ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ: ಹೆಚ್ ಡಿಕೆ

ವಿಜಯೇಂದ್ರರಿಗೆ ಟಿಕೆಟ್ ತಪ್ಪಿಸಿದ್ದು ಬಿಜೆಪಿಗೆ ತಿರುಗುಬಾಣ

Team Udayavani, May 25, 2022, 4:38 PM IST

jds

ಮೈಸೂರು : ತಾಂಬೂಲ ಪ್ರಶ್ನೆಗಿಂತ ಹೆಚ್ಚಿನ ತೀರ್ಮಾನ ಕೇಶವ ಕೃಪಾದಲ್ಲಿ ಆಗುತ್ತದೆ, ಅಲ್ಲಿಂದ ಬಂದ ಸಂದೇಶಗಳನ್ನ ಇವರು ಪಾಲಿಸುತ್ತಾರೆ. ಈ ರೀತಿಯ ವಾತಾವರಣದಿಂದ ದೇಶಕ್ಕೆ ಮುಂದೆ ಉತ್ತಮ ಭವಿಷ್ಯ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ನಾಯಕ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಮಂಗಳೂರಿನ ಮಳಲಿ ಮಸೀದಿ ವಿಚಾರದಲ್ಲಿ ನಡೆಯುತ್ತಿರುವ ತಾಂಬೂಲ ಪ್ರಶ್ನೆ ವಿಚಾರಕ್ಕೆ ಪ್ರತಿಕ್ರಿಯಿಸಿ, ಎಲ್ಲಾ ತೀರ್ಮಾನ ಆಗುವುದು ಕೇಶವ ಕೃಪಾದಲ್ಲಿ.ಇನ್ನೂ ಒಂದು ವರ್ಷ ಈ ತರದ ಬೆಳವಣಿಗೆಗಳು ನಡೆಯುತ್ತಿರುತ್ತವೆ‌.ದೇಶದ ಶಾಂತಿ, ಸಾಮರಸ್ಯ ಮತ್ತಷ್ಟು ಹದಗೆಡುವ ಆತಂಕ ಎದುರಾಗಿದೆ ಎಂದರು.

ಬಿಎಸ್ ವೈ ಪುತ್ರ ವಿಜಯೇಂದ್ರ ಅವರಿಗೆ ಮೇಲ್ಮನೆ ಟಿಕೆಟ್ ತಪ್ಪಿದ ವಿಚಾರಕ್ಕೆ ಪ್ರತಿಕ್ರಿಯಿಸಿ, ಯಾವುದೋ ತತ್ವದ ಕಥೆ ಹೇಳಿ‌ ಟಿಕೆಟ್ ಕೊಟ್ಟಿಲ್ಲ ಎಂದು ಹೇಳಿದ್ದಾರೆ‌. ಇದು ಬಿಜೆಪಿಗೆ ತಿರುಗುಬಾಣವಾಗುವ ಲಕ್ಷಣಗಳು ಕಾಣುತ್ತಿದೆ. ಇದರಿಂದ ಬೇರೆ ಪಕ್ಷಕ್ಕೆ ಲಾಭ ನಷ್ಟದ ಪ್ರಶ್ನೆ ಇಲ್ಲ‌.ಆದರೆ ಸರ್ಕಾರದ ಮೇಲೆ ಇದು ಗಂಭೀರ ಪರಿಣಾಮ ಬೀರಬಹುದು. ಆಡಳಿತದ ಮೇಲು ಕೆಟ್ಟ ಪರಿಣಾಮ ಬೀರುವ ಲಕ್ಷಣ ಕಾಣುತ್ತಿದೆ. ಗುಂಪುಗಾರಿಕೆಗೆ ಇನ್ನು ಹೆಚ್ಚು ಅವಕಾಶವಾಗಬಹುದು ಎಂದರು.

ಜೆಡಿಎಸ್ ಹಿತ ಶತ್ರುಗಳಿಂದ ತಮಗೆ ಲಾಭ ಆಗುತ್ತದೆ ಎಂದು ಕಾಂಗ್ರೆಸ್ ಅಂದುಕೊಂಡಿದೆ. ಅದ್ಯಾವುದು ಈಗ ನಡೆಯುವುದಿಲ್ಲ.ಪಕ್ಷದಲ್ಲಿರುವ ಹಿತ ಶತ್ರುಗಳು ಈಗ‌‌ ನೇರ ಶತ್ರುಗಳಾಗಿದ್ದಾರೆ. ಅವರ ಬಗ್ಗೆ ನಮ್ಮ ಕಾರ್ಯಕರ್ತರಿಗೆ ಅರಿವಾಗಿದೆ‌ ಎಂದರು.

ಮಂಡ್ಯಕ್ಕೆ ಕುಮಾರಸ್ವಾಮಿ ಕೊಡುಗೆ ಏನು ಎಂದು ನಿನ್ನೆ ಸಿದ್ದರಾಮಯ್ಯ ಕೇಳಿದ್ದಾರೆ. ತಮ್ಮ ಕೊಡುಗೆ ಏನು‌ ಎಂದು ಸಿದ್ದರಾಮಯ್ಯ ಹೇಳಲಿ.ರೈತರು ಆತ್ಮಹತ್ಯೆ ಮಾಡಿಕೊಂಡರು ಅದು ನಿಮ್ಮ‌ ಕೊಡುಗೆ. 200 ಕುಟುಂಬಗಳ ಅನಾಥವಾಗಿ ಮಾಡಿದ್ದೆ ನಿಮ್ಮ ಕೊಡುಗೆ. ನಮ್ಮ ಕೊಡುಗೆ ಏನು ಎಂಬುದು ಮಂಡ್ಯ ಜನರಿಗೆ ಗೊತ್ತಿದೆ. ನಾನು ಮಂಡ್ಯವನ್ನು ಇನ್ನಷ್ಟು ಅಭಿವೃದ್ಧಿ ಮಾಡುತ್ತಿದ್ದೆ. ಅಷ್ಟರಲ್ಲಿ ನೀವು ಸರ್ಕಾರ ತೆಗೆದಿರಿ. ಎಂದು ಕಿಡಿ ಕಾರಿದರು.

ಶ್ರೀರಂಗಪಟ್ಟಣದ ಜಾಮಿಯಾ ಮಸೀದಿ ವಿಚಾರದಲ್ಲಿ ಜೆಡಿಎಸ್ ನಿಲುವಿನ ವಿಚಾರ ಏನು ಎಂಬ ಪ್ರಶ್ನೆಗೆ ಉತ್ತರಿಸಿ, ಇದರ ಬಗ್ಗೆ ಆತುರ ಮಾಡುವುದು ಏನಿದೆ. ದೇವರು ಕನಸ್ಸಿನಲ್ಲೇನಾದರು ಬಂದು ನನ್ನ ಮೂಲ ಸ್ಥಾನ ಇಲ್ಲಿದೆ ಅಂತ ಹೇಳಿದ್ದಾನಾ?ಅದನ್ನ ಸರಿಪಡಿಸಿ ಅಂತ ಕೇಳಿದ್ದಾನಾ? ಇದನ್ನ ನೋಡಿದರೆ ಮತ್ತೊಂದು ವಿವಾದ ಶುರು ಆಗುವ ಲಕ್ಷಣ ಇದೆ. ಟಿಪ್ಪು ಕಾಲದಲ್ಲಿ ಹಲವು ಹಿಂದೂ ದೇವಾಲಯಗಳಿಗೆ ಭೂಮಿ ದಾನ ಮಾಡಿದ್ದ. ಇದು ಆ ಸಮಾಜಕ್ಕೆ ಕನಸ್ಸಿನಲ್ಲಿ ಬರುತ್ತೆ. ಆವಾಗ ಆ ಸಮಾಜಕ್ಕೆ ಭೂಮಿ ಬಿಟ್ಟುಕೊಡುತ್ತೀರಾ? ಹಲವು ದೇವಾಲಯಗಳಿಗೆ ಟಿಪ್ಪು ಭೂಮಿ ನೀಡಿರೋ ಉದಾಹರಣೆ ಇದೆ. ಆವರೂ ಕೂಡಾ ಬಂದು ಕೇಳಿದರೆ ನೀವು ಕೊಡುತ್ತೀರಾ? ಇದನ್ನ ಬಿಟ್ಟು ಜನರ ಬದುಕನ್ನ ನೋಡಿ ಎಂದರು.

ಇದನ್ನೂ ಓದಿ : ಚಿಕ್ಕಮಗಳೂರು: ತಂದೆ – ಮಗನ ಪಬ್ ಜಿ ಜಗಳ; ತಾಯಿಯ ಕೊಲೆಯಲ್ಲಿ ಅಂತ್ಯ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.