ನಡೆದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ರಾಜ್ಯದ ಸಮಗ್ರ ಅಭಿವೃದ್ಧಿಗೆ 1.50 ಕೋಟಿ ಕುಟುಂಬಗಳಿಗೆ
ಉದ್ಯೋಗ ಕಲ್ಪಿಸಿರುವ ಹಾಗೂ ಬೊಕ್ಕಸಕ್ಕೆ ಸಾವಿರಾರು ಕೋಟಿ ರೂ.ತೆರಿಗೆ ಪಾವತಿಸುತ್ತಿರುವ ಸಣ್ಣ ಮತ್ತು ಮಧ್ಯಮ ಕೈಗಾರಿಕಾ ವಲಯದ ಕೊಡುಗೆ ಕಡಿಮೆಯೇನಲ್ಲ. ಆದರೆ, ನಿಮ್ಮ ಸಮಸ್ಯೆಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ. ಒಮ್ಮೆ
ಜೆಡಿಎಸ್‌ಗೆ ಅಧಿಕಾರ ಕೊಡಿ, ನೀವು ಸರ್ಕಾರದ ಬಳಿ ಬರಬೇಕಿಲ್ಲ, ನಿಮ್ಮ ಮನೆ ಬಾಗಿಲಿಗೆ ಸರ್ಕಾರ ಬರುತ್ತದೆ’ ಎಂದು ವಾಗ್ಧಾನ ಮಾಡಿದರು.
ಕೈಗಾರಿಕಾ ವಲಯ ಎದುರಿಸುತ್ತಿರುವ ಸಮಸ್ಯೆಗಳ ಬಗ್ಗೆ ವಿಧಾನಮಂಡಲದ ಜಂಟಿ ಅಧಿವೇಶನ ಹಾಗೂ ಬಜೆಟ್ ಅಧಿವೇಶನ ಎರಡರಲ್ಲೂ ಪ್ರಸ್ತಾಪಿಸಿ ಸರ್ಕಾರದ ಗಮನ ಸೆಳೆಯುತ್ತೇನೆ ಎಂದರು. 2ನೇ ಹಂತದ ನಗರಗಳಲ್ಲಿ ರೈಲು,
ರಸ್ತೆ, ವಿಮಾನಯಾನ ಸಂಪರ್ಕ ಹಾಗೂ ಮೂಲಸೌಕರ್ಯ ಕೊರತೆ ದೊಡ್ಡ ಮಟ್ಟದಲ್ಲಿದೆ.
ರಾಜ್ಯ ಸರ್ಕಾರ ಈ ಬಗ್ಗೆ ನಿರ್ಲಕ್ಷ್ಯ ವಹಿಸಿದೆ ಎಂದು ದೂರಿದರು. ಬೆಂಗಳೂರು ನಗರ ಮತ್ತು ಸುತ್ತಮುತ್ತ ಭೂಗಳ್ಳರು ಕಬಳಿಸಿರುವ ಜಮೀನನ್ನು ವಶಕ್ಕೆ ಪಡೆದು ಹರಾಜು ಹಾಕಿದರೆ 2 ರಿಂದ 3 ಲಕ್ಷ ಕೋಟಿ ರೂ. ಬೊಕ್ಕಸಕ್ಕೆ ಬರಲಿದೆ. ಅದರಿಂದ ಕೈಗಾರಿಕೆ ಹಾಗೂ ಸಾರ್ವಜನಿಕರಿಗೆ ಅನುಕೂಲ ಕಲ್ಪಿಸಲು ಕೈಗೊಳ್ಳಬೇಕಾದ ಮೂಲಸೌಕರ್ಯ ಯೋಜನೆ ರೂಪಿಸಬಹುದು. ಆದರೆ, ಸರ್ಕಾರ ಆ ಬಗ್ಗೆ ಗಮನವೇ ಹರಿಸುತ್ತಿಲ್ಲ ಎಂದರು.
ಮೆಟ್ರೋ ಮೊದಲ ಹಂತದ 19 ಕಿ.ಮೀ. ಯೋಜನೆ, ನೆಲಮಂಗಲ ಮೇಲ್ಸೇತುವೆ, ಮಡಿವಾಳ ಮೇಲ್ಸೇತುವೆ ಯೋಜನೆಗಳು ಅನುಷ್ಠಾನಗೊಂಡಿದ್ದು ತಾವು ಮುಖ್ಯಮಂತ್ರಿಯಾಗಿದ್ದಾಗ. ಮೊದಲ ಬಾರಿ ಶಾಸಕನಾಗಿ ಅನುಭವ
ಇಲ್ಲದಿದ್ದರೂ ಅಭಿವೃದ್ಧಿ ವಿಚಾರದಲ್ಲಿ ಹಿರಿಯರ ಸಲಹೆ, ಸೂಚನೆ ಪಡೆದುಕೊಳ್ಳುತ್ತಿದ್ದೆ.
ಬೆಂಗಳೂರಿನಲ್ಲಿ 5 ಕಡೆ ಟೌನ್‌ಶಿಪ್, ವಿಧಾನಸೌಧದಿಂದ ಮೇಕ್ರಿ ವೃತ್ತದವರೆಗಿನ ಸುರಂಗ ರಸ್ತೆ ಯೋಜನೆ ಸಹ ರೂಪಿಸಿದ್ದೆ. ಆದರೆ, ನಂತರ ಬಂದ ಸರ್ಕಾರಗಳು ಗಮನ ಹರಿಸಲಿಲ್ಲ ಎಂದರು. ಮೋದಿ ನೋಟು ಅಮಾನ್ಯ ನಿರ್ಧಾರ
ಕೈಗೊಂಡು ದೇಶದಲ್ಲಿ ಬದಲಾವಣೆ ಆಗಲಿದೆ ಎಂದಿದ್ದರು. ಆದರೆ, ಇಂದು ಅವರ ನಿರ್ಧಾರದಿಂದ ಜನಸಾಮಾನ್ಯರು ತೊಂದರೆ ಎದುರಿಸುವಂತಾಗಿದೆ. ಕೇಂದ್ರ ಸರ್ಕಾರ 6.50 ಲಕ್ಷ ಕೋಟಿ ರೂ.ನಷ್ಟು ದೊಡ್ಡವರ ಸಾಲ ಮನ್ನಾ ಮಾಡಿತು.
ಆದರೆ, ಅದರಲ್ಲಿ ಯಾವುದಾದರೂ ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಇವೆಯೇ ಎಂದು ಪ್ರಶ್ನಿಸಿದರು.
ಕಾಸಿಯಾ ಅಧ್ಯಕ್ಷ ಪದ್ಮನಾಭ, ಉಪಾಧ್ಯಕ್ಷ ಹನುಮಂತೇಗೌಡ, ಎಫ್ಕೆಸಿಸಿಐ ಉಪಾಧ್ಯಕ್ಷ ಸುಧಾಕರ ಶೆಟ್ಟಿ, ಪೀಣ್ಯ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೃಷ್ಣಮೂರ್ತಿ, ಉಪಾಧ್ಯಕ್ಷ ಮಲ್ಯಾದ್ರಿ ರೆಡ್ಡಿ, ಜೆಡಿಎಸ್ ಪ್ರಧಾನ ಕಾರ್ಯದರ್ಶಿ ನಾಗಣ್ಣ
ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: 6ರ ಬಾಲಕನ ಮೇಲೆ ಅನೈಸರ್ಗಿಕ ಲೈಂಗಿಕ ದೌರ್ಜನ್ಯ: ಅಪರಾಧಿಗೆ 20 ವರ್ಷ ಜೈಲು
Kalaburagi; ನಮ್ಮ ತಂಡದವರು ಸಿಎಂ ಆಗುವ ದಿನ ಬರಲಿದೆ: ಗುಡುಗಿದ ಯತ್ನಾಳ್
Politics: ಬಿಜೆಪಿ-ಜೆಡಿಎಸ್ ಸಮ್ಮಿಶ್ರ ಸರ್ಕಾರ ರಚನೆಗೆ ಪ್ರಯತ್ನ: ಬಿಎಸ್ ಯಡಿಯೂರಪ್ಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ನ.28ಕ್ಕೆ ಮುಂದೂಡಿದ ಹೈಕೋರ್ಟ್
Yadagiri: ಗ್ಯಾರಂಟಿಗಳಿಂದ ಹಿಂದೆ ಸರಿಯಲ್ಲ: ಸಚಿವ ದರ್ಶನಾಪುರ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sirsi: ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯಕ್ಕೆ ಯತ್ನಿಸಿ ಪರಾರಿ; ಆರೋಪಿ ಬಂಧನ
EVM: ಸೋತಾಗ ಮಾತ್ರ ಯಾಕೆ ಇವಿಎಂ ಮೇಲೆ ಆರೋಪ ಮಾಡುತ್ತೀರಿ: ಸುಪ್ರೀಂ ಕೋರ್ಟ್ ಟೀಕೆ
Sirsi: ರಕ್ಷಣಾ ಸಚಿವ ರಾಜನಾಥ ಸಿಂಗ್ ಅವರನ್ನು ಭೇಟಿಯಾದ ಸಂಸದ ಕಾಗೇರಿ
India: 68 ಮಿಲಿಯನ್ ಟನ್ ಆಹಾರ ಪೋಲು…ದೇಶದ ಅಭಿವೃದ್ಧಿ, ಜನರ ಸಾವು, ಆಹಾರ ಭದ್ರತೆಗೂ ಮಾರಕ
ದೋಟಿಹಾಳ: ಉದ್ಘಾಟನೆ ಕಾಣದೆ ಅಂಗನವಾಡಿ ಕಟ್ಟಡ ಅನಾಥ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.