ಶಿಕ್ಷಕರ ವರ್ಗಾವಣೆ ಇನ್ನಷ್ಟು ವಿಳಂಬ?
ಹೊರಬೀಳದ ಅಧಿಸೂಚನೆ, ನೀತಿ ಸಂಹಿತೆ ಅಡ್ಡಿಯಾಗುವ ಆತಂಕ
Team Udayavani, Oct 3, 2020, 6:25 AM IST
ಸಾಂದರ್ಭಿಕ ಚಿತ್ರ
ಬೆಂಗಳೂರು: ಶಾಲಾ ಶಿಕ್ಷಕರ ವರ್ಗಾವಣೆಗೆ ಸಾರ್ವಜನಿಕ ಶಿಕ್ಷಣ ಇಲಾಖೆ ಸಿದ್ಧತೆ ಮಾಡಿಕೊಂಡಿದ್ದರೂ ಸರಕಾರದಿಂದ ಅಂತಿಮ ಅಧಿಸೂಚನೆ ಹೊರಬಿದ್ದಿಲ್ಲ. ಈ ನಡುವೆ ಮತ್ತೆ ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗುವ ಆತಂಕ ಶಿಕ್ಷಕರಲ್ಲಿ ಮನೆ ಮಾಡಿದೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ-2020 ಉಭಯ ಸದನಗಳಲ್ಲಿ ಅಂಗೀಕಾರಗೊಂಡು ರಾಜ್ಯಪಾಲರ ಅಂಕಿತವೂ ಬಿದ್ದಿದೆ. ಅದರಂತೆ ಶಿಕ್ಷಕರ ವರ್ಗಾವಣೆಗಾಗಿ ಕರಡು ನಿಯಮ ಸಿದ್ಧ ಪಡಿಸಿ, ಆಕ್ಷೇಪಣೆಗಳನ್ನು ಆಹ್ವಾನಿಸಲಾಗಿತ್ತು. ಶಿಕ್ಷಕರು ಮತ್ತು ಶಿಕ್ಷಕರ ಸಂಘದಿಂದ ಆಕ್ಷೇಪಣೆ ಗಳನ್ನು ಸಲ್ಲಿಸಲಾಗಿದೆ. ಅವುಗಳನ್ನು ಕ್ರೋಡೀಕರಿಸಿ ಅಂತಿಮ ನಿಯಮ ಸಿದ್ಧಪಡಿಸಿ ಸಲ್ಲಿಸಲಾಗಿದೆ. ಜತೆಗೆ ಖಾಲಿ ಹುದ್ದೆ ಗಳ ಮಾಹಿತಿ, ಶಿಕ್ಷಕರ ಸೇವಾಮಾಹಿತಿ ಸಹಿತ ವರ್ಗಾವಣೆಗೆ ಪೂರಕ ವಿವರಗಳನ್ನು ಇಲಾಖೆ ಕಲೆಹಾಕಿದೆ. ಆದರೆ ಸರಕಾರದಿಂದ ಹಸುರು ನಿಶಾನೆ ಸಿಕ್ಕಿಲ್ಲ.
ಉಪಚುನಾವಣೆ ನೀತಿ ಸಂಹಿತೆ ಅಡ್ಡಿ?
ಈಗಾಗಲೇ ಶಿರಾ ಮತ್ತು ರಾಜರಾಜೇಶ್ವರಿನಗರ ವಿಧಾನಸಭಾ ಉಪ ಚುನಾವಣೆ ಘೋಷಣೆಯಾಗಿದೆ. ಅಲ್ಲದೆ ಪದವೀಧರ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ ಚುನಾವಣೆಯೂ ಘೋಷಣೆಯಾಗಿದ್ದು, ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದೆ. ನೀತಿ ಸಂಹಿತೆಯ ನಡುವೆ ವರ್ಗಾವಣೆ ನಡೆಸಲು ಸಾಧ್ಯವಿಲ್ಲ. ಹೀಗಾಗಿ ಶಿಕ್ಷಣ ಇಲಾಖೆಯಿಂದ ಈ ಸಂಬಂಧ ಚುನಾವಣ ಆಯೋಗಕ್ಕೆ ಪತ್ರ ಬರೆದು ಆಯೋಗದ ಒಪ್ಪಿಗೆಯನ್ನು ಪಡೆಯ ಬೇಕಾಗುತ್ತದೆ. ಇಲ್ಲವಾದರೆ ಚುನಾವಣೆ ಮುಗಿದು ಫಲಿತಾಂಶ ಬರುವವರೆಗೂ ಪ್ರಕ್ರಿಯೆ ಆರಂಭಿಸಲು ಸಾಧ್ಯವಾಗುವುದಿಲ್ಲ ಎಂದು ಮೂಲಗಳು ತಿಳಿಸಿವೆ.
ವಿಳಂಬವಾದರೆ ಶಿಕ್ಷಕರಿಗೆ ಸಮಸ್ಯೆ
ವರ್ಗಾವಣೆ ವಿಳಂಬವಾದಷ್ಟು ಶಿಕ್ಷಕರಿಗೆ ಸಮಸ್ಯೆಯಾಗುತ್ತದೆ. ವಿದ್ಯಾಗಮ ನಡೆಯುತ್ತಿರುವುದರಿಂದ ಏಕಾಏಕಿ ವರ್ಗಾವಣೆ ಆದೇಶ ನೀಡಲು ಸಾಧ್ಯವಿಲ್ಲ. ಸಾಮಾನ್ಯವಾಗಿ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ ವರ್ಗಾವಣೆ ನಡೆಸಬೇಕು ಎಂದು ನಿಯಮವೇ ಹೇಳುತ್ತದೆ. ಆದರೆ ಇದು ಸಮರ್ಪಕವಾಗಿ ಜಾರಿಯಾಗುತ್ತಿಲ್ಲ. ಈಗ ಪ್ರಕ್ರಿಯೆ ಆರಂಭಿಸದೇ ಇದ್ದರೆ ಶಾಲಾರಂಭವಾದ ಅನಂತರ ವರ್ಗಾವಣೆ ಕೌನ್ಸೆಲಿಂಗ್ ಕಷ್ಟವಾಗಲಿದೆ. ಮತ್ತೇ ಮುಂದಿನ ಶೈಕ್ಷಣಿಕ ವರ್ಷದ ಆರಂಭದವರೆಗೂ ಕಾಯಬೇಕಾಗುತ್ತದೆ. ಈ ವರ್ಷವೂ ವರ್ಗಾವಣೆ ಇಲ್ಲದೇ ಕಳೆದುಹೋಗಬಹುದು ಎಂದು ಶಿಕ್ಷಕರು ಆತಂಕ ಹೊರಹಾಕಿದ್ದಾರೆ.
ಶಿಕ್ಷಕರ ವರ್ಗಾವಣೆ ಸಂಬಂಧ ಶಿಕ್ಷಕ ಮಿತ್ರ ಆ್ಯಪ್ ಸಿದ್ಧವಾಗಿದೆ. ಆ್ಯಪ್‌ನಲ್ಲೇ ವರ್ಗಾವಣೆ ಪ್ರಕ್ರಿಯೆ ನಡೆಯಲಿದೆ. ಶೀಘ್ರದಲ್ಲಿ ಸರಕಾರ ಪ್ರಕ್ರಿಯೆ ಆರಂಭಿಸಲಿದೆ ಎಂಬ ನಿರೀಕ್ಷೆಯಿದೆ. ಈ ಸಂಬಂಧ ಶಿಕ್ಷಣ ಸಚಿವರೊಂದಿಗೆ ಅನೇಕ ಬಾರಿ ಮಾತುಕತೆ ನಡೆಸಿದ್ದೇವೆ.
-ವಿ.ಎಂ. ನಾರಾಯಣ ಸ್ವಾಮಿ ಅಧ್ಯಕ್ಷ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ
ವರ್ಗಾವಣೆಗೆ ಎಲ್ಲ ರೀತಿಯ ಸಿದ್ಧತೆ ಮಾಡಿಕೊಂಡಿದ್ದೇವೆ. ಚುನಾವಣೆ ನೀತಿ ಸಂಹಿತೆ ಅಡ್ಡಿಯಾಗು ತ್ತದೆಯೇ ಇಲ್ಲವೇ ಎನ್ನುವುದನ್ನು ಚುನಾವಣ ಆಯೋಗದಿಂದ ಸ್ಪಷ್ಟಪಡಿಸಿಕೊಳ್ಳಬೇಕಿದೆ.
-ಉಮಾಶಂಕರ್ ಪ್ರಾ., ಪ್ರೌಢಶಿಕ್ಷಣ ಇಲಾಖೆ ಪ್ರ. ಕಾರ್ಯದರ್ಶಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Attack On Car: ಎಡನೀರು ಸ್ವಾಮೀಜಿ ಕಾರಿನ ಮೇಲೆ ದಾಳಿ: ಕಸಾಪ, ಬ್ರಾಹ್ಮಣ ಮಹಾಸಭಾ ಖಂಡನೆ
Covid Scam: ತನಿಖೆಗೆ ಎಸ್‌ಐಟಿ?: ಬಿಜೆಪಿಯ ಇಕ್ಕಟ್ಟಿಗೆ ಸಿಲುಕಿಸಲು ಸಿದ್ಧತೆ
Police FIR: ಎಫ್ಐಆರ್ ದಾಖಲಿಸಿ ನನ್ನ ವಿರುದ್ಧ ಸರ್ಕಾರದಿಂದ ದ್ವೇಷ ಸಾಧನೆ: ಎಚ್‌ಡಿಕೆ
Waqf: ಕಾಂಗ್ರೆಸ್ ನಾಯಕರಿಂದಲೇ 2.70 ಲಕ್ಷ ಕೋಟಿ ಮೌಲ್ಯದ ವಕ್ಫ್ ಆಸ್ತಿ ಕಬಳಿಕೆ: ಯತ್ನಾಳ್
MUST WATCH
ಹೊಸ ಸೇರ್ಪಡೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Chikkamagaluru: ನ.9ರಿಂದ 11ರ ತನಕ ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.