ನೀಟ್ ಪರೀಕ್ಷೆ ದಿನವೇ ಪ್ರಧಾನಿ ರೋಡ್ ಶೋ: ವೇಳಾಪಟ್ಟಿ ಬದಲಿಸಲು ಎಚ್ ಡಿಕೆ ಆಗ್ರಹ
Team Udayavani, May 5, 2023, 1:40 PM IST
ಬೆಂಗಳೂರು: ಇದೇ 7ರಂದು ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಚುನಾವಣೆಗಾಗಿ ಹಮ್ಮಿಕೊಂಡಿರುವ ರೋಡ್ ಶೋದಿಂದ ನೀಟ್ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗಲಿದೆ. ಈ ಕಾರಣಕ್ಕೆ ಪ್ರಧಾನಿಗಳು ರೋಡ್ ಶೋ ವೇಳಾಪಟ್ಟಿಯನ್ನು ಬದಲಿಸಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒತ್ತಾಯಿಸಿದ್ದಾರೆ.
ಇಂದು ಬೆಳಗ್ಗೆ ಜೆಪಿ ನಗರದ ತಮ್ಮ ನಿವಾಸದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು, ಭಾನುವಾರ ನೀಟ್ ಪರೀಕ್ಷೆಯ ನಡುವೆಯೂ ಪ್ರಧಾನಿ ಮೋದಿ ರೋಡ್ ಶೋ ವಿಚಾರದ ಬಗ್ಗೆ ವಿದ್ಯಾರ್ಥಿಗಳ ಪೋಷಕರು ಹಾಗೂ ಸಾರ್ವಜನಿಕರಿಂದ ಬರುತ್ತಿರುವ ಟೀಕೆಗಳ ಬಗ್ಗೆ ನನಗೆ ಮಾಹಿತಿಯಿದೆ. ರೋಡ್ ಶೋ ಗಳಿಂದ ಮಕ್ಕಳ ಭವಿಷ್ಯಕ್ಕೆ ಧಕ್ಕೆ ಉಂಟಾಗಬಾರದು ಎಂದರು.
ಬಿಜೆಪಿ ಪಕ್ಷಕ್ಕೆ ನಾಡಿನ ಜನರ ಸಮಸ್ಯೆಗಳಿಗಿಂತ ಅವರಿಗೆ ಅಧಿಕಾರ ಹಿಡಿಯೋದೆ ಮುಖ್ಯವಾಗಿದೆ. ಅಧಿಕಾರಕ್ಕೋಸ್ಕರ ಅವರು ಏನು ಬೇಕಾದರೂ ಮಾಡುತ್ತಾರೆ. ಜನಸಾಮಾನ್ಯರ ಬದುಕಿನ ಬಗ್ಗೆ ಅವರಿಗೆ ಯಾವುದೇ ಕಾಳಜಿ ಇಲ್ಲ. ಏನಾದರೂ ಮಾಡಿ ಅಧಿಕಾರ ಹಿಡಿಯಬೇಕು ಎಂಬ ಅಜೆಂಡಾ ಇಟ್ಟುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು.
ಇದನ್ನೂ ಓದಿ:ಭಾರತ-ಪಾಕ್ ಪಂದ್ಯಕ್ಕೆ ಮೈದಾನ ಸಜ್ಜು: ಬೆಂಗಳೂರಲ್ಲೂ ನಡೆಯಲಿದೆ ವಿಶ್ವಕಪ್ ಪಂದ್ಯ
ಸಾರ್ವಜನಿಕ ವಲಯದಲ್ಲಿ ಇದು ಸರಿನಾ, ತಪ್ಪಾ ಚರ್ಚೆ ನಡೆದರೂ ಅದನ್ನು ಬಿಜೆಪಿಯವರು ಗಂಭೀರವಾಗಿ ತೆಗೆದುಕೊಳ್ಳುವುದಿಲ್ಲ. ದೇಶದ ಪ್ರಧಾನಿಯಾಗಿ ಮಕ್ಕಳ ಭವಿಷ್ಯದ ಜತೆಗೆ ಚೆಲ್ಲಾಟ ಆಡೋದು ಸರಿಯಲ್ಲ. ನೀಟ್ ಪರೀಕ್ಷೆಗೆ ತೊಂದರೆ ಕೊಡಬಾರದು. ಮಕ್ಕಳ ಭವಿಷ್ಯದ ಬಗ್ಗೆ ಅವರಿಗೆ ಏನಾದರೂ ಕಿಂಚಿತ್ ಕಾಳಜಿ ಇದ್ದರೆ ರೋಡ್ ಶೋ ಮುಂದಕ್ಕೆ ಹಾಕುವುದು ಒಳ್ಳೆಯದು ಎಂದು ಎಚ್ ಡಿಕೆ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Amit Shah ಹೇಳಿಕೆ ಖಂಡಿಸಿ ರಾಜ್ಯಾದ್ಯಂತ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್
Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ
Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್ ಆಕ್ರೋಶ
Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ
Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.