ಬೇರೆ ಸರ್ಕಾರ ಇದ್ದಿದ್ದರೆ ಪಿಎಸ್‍ಐ ಅಕ್ರಮ ಬೆಳಕಿಗೆ ಬರುತ್ತಿರಲಿಲ್ಲ: ಬಿ.ವೈ. ರಾಘವೇಂದ್ರ

Team Udayavani, May 10, 2022, 10:51 AM IST

ಬೇರೆ ಸರ್ಕಾರ ಇದ್ದಿದ್ದರೆ ಪಿಎಸ್‍ಐ ಅಕ್ರಮ ಬೆಳಕಿಗೆ ಬರುತ್ತಿರಲಿಲ್ಲ: ಬಿ.ವೈ. ರಾಘವೇಂದ್ರ

ಸೊರಬ: ರಾಜ್ಯದಲ್ಲಿ ಬಿಜೆಪಿ ಸರ್ಕಾರ ಪಾರದರ್ಶಕವಾಗಿ ಆಡಳಿತ ನಡೆಸುತ್ತಿದ್ದು, ಬೇರೆ ಯಾವುದೇ ಪಕ್ಷ ಅಧಿಕಾರದಲ್ಲಿ ಇದ್ದಿದ್ದರೆ ಪಿಎಸ್‍ಐ ನೇಮಕಾತಿಯಲ್ಲಿನ ಆರೋಪಗಳು ಬೆಳಕಿಗೆ ಬರುತ್ತಿರಲಿಲ್ಲ. ಈ ವಿಷಯದಲ್ಲಿ ಸರ್ಕಾರ ದಿಟ್ಟ ನಿಲುವು ಕೈಗೊಂಡಿದ್ದು, ತಪ್ಪು ಮಾಡಿದವರಿಗೆ ತಕ್ಕ ಶಿಕ್ಷೆಯಾಗಲಿದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಹೇಳಿದರು.

ಪಟ್ಟಣದ ಶ್ರೀ ಮುರುಘಾಮಠದ ಆವರಣದಲ್ಲಿ ನಿರ್ಮಾಣವಾಗುತ್ತಿರುವ 2.5 ಕೋಟಿ ರೂ., ವೆಚ್ಚದ ಸಭಾ ಭವನದ ಕಟ್ಟಡ ಕಾಮಗಾರಿಯನ್ನು ವೀಕ್ಷಿಸಿ, ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರ್ಕಾರ ಸಮರ್ಥವಾಗಿ ಆಡಳಿತ ನಡೆಸುತ್ತಿದೆ. ಪಿಎಸ್‍ಐ ನೇಮಕಾತಿಯಲ್ಲಿ ಅಕ್ರಮ ನಡೆದಿದೆ ಎನ್ನುವ ಆರೋಪಗಳಿಗೆ ಸೂಕ್ತವಾದ ತನಿಖೆಯಾಗುತ್ತಿದ್ದು, ತಪ್ಪಿತಸ್ಥರ ವಿರುದ್ಧ ಸರ್ಕಾರ ದಿಟ್ಟ ನಿಲುವು ಕೈಗೊಳ್ಳಲಿದೆ ಎಂದರು.

ರಾಜ್ಯ ಬಿಜೆಪಿ ಸರ್ಕಾರದ ಸಂಪುಟ ವಿಸ್ತರಣೆ ಕುರಿತು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದ ಸಂಸದರು, ಸಚಿವ ಸಂಪುಟ ವಿಸ್ತರಣೆ ಪಕ್ಷದ ವರಿಷ್ಠರು ತೀರ್ಮಾನ ಕೈಗೊಳ್ಳಲಿದ್ದಾರೆ. ಜಿಲ್ಲೆಗೆ ಮತ್ತೊಂದು ಸಚಿವ ಸ್ಥಾನ ಲಭಿಸಿದರೆ ಸಂತೋಷದ ವಿಷಯ. ಅಭಿವೃದ್ಧಿಯ ದೃಷ್ಟಿಯಿಂದಲೂ ಉತ್ತಮವಾಗಲಿದೆ. ಆಡಳಿತದ ಅವಧಿ ಕೇವಲ ಒಂದು ವರ್ಷ ಬಾಕಿ ಇದ್ದು, ಮುಂದಿನ ದಿನಗಳಲ್ಲಿಯೂ ಜನಹಿತವಾದ ಆಡಳಿತವನ್ನು ನೀಡಲಿದೆ ಎಂದರು.

ಇದನ್ನೂ ಓದಿ: Covid:ದಾನಿಶ್ ಸಿದ್ದಿಖಿ ಸೇರಿದಂತೆ ನಾಲ್ವರು ಭಾರತೀಯರಿಗೆ ಪ್ರತಿಷ್ಠಿತ ಪುಲಿಟ್ಜರ್ ಪ್ರಶಸ್ತಿ

ಬಿ.ಎಸ್. ಯಡಿಯೂರಪ್ಪ ಅವರ ಅಭಿಮಾನಿಗಳು ಮತ್ತು ಅನೇಕ ಗಣ್ಯರು, ಮಠಾಧೀಶರ ಸಲಹೆ ಮೇರೆಗೆ ರಾಜ್ಯ ಸರ್ಕಾರ ಶಿವಮೊಗ್ಗ ಸಮೀಪ ಸೋಗಾನೆಯಲ್ಲಿ ನಿರ್ಮಾಣವಾಗುತ್ತಿರುವ ವಿಮಾನ ನಿಲ್ದಾಣಕ್ಕೆ ಬಿ.ಎಸ್. ಯಡಿಯೂರಪ್ಪ ಅವರ ಹೆಸರನ್ನಿಡಲು ತೀರ್ಮಾನಿಸಿತ್ತು. ಆದರೆ, ಇದನ್ನು ಬಿ.ಎಸ್. ಯಡಿಯೂರಪ್ಪ ಅವರು ನಯವಾಗಿ ತಿರಸ್ಕರಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಯಡಿಯೂರಪ್ಪ ಅವರ ಕೊಡುಗೆ ಸಾಕಷ್ಟಿದೆ. ಅಭಿವೃದ್ಧಿ ಎಂದರೆ ಕೇವಲ ಕಟ್ಟಡ-ರಸ್ತೆಗಳ ನಿರ್ಮಾಣವಲ್ಲ. ಜನತೆಯ ಬದುಕಿಗೆ ಆಸರೆಯಾಗಿ ಯೋಜನೆಗಳನ್ನು ರೂಪಿಸಿ, ಮೂಲ ಸೌಕರ್ಯಗಳಿಗೆ ಒತ್ತು ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಸರ್ಕಾರ ಸೂಕ್ತ ನಿರ್ಧಾರ ಕೈಗೊಳ್ಳಲಿದೆ ಎಂದರು.

ಸ್ವಪಕ್ಷಿಯರೇ ಆದ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಸರ್ಕಾರದ ವಿರುದ್ಧವೇ ಹಣ ನೀಡಿದ್ದರೆ ಅಧಿಕಾರ ಹಿಡಿಯುತ್ತಿದ್ದೆ ಎಂದು ಆರೋಪಿಸಿರುವ ಕುರಿತ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಂಸದರು, ಈ ಬಗ್ಗೆ ಪಕ್ಷದಲ್ಲಿ ಹಿರಿಯರಿದ್ದಾರೆ. ಕೇಂದ್ರದ ಸಂಸದನಾಗಿ ಪ್ರತಿಕ್ರಿಯೆ ನೀಡಲಾರೆ ಎಂದ ಅವರು, ರಾಜ್ಯದಲ್ಲಿ ವಿಪಕ್ಷವಾಗಿರುವ ಕಾಂಗ್ರೆಸ್ ತನ್ನ ಅಸ್ತಿತ್ವ ಉಳಿಸಿಕೊಳ್ಳಲು ನಾನಾ ಪ್ರಯತ್ನ ಮಾಡುತ್ತಿದೆ. ಸರ್ಕಾರದ ವಿರುದ್ಧ ಹೋರಾಟಗಳು, ಸಮಾವೇಶಗಳನ್ನು ಹಮ್ಮಿಕೊಳ್ಳುತ್ತಿದೆ. ಸರ್ಕಾರ ವಿರುದ್ಧ ಆರೋಪಿಸಲು ಸಮರ್ಥವಾದ ಕಾರಣ ಇಲ್ಲದೇ ಇರುವುದರಿಂದ ಚುನಾವಣೆಯ ಹೊಸ್ತಿಲಲ್ಲಿ ಸಂಘಟನೆಯ ಉಳಿವಿಗಾಗಿ ರಾಜಕೀಯ ಗಿಮಿಕ್ ಮಾಡುತ್ತಿದೆ ಎಂದು ಲೇವಡಿ ಮಾಡಿದರು.

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಮುಂಬರುವ ಚುನಾವಣೆಯಲ್ಲಿ ಯುವಕರಿಗೆ ಪ್ರಾತಿನಿಧ್ಯತೆ ನೀಡಲಾಗುವುದು ಎಂದಿರುವ ಹೇಳಿಕೆಯನ್ನು ಸಮರ್ಥಿಸಿಕೊಂಡ ಸಂಸದ ಬಿ.ವೈ. ರಾಘವೇಂದ್ರ, ಬಿಜೆಪಿ ಕಾರ್ಯಕರ್ತರ ಪಕ್ಷವಾಗಿದೆ. ಪಕ್ಷದಲ್ಲಿ ಅಧಿಕಾರವೆಂಬುದು ಶಾಶ್ವತವಲ್ಲ. ರಾಜಕಾರಣ ಎಂಬುದು ನಿಂತ ನೀರಲ್ಲ. ಈ ನಿಟ್ಟಿನಲ್ಲಿ ಪಕ್ಷದ ನಿಷ್ಟಾವಂತ ಕಾರ್ಯಕರ್ತ ಹೊಸ ಮುಖಗಳಿಗೆ ಆದ್ಯತೆ ನೀಡುವುದು ಸರಿ ಎಂದರು.

ಈ ಸಂದರ್ಭದಲ್ಲಿ ಜಡೆ ಸಂಸ್ಥಾನ ಮಠದ ಹಾಗೂ ಸೊರಬ ಮುರುಘಾಮಠದ ಶ್ರೀ. ಡಾ. ಮಹಾಂತ ಸ್ವಾಮೀಜಿ, ಶಾಂತಾಪುರ ಮಠದ ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ಪುರಸಭೆ ಅಧ್ಯಕ್ಷ ಈರೇಶ್ ಮೇಸ್ತ್ರಿ, ಪ್ರಮುಖರಾದ ಚಿಕ್ಕಾವಲಿ ನಾಗರಾಜಗೌಡ, ನಿರಂಜನ ಕುಪ್ಪಗಡ್ಡೆ, ಗಜಾನನರಾವ್ ಉಳವಿ, ಅಶೋಕ್ ನಾಯ್ಕ್ ಅಂಡಿಗೆ, ಡಾ. ಎಚ್.ಇ. ಜ್ಞಾನೇಶ್, ಸಿ.ಪಿ. ಈರೇಶ್‍ಗೌಡ, ಯೋಗೇಶ್ ವಕೀಲ, ನಾಗರಾಜ ಗುತ್ತಿ, ವೀರೇಂದ್ರ ಪಾಟೀಲ್, ಸಂಜೀವ ಆಚಾರಿ, ಡಿ. ಶಿವಯೋಗಿ, ಬಸವರಾಜಗೌಡ ಸೇರಿದಂತೆ ಮತ್ತಿತರರು ಇದ್ದರು.

ಟಾಪ್ ನ್ಯೂಸ್

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Sagara: ಚಿರತೆ ಉಗುರು, ಹಲ್ಲು ಅಕ್ರಮ ಸಾಗಣೆ… ಸೊತ್ತು ಸಮೇತ ವ್ಯಕ್ತಿ ವಶ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

Mudhol: ಸಾಲಬಾಧೆಗೆ ಹೆದರಿ ರೈತ ಮಹಿಳೆ ಬಾವಿಗೆ ಹಾರಿ ಆತ್ಮಹತ್ಯೆ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Bidar-Solha-kamb

Waqf Property: ಬೀದರ್‌ನ ಬಹುಮನಿ ಕೋಟೆಗೂ ವಕ್ಫ್ ಮೊಹರು!

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

SALMAN-KHAN

Threat: ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

ಅಂಗಡಿಯಲ್ಲಿ‌ ಬಿಟ್ಟು ಹೋಗಿದ್ದ 1.20 ಲ.ರೂ ಹಿಂದಿರುಗಿಸಿ ಮಾನವೀಯತೆ ಮೆರೆದ ಶಾಸಕ ಬಸವಂತಪ್ಪ 

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ

231

BBK11: ಕ್ಯಾಪ್ಟನ್‌ ಹನುಮಂತುಗೆ ನಿಯತ್ತಿನ ಪ್ರಶ್ನೆ ಹಾಕಿ, ರೇಗಾಡಿದ ಚೈತ್ರಾ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.