108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆ: ಮುಖ್ಯಮಂತ್ರಿ ಬೊಮ್ಮಾಯಿ
ಪ್ರಧಾನಿಗಳಿಂದ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ
Team Udayavani, Nov 10, 2022, 5:46 PM IST
ಬೆಂಗಳೂರು: ನಮ್ಮ ಹೆಮ್ಮೆಯ ನಾಡಪ್ರಭುಗಳ ಹೆಸರಿನಲ್ಲಿರುವ ವಿಮಾನ ನಿಲ್ದಾಣದಲ್ಲಿ 108 ಅಡಿ ಎತ್ತರದ ಪ್ರಗತಿ ಪ್ರತಿಮೆ ಅಭಿವೃದ್ಧಿಗೆ ಪ್ರೇರಣೆಯಾಗುವ ದೃಷ್ಟಿಯಿಂದ ನಿರ್ಮಿಸಲಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಅವರು ಗುರುವಾರ ಕೆಂಪೇಗೌಡರ ಕಂಚಿನ ಪ್ರತಿಮೆ ಲೋಕಾರ್ಪಣೆ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸಭಾ ವೇದಿಕೆ ಕಾರ್ಯಕ್ರಮದ ಸಿದ್ಧತೆ ಮತ್ತು ವ್ಯವಸ್ಥೆಗಳ ಪರಿಶೀಲನೆ ನಡೆಸಿದ ನಂತರ ಮಾಧ್ಯಮದವರೊಂದಿದೆ ಮಾತನಾಡಿದರು.
ಪ್ರಧಾನಿಗಳಿಂದ ಶಿಲ್ಪಿ ರಾಮ್ ಸುತಾರಾ ಅವರಿಗೆ ಅಭಿನಂದನೆ
ಕೆಂಪೇಗೌಡರ ಪ್ರಗತಿ ಪ್ರತಿಮೆಯನ್ನು ನಿರ್ಮಿಸಿದವರು ರಾಮ್ ಸುತಾರಾ. ಇಡೀ ಭಾರತದಲ್ಲಿ ಅತ್ಯಂತ ಶ್ರೇಷ್ಠ ಶಿಲ್ಪಿ. ಅಹಮದಾಬಾದ್‍ನಲ್ಲಿರುವ ವಲ್ಲಭಭಾಯಿ ಪಟೇಲ್ ಅವರ ಐಕ್ಯತಾ ಮೂರ್ತಿಯನ್ನೂ ಹಾಗೂ ಅಂಬೇಡ್ಕರ್ ಅವರ ಅತಿ ಎತ್ತರದ ಮೂರ್ತಿಯನ್ನು ನಿರ್ಮಿಸಿದ ಖ್ಯಾತಿ ಅವರದ್ದು. ನಾಳೆ ಪ್ರಧಾನಿಮಂತ್ರಿಗಳು ಅವರಿಗೆ ಅಭಿನಂದನೆ ಸಲ್ಲಿಸಲಿದ್ದಾರೆ. ಅವರ ಕೈಚಳಕದಿಂದ ಇಷ್ಟು ಬೃಹತ್ ಮೂರ್ತಿ ಮೈದಳೆದಿದೆ. ಸಮಸ್ತ ಕನ್ನಡ ನಾಡಿನ ಜನತೆಯ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುವುದಾಗಿ ಹೇಳಿದರು.
ಪ್ರಧಾನಿಗಳಿಂದ ಕನಕದಾಸ ಹಾಗೂ ವಾಲ್ಮೀಕಿ ಪ್ರತಿಮೆಗೆ ಪುಷ್ಪಾರ್ಚನೆ
ನಾಳೇ ಪ್ರಧಾನಮಂತ್ರಿಗಳು ಬೆಳಗ್ಗೆ 9 ಗಂಟೆಗೆ ಹೆ.ಚ್.ಎ.ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿ, ಅಲ್ಲಿಂದ ಹೆಲಿಕಾಪ್ಟರ್ ಮೂಲಕ ಶಾಸಕರ ಭವನದ ಆವರಣದಲ್ಲಿರುವ ಕನಕದಾಸರ ಪ್ರತಿಮೆಗೆ ಪುಷ್ಪ ನಮನ ಮಾಡಲಿದ್ದಾರೆ. ಕನಕ ಜಯಂತಿಯ ಸಂದರ್ಭದಲ್ಲಿ ಪ್ರಧಾನಮಂತ್ರಿಯವರು ಆಗಮಿಸಿರುವುದು ಯೋಗಾಯೋಗ. ಒಬ್ಬ ಹಿಂದುಳಿದ ವರ್ಗಕ್ಕೆ ಸೇರಿದ ಪ್ರಧಾನಮಂತ್ರಿಗಳು ಸಮಸ್ತ ಮಾನವಕುಲಕ್ಕೆ ದಾರಿದೀಪವಾಗಿರುವ ಕನಕದಾಸರ ಪ್ರತಿಮೆಗೆ ಪುಷ್ಪಾರ್ಚನೆ ಮಾಡುವುದು ನಮ್ಮೆಲ್ಲರಿಗೂ ಸಂತೋಷ ತಂದಿದೆ. ಪಕ್ಕದಲ್ಲಿಯೇ ಇರುವ ವಾಲ್ಮೀಕಿ ಮೂರ್ತಿಗೂ ಪುಷ್ಪಾರ್ಚನೆ ಮಾಡಲಿದ್ದಾರೆ ಎಂದರು.
ವಂದೇ ಭಾರತ್ ರೈಲು – ಬಹುದಿನಗಳ ಬೇಡಿಕೆಯ ಈಡೇರಿಕೆ
ನಂತರ ರೈಲ್ವೇ ನಿಲ್ದಾಣದಲ್ಲಿ ವಂದೇ ಭಾರತ್ – ಹೈಸ್ಪೀಡ್ ರೈಲಿನ ಉದ್ಘಾಟನೆ ನೆರವೇರಿಸಲಿದ್ದಾರೆ. ಬೆಂಗಳೂರು- ಮೈಸೂರು, ಚನ್ನೈ ಕಡೆ ಪ್ರಯಾಣ ಮಾಡುವುದು, ಬೆಂಗಳೂರು- ಮೈಸೂರು ಪ್ರಯಾಣದ ಅವಧಿಯನ್ನು ಅತ್ಯಂತ ಕಡಿಮೆ ಸಮಯದಲ್ಲಿ ತಲುಪಬಹುದು. ಇದಕ್ಕಾಗಿ ಪ್ರಯಾಣಿಕರ ಬಹಳ ದಿನಗಳ ಬೇಡಿಕೆ ಇತ್ತು. ಅದನ್ನು ಪ್ರಧಾನಿಗಳು ವಂದೇ ಮಾತರಂ ಯೋಜನೆಯಲ್ಲಿ ಸೇರಿಸಿದ್ದು, ಭಾರತದಲ್ಲಿ ಐದನೇ ರೈಲು ಹಾಗೂ ದಕ್ಷಣ ಭಾರತದಲ್ಲಿ ಮೊದಲ ಹೈಸ್ಪೀಡ್ ರೈಲನ್ನು ಉದ್ಗಾಟನೆ ಮಾಡುತ್ತಿರುವುದು ಆ ಭಾಗದ ಪ್ರಯಾಣಿಕರಿಗೆ ಹಾಗೂ ಆರ್ಥಿಕ ಬೆಳವಣಿಗೆಗೂ ಕೂಡ ಅನುಕೂಲವಾಗಲಿದೆ ಎಂದರು.
ಟರ್ಮಿನಲ್ -2 ಉದ್ಘಾಟನೆ
ವಿಮಾನನಿಲ್ದಾಣಕ್ಕೆ ಆಗಮಿಸಿ 2 ನೇ ಟರ್ಮಿನಲ್ ಉದ್ಘಾಟಿಸಲಿದ್ದಾರೆ. ಟರ್ಮಿನಲ್ -2 ಅಂತಾರಾಷ್ಟ್ರೀಯ ಮತ್ತು ದೇಶೀಯ ಪ್ರಯಾಣಿಕರಿಗೆ ಅನುಕೂಲವಾಗಲಿದೆ. ಸುಮಾರು 25 ಲಕ್ಷ ಪ್ರಯಾಣಿಕರ ಸಾಮಥ್ರ್ಯವನ್ನು ಟರ್ಮಿನಲ್ ಹೊಂದಿದೆ. ಈಗಿರುವುದು 35 ಲಕ್ಷ ಸಾಮರ್ಥ್ಯವುಳ್ಳದ್ದು, ಇವೆರಡೂ ಸೇರಿದರೆ ದೇಶದ 2 ನೇ ಅತಿ ದೊಡ್ಡ ಮತ್ತು ಅತಿ ಹೆಚ್ಚು ಫುಟ್‍ಪ್ರಿಂಟ್ ವಿಮಾನ ನಿಲ್ದಾಣವಾಗಲಿದೆ. ದೆಹಲಿಯ ನಂತರ ಅತಿ ದೊಡ್ಡ ವಿಮಾನನಿಲ್ದಾಣವಾಗಲಿದೆ. ಅದರ ಉದ್ಘಾಟನೆಯ ನಂತರ ಪ್ರಗತಿ ಪ್ರತಿಮೆ ಅನಾವರಣ ಮಾಡಿ ಸಾರ್ವಜನಿಕ ಸಭೆಗೆ ತೆರಳುತ್ತಾರೆ. ಅಲ್ಲಿ ಭಾಷಣ ಮುಗಿಸಿ ಮುಂದಿನ ಪ್ರಯಾಣ ಮಾಡಲಿದ್ದಾರೆ ಎಂದು ವಿವರಿಸಿದರು.
2-3 ದಿನಗಳಲ್ಲಿ ಗುಂಡಿಗಳನ್ನು ಮುಚ್ಚಲಾಗುವುದು
ಕಾಂಗ್ರೆಸ್ ಪ್ರಧಾನಿಗಳ ಆಗಮನದ ಹಿನ್ನೆಲೆಯಲ್ಲಿ ಗುಂಡಿಗಳನ್ನು ಮುಚ್ಚುತ್ತಿರುವ ಬಗ್ಗೆ ಟೀಕೆಸುತ್ತಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅದು ನಿರಂತರವಾಗಿ ನಡೆಯುತ್ತಿರುವ ಪ್ರಕ್ರಿಯೆ. 3-4 ದಿನಗಳಲ್ಲಿ ಎಲ್ಲಾ ಗುಂಡಿಗಳನ್ನು ಮುಚ್ಚಲಾಗುವುದು ಎಂದರು.
ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಚಿವರಾದ ಡಾ. ಸಿ. ಎನ್. ಅಶ್ವತ್ಥ್ ನಾರಾಯಣ, ಆರ್. ಅಶೋಕ್ ಹಾಗೂ ಮತ್ತಿತರರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru;ಹಣಕ್ಕಾಗಿ ಮೊಮ್ಮಗನಿಂದಲೇ ವೃದ್ಧ ದಂಪತಿಯ ಬರ್ಬರ ಹ*ತ್ಯೆ
Karnataka;ಕಾರ್ಪೊರೇಟ್ ಸಂಸ್ಥೆಗಳಿಂದ 100 ಇಂಜಿನಿಯರಿಂಗ್ ಕಾಲೇಜುಗಳ ದತ್ತು
Politics: ಬೆಳಗಾವಿ ಅಧಿವೇಶನವೇ ಸಿಎಂ ಸಿದ್ದರಾಮಯ್ಯರ ಕೊನೆಯ ಅಧಿವೇಶನ: ವಿಜಯೇಂದ್ರ
Hubli: ಗ್ಯಾರಂಟಿ ಯೋಜನೆ ಹಣ ನಿರ್ಹವಣೆಗೆ ಬಿಪಿಎಲ್ ಕಾರ್ಡ್ ರದ್ದು: ವಿಜಯೇಂದ್ರ ಆರೋಪ
Renukaswamy Case: ದರ್ಶನ್ ಜಾಮೀನು ಅರ್ಜಿ ವಿಚಾರಣೆ ಮುಂದೂಡಿಕೆ
MUST WATCH
ಹೊಸ ಸೇರ್ಪಡೆ
Kundapura: ಅಕ್ರಮ ಮರಳು ಸಾಗಾಟ: ಟಿಪ್ಪರ್ ಸಹಿತ ಮರಳು ವಶಕ್ಕೆ ;ಚಾಲಕ ಪರಾರಿ
Puttur: ಸ್ಕೂಲ್ ಬಸ್‌ಗೆ ಢಿಕ್ಕಿಯಾಗುವುದನ್ನು ತಪ್ಪಿಸಿ ಮನೆಗೆ ನುಗ್ಗಿದ ಖಾಸಗಿ ಬಸ್
Puttur: ಕಾರು ಚಾಲಕನಿಗೆ ಮೂರ್ಛೆ ರೋಗ: ಅಪಾಯದಿಂದ ಪಾರು
Kasaragod: ಫ್ಯಾಶನ್ ಗೋಲ್ಡ್ ವಂಚನೆ ಪ್ರಕರಣ: ಪೂಕೋಯ ತಂಙಳ್ ಮತ್ತೆ ಬಂಧನ
Actress Kasthuri; ನನ್ನನ್ನು ಕೆರಳಿದ ಬಿರುಗಾಳಿಯಂತೆ ಮಾಡಿದವರಿಗೆ ಧನ್ಯವಾದ!!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.