MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ


Team Udayavani, Apr 29, 2024, 7:46 AM IST

Untitled-1

ಬೆಂಗಳೂರು: ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ (77) ನಿಧನರಾಗಿದ್ದಾರೆ.

ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶ್ರೀನಿವಾಸ್ ಪ್ರಸಾದ್ ಅವರು ಏಪ್ರಿಲ್ 22ರಂದು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗತ್ತು. ಚಿಕಿತ್ಸೆ ಫಲಿಸದೇ ತೀವ್ರ ಹೃದಯಾಘಾತದಿಂದ ಶ್ರೀನಿವಾಸ್ ಪ್ರಸಾದ್ ಅವರು ಕೊನೆಯುಸಿರೆಳೆದಿದ್ದಾರೆ ಎಂದು ವರದಿಯಾಗಿದೆ.

ಮೂತ್ರಕೋಶ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದ ಅವರ ಆರೋಗ್ಯದಲ್ಲಿ ಇತ್ತೀಚೆಗೆ ಏರುಪೇರಾಗಿತ್ತು. ಬೆಂಗಳೂರಿನ ಖಾಸಗಿ ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು.

ಸದ್ಯ ಅವರ ಪಾರ್ಥಿವ ಶರೀರವನ್ನು  ಮೈಸೂರಿನ ಜಯಲಕ್ಷ್ಮೀಪುರ ನಿವಾಸಕ್ಕೆ ರವಾನೆ ಮಾಡಲಾಗಿದೆ. ಅಲ್ಲೇ  ಅಂತಿಮ ದರ್ಶನಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ ಎನ್ನುವ ಮಾಹಿತಿ ಲಭ್ಯವಾಗಿದೆ.

ಅಂತಿಮ ದರ್ಶನ ಪಡೆದ ಗಣ್ಯರು: ವಿ ಶ್ರೀನಿವಾಸ್ ಪ್ರಸಾದ್ ನಿವಾಸಕ್ಕೆ ಸುತ್ತೂರು ಶ್ರೀಗಳ ಆಗಮಿಸಿ ಅಂತಿಮ ದರ್ಶನವನ್ನು ಪಡೆದಿದ್ದಾರೆ. ಈ ವೇಳೆ ಕುಟುಂಬಸ್ಥರಿಗೆ ಸುತ್ತೂರು ಶ್ರೀಗಳು ಸಾಂತ್ವನ ಹೇಳಿದ್ದಾರೆ.  ದೇವನೂರು ಮಹದೇವ್ ಹಾಗೂ  ಎಂ.ಎಲ್.ಸಿ ವಿಶ್ವನಾಥ್ ಆಗಮಿಸಿ ಶ್ರೀನಿವಾಸ್ ಪ್ರಸಾದ್ ಅವರ ಅಂತಿಮ ದರ್ಶನ ಪಡೆದರು.

ನಾಳೆ ಅಂತ್ಯಕ್ರಿಯೆ : ಮಂಗಳವಾರ(ಏ.30 ರಂದು ಶ್ರೀನಿವಾಸ್ ಪ್ರಸಾದ್ ಅಂತ್ಯಕ್ರಿಯೆ ನಡೆಯಲಿದೆ. ಬೌಧ್ದ ಧರ್ಮದ ವಿಧಿವಿಧಾನದಂತೆ ನಡೆಯಲಿದೆ. ಅವರ ಬೌದ್ದ ಧರ್ಮ ಅನುಯಾಯಿಯಾಗಿದ್ದರು. ಇಂದು ಮಧ್ಯಾಹ್ನ 1 ಗಂಟೆ ವರೆಗೆ ಜಯಲಕ್ಷ್ಮಿ ಪುರಂ ನಿವಾಸದಲ್ಲಿ ದರ್ಶನಕ್ಕೆ ವ್ಯವಸ್ಥೆ‌ ಮಾಡಲಾಗಿದೆ. ಬಳಿಕ ಅಶೋಕಪುರಂನ ಎನ್.ಟಿ.ಎಂ ಶಾಲೆಯಲ್ಲಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗುತ್ತದೆ. ನಾಳೆ ಅಶೋಕ್ ಪುರಂನಲ್ಲಿ ಮೆರವಣಿಗೆ ಮಾಡಲಾಗುತ್ತದೆ
ಸಿಲ್ಕ್ ಫ್ಯಾಕ್ಟರಿ ಸರ್ಕಲ್ ಬಳಿಕ ಡಾ.ಅಂಬೇಡ್ಕರ್ ಟ್ರಸ್ಟ್ ಆವರಣದಲ್ಲಿ ಅಂತ್ಯಕ್ರಿಯೆ ನೆರವೇರಲಿದೆ ಎಂದು
ಶ್ರೀನಿವಾಸ್ ಪ್ರಸಾದ್ ಪುತ್ರಿ ಪ್ರತಿಮಾ ಪ್ರಸಾದ್‌ ಹೇಳಿದ್ದಾರೆ.

ರಾಜಕೀಯ ಜೀವನ: ಹಳೇ ಮೈಸೂರು ಭಾಗದಲ್ಲಿ ಅಪಾರ ಸಂಖ್ಯೆಯ ಅಭಿಮಾನಿಗಳನ್ನ ಹೊಂದಿದ್ದ ಅವರು,
ದಕ್ಷಿಣ ಕರ್ನಾಟಕದ ದಲಿತ ಸೂರ್ಯ ಎಂದೇ ಖ್ಯಾತರಾಗಿದ್ದರು. ಚಾಮರಾಜನಗರ ಸಂಸದರಾಗಿ ಸೇವೆ ಸಲ್ಲಿಸುತ್ತಿದ್ದ ಅವರು ಕಳೆದ ಮಾರ್ಚ್ 17 ರಂದು ಪ್ರಸಾದ್ ರಾಜಕೀಯ ನಿವೃತ್ತಿ ಘೋಷಿಸಿದ್ದರು. ರಾಜಕೀಯ ಕ್ಷೇತ್ರದಲ್ಲಿ 50 ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ವಿ. ಶ್ರೀನಿವಾಸ್ ಪ್ರಸಾದ್ ಅವರು 1974ರಲ್ಲಿ ಕೃಷ್ಣರಾಜ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಸ್ಪರ್ಧಿಸುವ ಮೂಲಕ ಅನಿರೀಕ್ಷಿತವಾಗಿ ರಾಜಕೀಯ ಪ್ರವೇಶ ಮಾಡಿದ್ದರು. 1978ರ ಸಾರ್ವತ್ರಿಕ ಚುನಾವಣೆಗೆ ತಿ.ನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿ ಸೋಲು ಕಂಡಿದ್ದರು. ಬಳಿಕ 1980ರಲ್ಲಿ ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸಿ ಆಯ್ಕೆಯಾಗುವ ಮೂಲಕ 33ರ ಹರೆಯದಲ್ಲೇ ಸಂಸತ್ ಪ್ರವೇಶ ಮಾಡಿದ್ದರು.

ಅವರು ಪತ್ನಿ ಮತ್ತು ಮೂವರು ಮಕ್ಕಳನ್ನು ಅಗಲಿದ್ದಾರೆ.

ಟಾಪ್ ನ್ಯೂಸ್

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Udupi: ಭಗವದ್ಗೀತೆ ಜೀವನದ ಭಾಗವಾಗಲಿ: ಸುಬ್ರಹ್ಮಣ್ಯ ಶ್ರೀ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Yathanal

Winter Session: ಪಂಚಮಸಾಲಿಗಳ ಮೇಲೆ ಲಾಠಿ ಬೀಸಿದವರಿಗೆ ಬಹುಮಾನ; ಶಾಸಕ ಯತ್ನಾಳ್‌ ಆಕ್ರೋಶ

BY-Vijayendra

Congress: ಸರಕಾರ ಕನ್ನಡದ ಅಭಿವೃದ್ಧಿಯನ್ನೂ ಶೂನ್ಯವಾಗಿಸಲು ಹೊರಟಿದೆ: ಬಿ.ವೈ.ವಿಜಯೇಂದ್ರ

Baduta-Mandya

Mandya: ಸಾಹಿತ್ಯ ಸಮ್ಮೇಳನದಲ್ಲಿ ಬಾಡೂಟ ಗಲಾಟೆ: ಪೊಲೀಸರೊಂದಿಗೆ ಮಾತಿನ ಚಕಮಕಿ!

Minister Priyank Kharge stays away from Jayadeva Hospital inauguration ceremony

Jayadeva Hospital ಉದ್ಘಾಟನಾ ಸಮಾರಂಭದಿಂದ ದೂರ ಉಳಿದ ಸಚಿವ ಪ್ರಿಯಾಂಕ್ ಖರ್ಗೆ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

Karnataka: ಸರಕಾರದಿಂದ ಕನ್ನಡದ ಅಭಿವೃದ್ಧಿಯೂ ಶೂನ್ಯ: ಬಿ.ವೈ. ವಿಜಯೇಂದ್ರ

1-a-bb

Pro Kabaddi: ಬೆಂಗಳೂರು ಬುಲ್ಸ್‌ ಗೆ 18ನೇ ಸೋಲು

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

Mandya: ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ 46 ಮಂದಿ ಸಾಧಕರಿಗೆ ಸಮ್ಮಾನ

“ರವಿ ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

“CT Ravi ಹತ್ಯೆ ಸಂಚಿನಲ್ಲಿ ಸಿಎಂ, ಗೃಹ ಸಚಿವರ ಕೈವಾಡ’: ಆರ್‌. ಅಶೋಕ್‌

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿದ್ದರಾಮಯ್ಯ

CT Ravi ಪ್ರಕರಣ ನ್ಯಾಯಾಂಗ ತನಿಖೆ ಏಕೆ: ಸಿಎಂ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.