ಪ್ರಧಾನಿ ಮೋದಿ ಸುಳ್ಳುಗಾರ: ಖರ್ಗೆ
Team Udayavani, Oct 21, 2017, 9:00 AM IST
ಬೆಂಗಳೂರು: “ಪ್ರಧಾನಿ ನರೇಂದ್ರ ಮೋದಿ ಬರೀ ಸುಳ್ಳುಗಾರ, ಸುಳ್ಳು ಹೇಳಿಕೊಂಡು ದೇಶದ ಜನತೆಗೆ ತೊಂದರೆ ಕೊಡುತ್ತಿದ್ದಾರೆ’ ಎಂದು ಕಾಂಗ್ರೆಸ್ ಸಂಸದೀಯ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಆರೋಪಿಸಿದ್ದಾರೆ.
ಬೆಂಗಳೂರಿನ ತಮ್ಮ ನಿವಾಸದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಕೇದಾರನಾಥ ಪ್ರಕೃತಿ ವಿಕೋಪ
ಸಂದರ್ಭದಲ್ಲಿ ಹಿಂದಿನ ಯುಪಿಎ ಸರ್ಕಾರ ಜನರಿಗೆ ಯಾವುದೇ ಸಹಾಯ ಮಾಡಲಿಲ್ಲವೆಂದು ನರೇಂದ್ರಮೋದಿ ಹೇಳಿದ್ದಾರೆ. ಇದು ಅಪ್ಪಟ ಸುಳ್ಳು. ಆಗ ನಾನು ರೈಲ್ವೆ ಸಚಿವನಾಗಿ ಗುಜರಾತ್ ಜನ ಸಂಕಷ್ಟದಲ್ಲಿದ್ದಾಗ ಎರಡು ವಿಶೇಷ ರೈಲು ಪ್ರಯಾಣಕ್ಕೆ ಅನುಕೂಲ ಮಾಡಿಕೊಟ್ಟಿದ್ದೆ ಎಂದು ತಿರುಗೇಟು ನೀಡಿದರು. ಹಿಂದಿನ ಸರ್ಕಾರಗಳು ಯಾವುದೇ ಸಾಧನೆ ಮಾಡಿಲ್ಲವೆಂದು ಸುಳ್ಳು ಹೇಳಿಕೊಂಡು ತಿರುಗುತ್ತಿರುವ ನರೇಂದ್ರ ಮೋದಿಯವರು ಹಿಂದಿನವರ ಸಾಧನೆಯಿಂದಲೇ ದೇಶ ಈ ಸ್ಥಿತಿಗೆ ಬಂದು ನಿಂತಿದೆ ಎಂಬುದನ್ನು ಅರಿತುಕೊಳ್ಳಬೇಕು ಎಂದು ಹೇಳಿದರು.
ಕಾಂಗ್ರೆಸ್‌ನಿಂದ ಕೆಲವು ನಾಯಕರು ಬೇರೆ ಪಕ್ಷಕ್ಕೆ ವಲಸೆ ಹೋಗುತ್ತಾರೆ ಎನ್ನುವ ಕುರಿತು ಕೇಳಿದ ಪ್ರಶ್ನೆಗೆ ಈ ಬಗ್ಗೆ ಕೆಪಿಸಿಸಿ ಅಧ್ಯಕ್ಷರು ನೋಡಿಕೊಳ್ಳುತ್ತಾರೆ. ಪಕ್ಷ ಬಿಡುವವರು ಯಾಕೆ ಯಾವಾಗ ಹೋಗ್ತಾರೆ ಅನ್ನೋದನ್ನು ನೋಡೋಣ ಎಂದು ಹೇಳಿದರಲ್ಲದೆ, ಕಾಂಗ್ರೆಸ್ ತತ್ವ ಸಿದ್ಧಾಂತ ಒಪ್ಪಿ ಬರುವವರಿಗೆಲ್ಲ ಸ್ವಾಗತವಿದೆ. ಆದರೆ, ಬಂದವರಿಗೆಲ್ಲ ಟಿಕೆಟ್ ಕೊಡಲು ಆಗುವುದಿಲ್ಲ. ಹೈಕಮಾಂಡ್ ಅನುಮತಿ ನೀಡಿದರೆ, ಯಾರು ಬೇಕಾದರೂ ಕಾಂಗ್ರೆಸ್ ಪಕ್ಷ ಸೇರಬಹುದು ಎಂದು ಖರ್ಗೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Vijayapura: ಕರ್ನಾಟಕ ಸಾವಿನ ಮನೆಯಾಗಿದೆ: ಸರ್ಕಾರದ ವಿರುದ್ಧ ಸಿ.ಟಿ.ರವಿ ವಾಗ್ದಾಳಿ
Hunsur: ಕಬಿನಿ ಹಿನ್ನೀರಿನಲ್ಲಿ ನೀರು ನಾಯಿಗಳ ಚೆಲ್ಲಾಟ… ಸಫಾರಿಗರು ಖುಷ್
Vijayapura: ಕುರಿಗಾಯಿ, ಕೂಲಿಕಾರ, ರೈತರ ಮಕ್ಕಳಿಗೆ ‘ಬಂಗಾರ’ದ ಕಳೆ…
Shimoga: ರಸ್ತೆ ಬದಿಯಲ್ಲಿ ನವಜಾತ ಶಿಶು ಬಿಟ್ಟು ಹೋದ ತಾಯಿ!; ಆರೈಕೆ ಮಾಡಿದ ಸ್ಥಳೀಯರು
MUST WATCH
ಹೊಸ ಸೇರ್ಪಡೆ
Mega Concert: Black ಮಾರ್ಕೆಟ್ ಟಿಕೆಟ್ ಮಾರಾಟ ತಡೆಗೆ ಮಾರ್ಗಸೂಚಿ ಬೇಕು: ಪಿಐಎಲ್ ವಜಾ
Gudibanda: ಬಸ್‌ಗೆ ಟಿಪ್ಪರ್ ಡಿಕ್ಕಿ; ತಪ್ಪಿದ ಭಾರಿ ಅನಾಹುತ; ಇಬ್ಬರಿಗೆ ಗಾಯ
Maharashtra ವಿಧಾನಸಭೆಯಲ್ಲಿ ಬಿಜೆಪಿ ಗೆಲುವಿಗೆ ಆರ್‌ಎಸ್‌ಎಸ್ ಕಾರಣ: ಶರದ್ ಪವಾರ್
Tumkuru; ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಪುತ್ರ ಆತ್ಮಹ*ತ್ಯೆ
Mangaluru: ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.