ಮೂಡಬಿದಿರೆಯಲ್ಲಿ ಮಹಿಳೆ ಮೇಲೆ ಹಲ್ಲೆ ನಡೆಸಿ ದರೋಡೆ: ಮೂವರ ಬಂಧನ
Team Udayavani, Sep 15, 2022, 8:56 PM IST
ಮಂಗಳೂರು: ಮೂಡಬಿದಿರೆಯಲ್ಲಿ ಆ.30ರಂದು ಮಹಿಳೆ ಮೇಲೆ ಹಲ್ಲೆ ನಡೆಸಿ, ದರೋಡೆ ಮಾಡಿದ ಪ್ರಕರಣದಲ್ಲಿ ಭಾಗಿಯಾಗಿದ್ದ ಮೂವರು ಆರೋಪಿಗಳನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಇದನ್ನೂ ಓದಿ:ಅಕ್ರಮ ಮರಳುಗಾರಿಕೆ ದಕ್ಕೆಗೆ ದಾಳಿ: 2 ಲಾರಿ ಸಹಿತ 3 ಮೆಟ್ರಿಕ್ ಟನ್ ಮರಳು ವಶಕ್ಕೆ
ಮೂಡಬಿದ್ರಿಯ ಬಡಗ ಮಿಜಾರ್ ಗ್ರಾಮದ ನಿವಾಸಿ ದಿನೇಶ್ ಪೂಜಾರಿ (36), ಬೆಳ್ತಂಗಡಿ ತಾಲೂಕಿನ ಉಳ್ಳಗುಡ್ಡೆ ಹೊಸಮನೆ ನಿವಾಸಿ ಸುಕೇಶ್ ಪೂಜಾರಿ (32), ಮೂಡಬಿದ್ರಿಯ ನಿರ್ಪಣ ದಡ್ಕೆ ನಿವಾಸಿ ಹರೀಶ್ ಪೂಜಾರಿ (34) ಬಂಧಿತ ಆರೋಪಿಗಳು.
ವರದಿಯ ಪ್ರಕಾರ, ಆಗಸ್ಟ್ 30, ಮಂಗಳವಾರ ರಾತ್ರಿ 10:30 ರ ಸುಮಾರಿಗೆ ಈ ಮೂವರು ಮೂಡಬಿದ್ರಿಯ ಅಶ್ವಥಪುರದ ಬೇರಿಂಜೆ ಗುಡ್ಡೆ ನಿವಾಸಿ ಕಮಲಾ ಎಂಬ ಒಂಟಿ ಮಹಿಳೆಯ ಮನೆಗೆ ನುಗ್ಗಿದ್ದರು. ಕಮಲಾ ಅವರ ಮೇಲೆ ಮಚ್ಚಿನಿಂದ ದೈಹಿಕ ಹಲ್ಲೆ ನಡೆಸಿ ಚಿನ್ನಾಭರಣ ಕದ್ದು ಪರಾರಿಯಾಗಿದ್ದರು. ಈ ಕುರಿತು ಮೂಡಬಿದ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕಳ್ಳತನ ಮಾಡಿದ ಚಿನ್ನಾಭರಣಗಳನ್ನು ಮಾರಲು ದುಷ್ಕರ್ಮಿಗಳು ಮಂಗಳೂರಿಗೆ ತೆರಳುತ್ತಿದ್ದಾಗ, ಕುಲಶೇಖರ್ ಚರ್ಚ್ ಗೇಟ್ ಬಳಿ ಸಿಸಿಬಿ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಸುಮಾರು 4.5 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕಳವು ಮಾಡಿದ ಆಭರಣಗಳು, ಎರಡು ಸ್ಕೂಟರ್‌ಗಳು, ಮೂರು ಮೊಬೈಲ್‌ಗಳನ್ನು, ಒಂದು ಮಚ್ಚು, ಎರಡು ಮಂಕಿ ಕ್ಯಾಪ್‌ಗಳನ್ನು ವಶಕ್ಕೆ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BSY: ಬಿಎಸ್‌ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್‌ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
Internal Dissent: ಪ್ರಧಾನಿ ಮೋದಿ ಭೇಟಿಯಾದ ವಿಜಯೇಂದ್ರ ದೂರದಿದ್ದರೂ ‘ಸಂದೇಶ’ ರವಾನೆ
Bill Amendment: ರಾಜ್ಯಪಾಲರ ಕುಲಾಧಿಪತಿ ಅಧಿಕಾರಕ್ಕೆ ಕತ್ತರಿ: ಮೇಲ್ಮನೆಯಲ್ಲೂ ಅಂಗೀಕಾರ
MUST WATCH
ಹೊಸ ಸೇರ್ಪಡೆ
Viral Video: ಖ್ಯಾತ ನ್ಯೂಸ್ ಆ್ಯಂಕರ್ ನ ಖಾಸಗಿ ವಿಡಿಯೋ ಲೀಕ್..? ಸಿಕ್ಕಾಪಟ್ಟೆ ವೈರಲ್
Warner-Ashwin; 2024ರಲ್ಲಿ ವಿದಾಯ ಹೇಳಿದ್ದು ಬರೋಬ್ಬರಿ 28 ಕ್ರಿಕೆಟಿಗರು; ಇಲ್ಲಿದೆ ಪಟ್ಟಿ
Hunsur: ಬಸ್ ಡಿಕ್ಕಿಯಾಗಿ ಪಾದಾಚಾರಿ ಸಾವು
Upendra: ʼಯುಐʼಗೆ ಸ್ಯಾಂಡಲ್‌ವುಡ್ ಸಾಥ್; ಉಪೇಂದ್ರ ಚಿತ್ರ ನೋಡಲು ಕಾತುರ
Meena Ganesh: ಮಲಯಾಳಂನ ಹಿರಿಯ ನಟಿ ಮೀನಾ ಗಣೇಶ್ ನಿಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.