ಮೇಲುಕೋಟೆ ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ಮಧ್ಯಪ್ರದೇಶ ಸಿಎಂ
ಬೆಳ್ಳಿಯ ರಥ ಸಂಕಲ್ಪದ ಹರಕೆ ಶೀಘ್ರದಲ್ಲಿಯೇ ಸಮರ್ಪಣೆ : ಶಿವರಾಜ್‌ಸಿಂಗ್ ಚೌವ್ಹಾಣ್
Team Udayavani, Nov 18, 2020, 7:43 PM IST
ಮಂಡ್ಯ: ಅಂದುಕೊoಡ ಹರಕೆ ಈಡೇರಿದ ಹಿನ್ನೆಲೆಯಲ್ಲಿ ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್‌ಸಿಂಗ್ ಚೌವ್ಹಾಣ್ ಮೂರನೇ ಬಾರಿಗೆ ಮೇಲುಕೋಟೆಯ ಶ್ರೀ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದರು.
ಇದಕ್ಕೂ ಮೊದಲು ಆಂಧ್ರಪ್ರದೇಶದ ತಿರುಪತಿ ಶ್ರೀ ವೆಂಕಟೇಶ್ವರಸ್ವಾಮಿ ದರ್ಶನ ಪಡೆದ ಶಿವರಾಜ್‌ಸಿಂಗ್ ಚೌವ್ಹಾಣ್ ಕುಟುಂಬ ನೇರವಾಗಿ ವಿಶೇಷ ವಿಮಾನದಲ್ಲಿ ಮೈಸೂರಿಗೆ ಆಗಮಿಸಿದರು. ನಂತರ ಕಾರಿನ ಮೂಲಕ ಮಧ್ಯಾಹ್ನ 3 ಗಂಟೆಗೆ ಮೇಲುಕೋಟೆಗೆ ಆಗಮಿಸಿ ಶ್ರೀ ಚೆಲುವನಾರಾಯಣಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕುಟುಂಬ ಸಮೇತರಾಗಿ ಆಗಮಿಸಿದ ಶಿವರಾಜ್‌ಸಿಂಗ್ ಚೌವ್ಹಾಣ್ ಅವರನ್ನು ಜಿಲ್ಲಾಧಿಕಾರಿ ಡಾ.ಎಂ.ವಿ.ವೆoಕಟೇಶ್ ಜಿಲ್ಲಾಡಳಿತದ ಪರವಾಗಿ ಸ್ವಾಗತಿಸಿದರು. ನಂತರ ಪೂರ್ಣಕುಂಭ ಸ್ವಾಗತ ನೀಡಿ ಬರಮಾಡಿಕೊಳ್ಳಲಾಯಿತು. ಮೊದಲಿಗೆ ಮೂಲಮೂರ್ತಿ ಶ್ರೀ ಚೆಲುವನಾರಾಯಣಸ್ವಾಮಿ, ಯದುಗಿರಿ ನಾಯಕಿ ಭಗವದ್ರಾಮಾನುಜಾಚಾರ್ಯರ ದರ್ಶನ ಪಡೆದರು. ರಾಮಾನುಜರ ಸನ್ನಿಧಿಯಲ್ಲಿ ಮುಖ್ಯಮಂತ್ರಿಗಳ ಕುಟುಂಬಕ್ಕೆ ವೇದ ಮಂತ್ರದೊಂದಿಗೆ ರಾಜಾಶೀರ್ವಾದ ಮಾಡಲಾಯಿತು.
ಬೆಳ್ಳಿಯ ರಥ ನಿರ್ಮಾಣಕ್ಕೆ ಶೀಘ್ರ ಚಾಲನೆ:
ಸ್ಥಾನಾಚಾರ್ಯ ಶ್ರೀನಿವಾಸನರಸಿಂಹನ್ ವಿದ್ವಾನ್ ರಾಮಪ್ರಿಯ ರಾಮಾನುಜರ ಸನ್ನಿಧಿ ಅರ್ಚಕ ವಿದ್ವಾನ್ ರಾಮಪ್ರಿಯ ಬೆಳ್ಳಿರಥ ಸಮರ್ಪಿಸಲು ಕೋರಿ ಮನವಿ ಅರ್ಪಿಸಿದರು. ಇದಕ್ಕೆ ಸ್ಪಂದಿಸಿದ ಅವರು, ಚೆಲುವನಾರಾಯಣಸ್ವಾಮಿಯ ದರ್ಶನ ಭಾಗ್ಯದಿಂದ ನನಗೆ ಅಧಿಕಾರ ಲಭಿಸಿದೆ. ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಮತ್ತು ಸ್ಥಾನೀಕರು, ರಾಮಾನುಜರ ಸನ್ನಿಧಿಯ ಅರ್ಚಕರ ಆಶಯದಂತೆ ಸ್ವಾಮಿಗೆ ಸಮರಭೂಪಾಲ ಬೆಳ್ಳಿಯ ರಥ ಮಾಡಿಸಿ ನಾನೇ ಖುದ್ದಾಗಿ ಅರ್ಪಿಸುತ್ತೇನೆ ಎಂದು ವಾಗ್ದಾನ ಮಾಡಿದರು. ಅಧಿಕಾರ ಬಲದಿಂದಾಗಿ ಬಡವರಿಗೆ ಮತ್ತು ನೊಂದವರಿಗೆ ಸಹಾಯ ಮಾಡಲು ಭಗವಂತ ಮತ್ತಷ್ಟು ಶಕ್ತಿ ನೀಡಿದ್ದಾನೆ ಎಂದರು. ನಂತರ ಬೆಟ್ಟಹತ್ತಿದ ಶಿವರಾಜ್ ಸಿಂಗ್ ಯೋಗಾನರಸಿಂಹಸ್ವಾಮಿಯ ದರ್ಶನ ಪಡೆದರು.
3ನೇ ಬಾರಿ ದರ್ಶನ:
ಮಧ್ಯಪ್ರದೇಶದಲ್ಲಿ ಅಧಿಕಾರ ಕಳೆದುಕೊಂಡು ವಿರೋಧ ಪಕ್ಷದ ನಾಯಕರಾಗಿದ್ದ ಶಿವರಾಜ್‌ಸಿಂಗ್ ಚೌವ್ಹಾಣ್ ಮೇಲುಕೋಟೆಗೆ ಪ್ರಥಮ ಭಾರಿಗೆ ಭೇಟಿ ನೀಡಿ ಅಧಿಕಾರಕ್ಕಾಗಿ ಪ್ರಾರ್ಥಿಸಿದ್ದರು. ದೈವಕೃಪೆಯಿಂದ ಅಧಿಕಾರ ಲಭಿಸಿದ ತಕ್ಷಣ ಮತ್ತೆ ಆಗಮಿಸಿ ದೇವರ ದರ್ಶನ ಪಡೆದಿದ್ದರು. ಇದೀಗ ನಡೆದ ಉಪಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಮತ್ತಷ್ಟು ಭದ್ರವಾಗುತ್ತಿದ್ದಂತೆ ಮೇಲುಕೋಟೆಗೆ ಆಗಮಿಸಿ ಚೆಲುವನಾರಾಯಣಸ್ವಾಮಿಯ ದರ್ಶನ ಪಡೆದು ಬೆಳ್ಳಿಯ ರಥ ನೀಡುವ ಸಂಕಲ್ಪ ಮಾಡಿದ್ದಾರೆ.
ಎಲ್ಲರೂ ಆತ್ಮನಿರ್ಭರ ಸಂಕಲ್ಪ ಮಾಡಬೇಕು:
ಚೆಲುವನಾರಾಯಣಸ್ವಾಮಿ ದರ್ಶನ ಪಡೆದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ ಎಲ್ಲ ಜನರಿಗೂ ದೀಪಾವಳಿ ಶುಭಾಶಯ ತಿಳಿಸಿದರು. ನಾನು ಮೇಲುಕೋಟೆ ದೇವರ ದರ್ಶನ ಪಡೆದಿದ್ದೇನೆ. ದೇಶ ಮತ್ತು ಮಧ್ಯಪ್ರದೇಶದ ಜನರಿಗೆ ಒಳಿತಾಗುವಂತೆ ಪ್ರಾರ್ಥನೆ ಮಾಡಿದ್ದೇನೆ. ನಮ್ಮ ದೇಶದ ಪ್ರಧಾನಮಂತ್ರಿ ಆತ್ಮನಿರ್ಭರ ಸಂಕಲ್ಪ ಮಾಡಿದ್ದಾರೆ. ಆ ಸಂಕಲ್ಪ ಮಾಡಲು ಎಲ್ಲ ಪ್ರದೇಶಗಳಲ್ಲಿ ಆತ್ಮ ನಿರ್ಭರ ಮಾಡಬೇಕಿದೆ. ಈ ಸಂಕಲ್ಪಕ್ಕಾಗಿ ಮಧ್ಯಪ್ರದೇಶದ ಜನರು ಕೂಡ ಕೈಜೋಡಿಸಿದ್ದಾರೆ ಎಂದರು.
ಕೊರೊನಾ ಸೋಂಕು ತೊಲಗಿ ಜನರ ಹೃದಯದಲ್ಲಿ ಸಂತೋಷ ಬರುಬೇಕಿದೆ. ನಮ್ಮ ದೇಶ ಭಾರತ ಮತ್ತೊಮ್ಮೆ ವಿಶ್ವಗುರು ಆಗಬೇಕಿದೆ ಇದೇ ನನ್ನ ಪ್ರಾರ್ಥನೆ. ಇದಕ್ಕಾಗಿ ಎಲ್ಲರಿಗೂ ಒಳ್ಳೆಯ ಬುದ್ಧಿ ಕೊಡಲಿ ಎಂದು ಬೇಡಿಕೊಂಡಿದ್ದೇನೆ. ನಾನು ಮುಖ್ಯಮಂತ್ರಿ ಆಗಲು ಈ ಮೇಲುಕೋಟೆ ಭಗವಂತ ಕಾರಣ. ಭಗವಂತನಾ ಆಜ್ಞೆ ಇಲ್ಲದೆ ಏನೂ ನಡೆಯಲ್ಲ. ಇದು ನಿಜವಾಗಿಯೂ ದೇವರ ಕೃಪೆ ಎಂದು ಹೇಳಿದರು.
ಪಾಂಡವಪುರ ಉಪವಿಭಾಗಾಧಿಕಾರಿ ಶಿವಾನಂದಮೂರ್ತಿ, ತಹಶೀಲ್ದಾರ್ ಪ್ರಮೋದ್ ಪಾಟೀಲ್, ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಮಂಗಳಮ್ಮ, ಬಿಜೆಪಿ ಮುಖಂಡರಾದ ನಾಗಣ್ಣಗೌಡ, ಸೋಮಶೇಖರ್, ಪುರುಷೋತ್ತಮ್ ಇತರರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Shimoga; ನಿತ್ಯ ಸುದ್ದಿಯಲ್ಲಿರಬೇಕೆಂದು ಸಿ.ಟಿ ರವಿ ʼಆʼ ಹೇಳಿಕೆ ನೀಡಿದ್ದಾರೆ: ಆಯನೂರು
Tragedy: ಆನೆ ತುಳಿದು ಮಾವುತನ ಸಹಾಯಕ ಮೃತ್ಯು… ಮುಗಿಲು ಮುಟ್ಟಿದ ಕುಟುಂಬಸ್ಥರ ಆಕ್ರಂದನ
Sirsi: ಅರಣ್ಯವಾಸಿಗಳ 50,000 ಕ್ಕೂ ಮಿಕ್ಕಿ ಜಿ.ಪಿ.ಎಸ್ ನಕಾಶೆ ಅತಂತ್ರ: ರವಿಂದ್ರ ನಾಯ್ಕ
Hubli: ಕಾಂಗ್ರೆಸ್‌ನಲ್ಲಿ ಈಗ ಇರುವವರೆಲ್ಲ ನಕಲಿ ಗಾಂಧಿಗಳು..: ಪ್ರಹ್ಲಾದ ಜೋಶಿ
Belagavi; ಬಹಳ ನೋವಾಗಿದೆ, ನೂರು ಸಿ.ಟಿ.ರವಿ ಬಂದರೂ ಹೆದರುವುದಿಲ್ಲ: ಲಕ್ಷ್ಮೀ ಹೆಬ್ಬಾಳಕರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.