![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Aug 8, 2022, 9:34 PM IST
ಬೆಂಗಳೂರು: ಈ ವರ್ಷದ ಮಳೆಗಾಲದ ವಿಧಾನ ಮಂಡಲದ ಅಧಿವೇಶನ ನಡೆಯುವುದು ಅನುಮಾನವಾಗಿದೆ. ಜುಲೈ ಅಥವಾ ಆಗಸ್ಟ್ ತಿಂಗಳಲ್ಲಿ ನಡೆಬೇಕಿದ್ದ ಮಳೆಗಾಲದ ಅಧಿವೇಶನವನ್ನು ಸರ್ಕಾರ ಮುಂದೂಡಿದ್ದು, ಆಗಸ್ಟ್ ತಿಂಗಳ 20 ರಿಂದ ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಕೆನಡಾದಲ್ಲಿ ನಡೆಯುವ ಸಭಾಧ್ಯಕ್ಷರ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ತೆರಳುತ್ತಿದ್ದು, ಸೆಪ್ಟೆಂಬರ್ 3ಕ್ಕೆ ಭಾರತಕ್ಕೆ ವಾಪಸ್ ಆಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಮಧ್ಯೆ, ಬಿಬಿಎಂಪಿ ಚುನಾವಣೆಗೆ ದಿನಾಂಕ ನಿಗದಿಯಾದರೆ, ಸೆಪ್ಟೆಂಬರ್ ತಿಂಗಳಿನಲ್ಲಿಯೂ ಅಧಿವೇಶನ ನಡೆಸುವುದು ಅನುಮಾನ.
ವಿಧಾನಸಭೆ ಚುನಾವಣೆ ವರ್ಷವಾಗಿರುವುದರಿಂದ ವರ್ಷಾಂತ್ಯದಲ್ಲಿ ಬೆಳಗಾವಿಯಲ್ಲಿಯೇ ಮಳೆಗಾಲ ಹಾಗೂ ಚಳಿಗಾಲದ ಅಧಿವೇಶನ ಒಂದೇ ಬಾರಿ ನಡೆಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.
You seem to have an Ad Blocker on.
To continue reading, please turn it off or whitelist Udayavani.