ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಲು ಗೂಢಾಚಾರಿಕೆ ಮಾಡಲಾಗಿದೆ : ಕಾಂಗ್ರೆಸ್
Team Udayavani, Jul 20, 2021, 8:13 PM IST
ನವದೆಹಲಿ : ಫೋನ್ ಕದ್ದಾಲಿಕೆ ಮೂಲಕ ಕರ್ನಾಟಕದಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಬೀಳಿಸಲಾಗಿದೆ ಎಂದು ದೆಹಲಿಯಲ್ಲಿ ಕಾಂಗ್ರೆಸ್ ನಾಯಕರು ತೀವ್ರ ಆರೋಪ ಮಾಡಿದ್ದಾರೆ. ಕುಮಾರಸ್ವಾಮಿ ಸಿಎಂ ಆಗಿದ್ದಾಗ 2019ರಲ್ಲಿ ಪೆಗಾಸಸ್ ಮೂಲಕ ಫೋನ್ ಕದ್ದಾಲಿಕೆ ಮಾಡಿ ಸರ್ಕಾರವನ್ನು ಕೆಡವಲಾಗಿದೆ. ಕರ್ನಾಟಕ ರಾಜಕೀಯ ನಾಯಕರ ಫೋನ್ ಕದ್ದಾಲಿಕೆಯಾಗಿದೆ ಎಂದು ಕಾಂಗ್ರೆಸ್ ನಾಯಕರು ಆರೋಪ ಮಾಡಿದ್ದಾರೆ.
ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸುರ್ಜೇವಾಲಾ, ಕರ್ನಾಟಕದಲ್ಲಿ ಮೈತ್ರಿ ಸರ್ಕಾರ ಉರುಳಿಸಲು ಗೂಢಾಚಾರಿಕೆ ಮಾಡಲಾಗಿದೆ, ಪ್ರಜಾಪ್ರಭುತ್ವದ ವ್ಯವಸ್ಥೆಯನ್ನು ಮೋದಿ ಸರ್ಕಾರ ಬುಡಮೇಲು ಮಾಡಿದೆ ಎಂದರು.
ಇದೇ ವೇಳೆ ಮಾತನಾಡಿದ ಮಲ್ಲಿಕಾರ್ಜುನ ಖರ್ಗೆ, ಕರ್ನಾಟಕದಲ್ಲಿ ಕುದುರೆ ವ್ಯಾಪಾರದ ಮೂಲಕ ಅಧಿಕಾರಕ್ಕೆ ಬಂದಿದ್ದು, ಅದೇ ರೀತಿ ಮಧ್ಯಪ್ರದೇಶದಲ್ಲಿಯೂ ನಡೆದಿದೆ ಎಂದರು. ಅಂದು ಸಿಎಂ ಆಗಿದ್ದ ಎಚ್.ಡಿ. ಕುಮಾರಸ್ವಾಮಿ, ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತ ವೆಂಕಟೇಶ್, ಡಿಸಿಎಂ ಆಗಿದ್ದ ಜಿ. ಪರಮೇಶ್ವರ್, ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಗನ್ ಮ್ಯಾನ್ ಫೋನ್ ಕೂಡಾ ಕದ್ದಾಲಿಸಲಾಗಿದೆ ಎಂದು ಕೆ.ಸಿ. ವೇಣುಗೋಪಾಲ್ ದೂರಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ
Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ
JDS protest: ಎಚ್ಡಿಕೆ ಕರಿಯ: ಜಮೀರ್ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ
Congress: “40 ಪರ್ಸೆಂಟ್ ಸಿಎಂ’ಗೆ ಸಾಕ್ಷಿ ಕೊಟ್ಟಿದ್ರ್ಯಾ?: ಸಿಎಂಗೆ ಸಿ.ಟಿ. ರವಿ
Congress Govt.,: ಅಬಕಾರಿ ಡೀಲರ್ಗಳಿಂದ ಸರ್ಕಾರಕ್ಕೆ 900 ಕೋಟಿ ರೂ. ಸಲ್ಲಿಕೆ: ಅಶೋಕ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.