ಮೋದಿ ಬರುವುದು ಪ್ರಚಾರಕ್ಕೆ: ಖರ್ಗೆ
Team Udayavani, Feb 20, 2019, 1:14 AM IST
ಕಲಬುರಗಿ: ಕಳೆದ ಲೋಕಸಭೆ ಚುನಾವಣೆ ಸಂದರ್ಭದಲ್ಲೂ ಪ್ರಧಾನಿ ಅಭ್ಯರ್ಥಿಯಾಗಿ ಮೋದಿ ಕಲಬುರಗಿಗೆ ಆಗಮಿಸಿದ್ದರು. ಈಗಲೂ ಮಾ.1ರಂದು ಬಂದು ಪ್ರಚಾರ ಮಾಡಿ ಹೋಗ್ತಾರೆ. ಅಭಿವೃದ್ಧಿ ಕಾಮ ಗಾರಿಗೆ ಚಾಲನೆ ನೀಡಲು ಬರಲ್ಲ ಎಂದು ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ ವ್ಯಂಗ್ಯವಾಡಿದರು.
ಸುದ್ದಿಗಾರರ ಜೊತೆ ಮಾತನಾಡಿ, ಇಷ್ಟು ದಿನ ಚೌಕಿದಾರ್ ಚೋರ್ ಹೈ ಎಂದು ಅಬ್ಬರಿಸುತ್ತಿದ್ದ ಶಿವಸೇನೆ ಮುಖಂಡ ಠಾಕ್ರೆ ಇತರರು ಈಗ ಲೋಕಸಭೆ ಚುನಾವಣೆಯಲ್ಲಿ ಮೈತ್ರಿ ಮಾಡಿಕೊಂಡಿದ್ದನ್ನು ನೋಡಿದರೆ ಚೋರ್ ಪಕ್ಕದಲ್ಲಿ ಕುಳಿತುಕೊಳ್ಳಲು ಹೊರಟಿದ್ದಾರೆ. ಶಿವಸೇನೆ-ಬಿಜೆಪಿ ಮೈತ್ರಿ ಕುರಿತು ಕಾಂಗ್ರೆಸ್‌ಗೆ ಮೊದಲೇ ಗೊತ್ತಿತ್ತು. ದೂರವಿದ್ದಂತೆ ಮಾಡಿ ಹೆಚ್ಚು ಸೀಟು ಪಡೆದುಕೊಳ್ಳಲು ಚೌಕಾಸಿ ನಡೆಸುವ ಉದ್ದೇಶ ಅವರದ್ದಾಗಿತ್ತು. ಈಗ ಅದು ಈಡೇರಿದಂತಾಗಿದೆ. ಈ ಮೈತ್ರಿ ಮಾಡಿಕೊಂಡಿರುವುದು ನೋಡಿದಾಗ ಕಳ್ಳನಿರಲಿ, ಸುಳ್ಳನಿರಲಿ ಒಟ್ಟಾರೆ ಅಧಿಕಾರ ಬೇಕು ಎನ್ನುವುದನ್ನು ಇದು ನಿರೂಪಿಸುತ್ತದೆ ಎಂದರು. ಕಾಂಗ್ರೆಸ್ ಪಕ್ಷದ ಗಮನಕ್ಕೆ ತಾರದೆ ಉತ್ತರ ಪ್ರದೇಶದಲ್ಲಿ ಬಿಎಸ್ಪಿ-ಎಸ್ಪಿ ಮೈತ್ರಿ ಮಾಡಿಕೊಂಡಿವೆ. ಈಗ ಕಾಂಗ್ರೆಸ್ ಏಕಾಂಗಿಯಾಗಿ ಸ್ಪರ್ಧಿಸುವುದು ಅನಿವಾರ್ಯ ಎಂದರು.
ಜಮ್ಮು-ಕಾಶ್ಮೀರದ ಪುಲ್ವಾಮಾದಲ್ಲಿ ಸೈನಿಕರ ಮೇಲೆ ನಡೆದ ಉಗ್ರರ ದಾಳಿ ಪ್ರಕರಣದಲ್ಲಿ ಯಾರೂ ರಾಜಕೀಯ ಮಾಡಬಾರದು. ದೇಶದ ಸುರಕ್ಷತೆ ದೃಷ್ಟಿಯಿಂದ ಪಕ್ಷಬೇಧ ಮರೆದು ಒಂದಾಗಿ ಹೋರಾಡಬೇಕು.
ಕಾಂಗ್ರೆಸ್ ಸಂಸದೀಯ ನಾಯಕ ಡಾ| ಮಲ್ಲಿಕಾರ್ಜುನ ಖರ್ಗೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli: ವಿದ್ಯಾರ್ಥಿನಿಗೆ ಚುಡಾಯಿಸಿದ ಇಬ್ಬರು, ಸಹಕರಿಸಿದ ಮೂವರ ಬಂಧನ
Siraguppa: ಮುಂಜಾನೆ ತಾಲೂಕಿನಲ್ಲಿ ದಟ್ಟ ಮಂಜು… ವಾಹನ ಸವಾರರ ಪರದಾಟ
Belagavi: ವಿವಾಹಿತ ಮಹಿಳೆ ಮತ್ತು ತಾಯಿಯ ಸೀರೆ ಬಿಚ್ಚಿ ಹಲ್ಲೆ ನಡೆಸಿದ ನೆರೆಹೊರೆಯವರು!
Waqf Notice: ಬಸನಗೌಡ ಪಾಟೀಲ್ ಯತ್ನಾಳ್ ತಂಡದಿಂದ 1 ತಿಂಗಳು ಜನ ಜಾಗೃತಿ
Waqf Issue: ಕಾಂಗ್ರೆಸ್ ಸರಕಾರದ ವಿರುದ್ಧ ಬಿಜೆಪಿಯಿಂದ “ನಮ್ಮ ಭೂಮಿ ನಮ್ಮ ಹಕ್ಕು” ಹೋರಾಟ
MUST WATCH
ಹೊಸ ಸೇರ್ಪಡೆ
Kollywood: ಬಹಿರಂಗ ಪತ್ರ ಬರೆದು ಧನುಷ್ ಮೇಲೆ ರೇಗಾಡಿದ ನಟಿ ನಯನತಾರಾ; ಆಗಿರುವುದೇನು?
Nara Ramamurthy: ಆಂಧ್ರ ಸಿಎಂ ಚಂದ್ರಬಾಬು ನಾಯ್ಡು ಸಹೋದರ ನಾರಾ ರಾಮಮೂರ್ತಿ ನಾಯ್ಡು ನಿಧನ
Actor Darshan ವಿರುದ್ದ ಸುಪ್ರೀಂನಲ್ಲಿ ಮೇಲ್ಮನವಿ: ಬೆಂಗ್ಳೂರು ಕಮೀಷನರ್
Mangaluru: ನೋಟು ಬ್ಯಾನ್‌ಗೆ 8 ವರ್ಷ: ಹುಂಡಿಗೆ ಹಾಕೋದು ನಿಂತಿಲ್ಲ!
Desi Swara@150:ವಿದೇಶ ನೆಲದಲ್ಲಿ ಕರ್ನಾಟಕದ ಖಾದ್ಯವನ್ನು ಉಣಬಡಿಸುತ್ತಿರುವ ದಂಪತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.