6ರಂದು ಕರ್ನಾಟಕಕ್ಕೆ ಮುಂಗಾರು ಪ್ರವೇಶ
Team Udayavani, Jun 1, 2019, 3:00 AM IST
ಬೆಂಗಳೂರು: ಕೇರಳ ಹಾಗೂ ಕರ್ನಾಟಕಕ್ಕೆ ಒಂದೇ ದಿನ (ಜೂನ್ 6) ಮುಂಗಾರು ಪ್ರವೇಶಿಸುವ ಸಾಧ್ಯತೆಗಳಿವೆ ಎಂದು ಕೇಂದ್ರ ಹವಾಮಾನ ಇಲಾಖೆ ತಿಳಿಸಿದೆ. ಈಗಾಗಲೇ ಘೋಷಿಸಿರುವಂತೆ ಜೂ.6ರಂದು ರಾಜ್ಯಕ್ಕೆ ಮುಂಗಾರು ಪ್ರವೇಶಿಸಲಿದೆ.
ಈ ಬಾರಿ ವಾಡಿಕೆಯಷ್ಟು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.97ರಷ್ಟು ಮುಂಗಾರು ಮಳೆಯಾಗುವ ಸಾಧ್ಯತೆಯಿದೆ. ಜೂನ್ ಆರಂಭದಿಂದ ಸೆಪ್ಟೆಂಬರ್ ಅಂತ್ಯದವರೆಗೆ ನೈರುತ್ಯ ಮುಂಗಾರು ಮಳೆಯಾಗಲಿದ್ದು, ದಕ್ಷಿಣ ಭಾರತದಲ್ಲಿ ಶೇ.8ರಷ್ಟು ಕಡಿಮೆಯಾಗಬಹುದು ಎಂದು ವರದಿಯಲ್ಲಿ ತಿಳಿಸಿದೆ.
ಈ ಕುರಿತು ಪ್ರತಿಕ್ರಿಯಿಸಿದ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವಿಜ್ಞಾನಿ ಸುನಿಲ್ ಗವಾಸ್ಕರ್, ಹಿಂದೆಯೂ ಹಲವು ಬಾರಿ ಕರ್ನಾಟಕ ಮತ್ತು ಕೇರಳದ ಕರಾವಳಿಗೆ ಒಂದೇ ದಿನ ಮುಂಗಾರು ಪ್ರವೇಶಿಸಿದ ಉದಾಹರಣೆಗಳಿದ್ದು, ಈ ಬಾರಿಯೂ ಮರುಕಳಿಸುವ ಸಾಧ್ಯತೆಯಿದೆ ಎಂದು ಹೇಳಿದರು.
ಕೆಲವೆಡೆ ಭಾರೀ ಮಳೆ: ಮುಂದಿನ ಎರಡು ದಿನಗಳು ರಾಜ್ಯದ ದಕ್ಷಿಣ ಒಳನಾಡು ಸೇರಿ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದಕ್ಷಿಣ ಒಳನಾಡಿನ ಭಾಗಗಳಾದ ಬೆಂಗಳೂರು ನಗರ ಹಾಗೂ ಗ್ರಾಮಾಂತರ, ಬಳ್ಳಾರಿ, ಚಾಮರಾಜನಗರ, ಹಾಸನ, ತುಮಕೂರು, ಕೊಡಗು, ಮೈಸೂರು, ರಾಮನಗರ ಸೇರಿದಂತೆ ಕೆಲವೆಡೆ ಹೆಚ್ಚಿನ ಪ್ರಮಾಣದ ಮಳೆಯಾಗುವ ಸಾಧ್ಯತೆಯಿದೆ.
ಉಳಿದಂತೆ ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದ್ದು, ಉಷ್ಣಾಂಶ ವಾಡಿಕೆಗಿಂತ 2 ರಿಂದ 3 ಡಿಗ್ರಿ ಸೆಲ್ಸಿಯಸ್ ಹೆಚ್ಚಾಗಿರಲಿದೆ. ಕೆಲವೆಡೆ ಬಿಸಿಗಾಳಿ ಬೀಸುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.