ಇನ್ನಷ್ಟು ಕಾಂಗ್ರೆಸ್ ಜೆಡಿಎಸ್ ಮುಖಂಡರು ಬಿಜೆಪಿಗೆ : ಸಿಎಂ ಬೊಮ್ಮಾಯಿ
Team Udayavani, Mar 1, 2022, 10:45 PM IST
ಬೆಂಗಳೂರು: ಕಾಂಗ್ರೆಸ್- ಜೆಡಿಎಸ್ ಇವೆರಡೂ ಪಕ್ಷಗಳ ಜನಹಿತ ಬಯಸುವ ಅನೇಕ ಮುಖಂಡರು ನಮ್ಮ ಸಂಪರ್ಕದಲ್ಲಿದ್ದಾರೆ. ಮುಂದಿನ ದಿನಗಳಲ್ಲಿ ಬೇರೆ ಜಿಲ್ಲೆಗಳ ಇನ್ನಷ್ಟು ಮುಖಂಡರು ಬಿಜೆಪಿ ಸೇರಲಿದ್ದಾರೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಮಂಗಳವಾರ ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಮತ್ತು ಅವರ ಬೆಂಬಲಿಗರ ಹಾಗೂ ಕಾಂಗ್ರೆಸ್ ಮುಖಂಡರ ಸೇರ್ಪಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ದೇವನಹಳ್ಳಿಯ ಮಾಜಿ ಶಾಸಕರಾದ ಪಿಳ್ಳಮುನಿಶಾಮಪ್ಪ ಅವರ ಸೇರ್ಪಡೆಯಿಂದ ಬಿಜೆಪಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಯಲ್ಲಿ ದೊಡ್ಡ ಶಕ್ತಿ ಲಭಿಸಲಿದೆ. ದೇವನಹಳ್ಳಿ ಪ್ರಗತಿಪರ ಚಿಂತನೆ ಇರುವ ಕ್ಷೇತ್ರ. ಅಲ್ಲಿನ ಜನಸಮುದಾಯದ ಆಶಯ ಕಾಂಗ್ರೆಸ್ ಪಕ್ಷದ ವಿರುದ್ಧವಾಗಿದೆ. ಇವತ್ತು ರಾಮನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಜೆಡಿಎಸ್ ಮತ್ತು ಕಾಂಗ್ರೆಸ್‌ನ ಹಲವು ಮುಖಂಡರು ಬಿಜೆಪಿ ಸೇರುತ್ತಿರುವುದರಿಂದ ಬಿಜೆಪಿ ನೇತೃತ್ವದ ಹೊಸ ರಾಜಕೀಯ ಸಮೀಕರಣ ಆಗುತ್ತಿದೆ ಎಂದರು.
ಇಂಥ ಸೇರ್ಪಡೆ ಕಾರ್ಯಕ್ರಮಗಳು ಮುಂದಿನ ಒಂದು ತಿಂಗಳು ನಡೆಯಲಿವೆ. ಮುಂದಿನ ರಾಜಕಾರಣಕ್ಕೆ ಇದು ಸಾಕ್ಷಿ ಎಂದ ಅವರು, ಕಾಂಗ್ರೆಸ್ ಆಡಳಿತದಲ್ಲಿ ಯಾವುದೇ ವರ್ಗಕ್ಕೂ ಸಮಾಧಾನ ಇರಲಿಲ್ಲ. ಅಲ್ಲದೆ, ಕೆಲವು ವರ್ಗಕ್ಕೆ ಬಹಳಷ್ಟು ಅನ್ಯಾಯವಾಗಿತ್ತು ಎಂದು ವಿವರಿಸಿದರು. ಇದೇ ಕಾರಣಕ್ಕೆ ಕಾಂಗ್ರೆಸ್ ಪಕ್ಷವನ್ನು ವಿರೋಧ ಪಕ್ಷದಲ್ಲಿ ಕೂರಿಸಲು ಮುಂದಾದರು. ಅಪವಿತ್ರ ಮೈತ್ರಿಯಿಂದ ಮಾಡಿದ ಸಮ್ಮಿಶ್ರ ಸರಕಾರದಿಂದ ಜನರಿಗೆ ಭ್ರಮನಿರಸನವಾಯಿತು ಎಂದರು.
ಬಿಜೆಪಿ ಎಲ್ಲ ಸಂದರ್ಭಗಳಲ್ಲೂ ಕೇಂದ್ರದಲ್ಲಿ ಅತ್ಯುತ್ತಮ ಆಡಳಿತ ನೀಡುತ್ತಿದೆ. ರಾಜ್ಯದಲ್ಲೂ ಕ್ರಿಯಾಶೀಲ, ಜನಪರ ಸರಕಾರವಿದೆ. ಮುಂದಿನ ದಿನಗಳಲ್ಲಿ ರಾಜ್ಯದಲ್ಲಿ ಹೊಸ ಕಾರ್ಯಕ್ರಮಗಳ ಮೂಲಕ ಎಲ್ಲ ಸಮುದಾಯಗಳಿಗೆ ನ್ಯಾಯ ನೀಡಲಾಗುವುದು ಎಂದು ತಿಳಿಸಿದರು.
ಕಾಂಗ್ರೆಸ್ ಪಕ್ಷದವರು ಹೊರಗಡೆ ಅಧಿಕಾರಕ್ಕೆ ಬಂದಂತೆ ಪೋಸ್ ಕೊಡುತ್ತಾರೆ. ಒಳಗಡೆ ಪೊಳ್ಳುತನ ಇದೆ. ಅವರು ಏನೇ ಮಾಡಿದರೂ ಕಾಂಗ್ರೆಸ್ ಪಕ್ಷದ ದುರಾಡಳಿತ, ಸರ್ವಾಧಿಕಾರ ಧೋರಣೆಯನ್ನು ಕರ್ನಾಟಕದ ಜನರು ಒಪ್ಪಿಕೊಳ್ಳುವುದಿಲ್ಲ. ನವ ಕರ್ನಾಟಕ, ನವ ಭಾರತ ನಿರ್ಮಾಣಕ್ಕೆ ಶ್ರಮಿಸೋಣ. ಹೊರಗಿನವರು – ಒಳಗಿನವರು ಎಂಬ ಪ್ರಶ್ನೆ ಇಲ್ಲ. ಇಂದಿನಿಂದ ಪಕ್ಷದ ಸಂಘಟನೆಗೆ ತೊಡಗಿಸಿಕೊಳ್ಳಿ ಎಂದು ಸಲಹೆ ನೀಡಿದರು. ದೇವನಹಳ್ಳಿಯ ಸರ್ವತೋಮುಖ ಅಭಿವೃದ್ಧಿಗೆ ರಾಜ್ಯ ಸರಕಾರ ಬದ್ಧವಿದೆ ಎಂದರು.
ಉದ್ಯೋಗಕ್ಕೆ ಹೆಚ್ಚಿನ ಉತ್ತೇಜನ ಕೊಡುವ ನೀತಿ ನಿಯಮಾವಳಿ ರೂಪಿಸಲಾಗುವುದು ಎಂದು ತಿಳಿಸಿದರು. 2023ರಲ್ಲಿ ದೇವನಹಳ್ಳಿಯಲ್ಲಿ ಬಿಜೆಪಿ ಬಾವುಟ ಹಾರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ದಕ್ಷಿಣ ಮತ್ತು ಉತ್ತರ ಕರ್ನಾಟಕದಲ್ಲಿ ಬಿಜೆಪಿ ತನ್ನ ಶಕ್ತಿಯನ್ನು ಹೆಚ್ಚಿಸಿಕೊಂಡು ರಾಜ್ಯದಲ್ಲಿ ಮತ್ತೆ ಅಧಿಕಾರ ಪಡೆಯಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ
Health Programme: ಗೃಹ ಆರೋಗ್ಯ ಯೋಜನೆ ಶೀಘ್ರವೇ ರಾಜ್ಯಕ್ಕೆ ವಿಸ್ತರಣೆ: ಸಚಿವ ದಿನೇಶ್
Remark Case: ನನ್ನ ಬಂಧನ ಪ್ರಕರಣ ನ್ಯಾಯಾಂಗ ತನಿಖೆಯಾಗಲಿ: ಎಂಎಲ್‌ಸಿ ಸಿ.ಟಿ.ರವಿ
BJP; ಬಣ ರಾಜಕೀಯ ತಪ್ಪಿಸಲು ತೃತೀಯ ಬಣ ಸಭೆ?
English ತರಬೇತಿ ಮಾಧ್ಯಮವಷ್ಟೇ ಆಗಲಿ: ಗೊ.ರು.ಚನ್ನಬಸಪ್ಪ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
ಕಲಬುರಗಿ- ಮೈಸೂರಲ್ಲಿ ನಿಮ್ಹಾನ್ಸ್ ಮತ್ತು ಡಯಾಬಿಟಾಲಜಿ ಘಟಕ ಸ್ಥಾಪನೆಗೆ ಕ್ರಮ: ಸಿಎಂ ಭರವಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.