ಸಿದ್ದರಾಮಯ್ಯ – ಜಿ.ಟಿ ದೇವೇಗೌಡ ದೋಸ್ತಿ ಹಾಸ್ಯಾಸ್ಪದ: ಸಂಸದ ವಿ. ಶ್ರೀನಿವಾಸಪ್ರಸಾದ್
Team Udayavani, Dec 7, 2021, 12:42 PM IST
ಮೈಸೂರು: ವಿಧಾನ ಪರಿಷತ್ ಚುನಾವಣೆಗೆ ಮೂರು ದಿನ ಮಾತ್ರ ಬಾಕಿಯಿದೆ. ಅನಾರೋಗ್ಯದ ಹಿನ್ನೆಲೆಯಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯ ಪರವಾಗಿ ಪ್ರಚಾರಕ್ಕೆ ತೆರಳಲು ನನಗೆ ಸಾಧ್ಯವಾಗಿಲ್ಲ. ಅವರ ಪರ ಮಾಜಿ ಸಿಎಂ ಯಡಿಯೂರಪ್ಪ, ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರು ವ್ಯಾಪಕ ಪ್ರಚಾರ ಮಾಡಿದ್ದಾರೆ. ರಘು ಕೌಟಿಲ್ಯ ಗೆಲ್ಲುವ ವಿಶ್ವಾಸವಿದೆ ಎಂದು ಸಂಸದ ವಿ. ಶ್ರೀನಿವಾಸಪ್ರಸಾದ್ ಹೇಳಿದರು.
ಮೈಸೂರಿನ ಜಯಲಕ್ಷ್ಮಿಪುರಂನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಟಿ ಉದ್ದೇಶಿಸಿ ಮಾತನಾಡಿದ ಅವರು,ಆರೋಗ್ಯ ಸರಿಯಿಲ್ಲದ ಕಾರಣ ನಾನು ಪ್ರಚಾರದಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲು ಸಾಧ್ಯವಾಗಿಲ್ಲ. ಮೊದಲೆಲ್ಲಾ ಕಾಂಗ್ರೆಸ್ ಜೆಡಿಎಸ್ ನಡುವೆ ಮಾತ್ರ ನೇರ ಸ್ಪರ್ಧೆ ಏರ್ಪಡುತ್ತಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ಬಿಜೆಪಿ ಪ್ರಬಲವಾಗಿರುವುದರಿಂದ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈ ಬಾರಿಯ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೌಟಿಲ್ಯ ಗೆಲುವು ಸಾಧಿಸಲಿದ್ದಾರೆ. ರಘು ಕೌಟಿಲ್ಯ ಗೆಲುವಿನ ಬಗ್ಗೆ ವಿಶ್ವಾಸವಿದೆ ಎಂದು ಹೇಳಿದರು.
ಇದನ್ನೂ ಓದಿ: ಎರಡೂವರೆ ವರ್ಷದ ಮಗುವಿನ ಮೇಲೆ ಅತ್ಯಾಚಾರ; ಒಂದು ತಿಂಗಳೊಳಗೆ ತೀರ್ಪು ನೀಡಿದ ಕೋರ್ಟ್
ಕಳೆದ ಆರು ವರ್ಷಗಳ ಚುನಾವಣೆಯಲ್ಲಿ ಬಿಜೆಪಿ ಬಲಿಷ್ಠವಾಗಿದೆ. ರಾಜ್ಯ ರಾಜರಕರಣದಲ್ಲಿ ಬಹಳಷ್ಟು ಬದಲಾವಣೆ ಆಗಿದೆ. ಬಿಜೆಪಿಯಲ್ಲಿ ಸಂಘಟನಾ ಕಾರ್ಯ ಚೆನ್ನಾಗಿದೆ ಎಂದರು.
ಮೈಸೂರು ಜಿಲ್ಲೆಯಲ್ಲಿ ಸಿದ್ದರಾಮಯ್ಯ-ಜಿ ಟಿ ದೇವೇಗೌಡ ಹತ್ತಿರವಾಗಿರುವ ವಿಚಾರದ ಕುರಿತು ಪ್ರತಿಕ್ರಿಯೆ ನೀಡಿದ ಅವರು, ಕಳೆದ ಚುನಾವಣೆಯಲ್ಲಿ ಸಿದ್ದರಾಮಯ್ಯರನ್ನು ಜಿ ಟಿ ದೇವೇಗೌಡ ಹೀನಾಯವಾಗಿ ಸೋಲಿಸಿದ್ದಾರೆ. ಸಿದ್ದರಾಮಯ್ಯ ಮುಖ್ಯಮಂತ್ರಿ ಆಗಿದ್ದುಕೊಂಡು 36 ಸಾವಿರ ಮತಗಳ ಅಂತರದಿಂದ ಸೋತಿದ್ದಾರೆ.ಬಾದಾಮಿಯಲ್ಲೂ ಅಲ್ಪ ಮತಗಳಿಂದ ಗೆದ್ದರು. ಇಲ್ಲದಿದ್ದರೆ ಸಿದ್ದರಾಮಯ್ಯನ ಹುಂಡಿಗೆ ಹೋಗಬೇಕಾಗಿತ್ತು. ವಾಸ್ತವ ಹೀಗಿದ್ದರೂ ತಮ್ಮನ್ನು ಹೀನಾಯವಾಗಿ ಸೋಲಿಸಿದ ಜಿ ಟಿ ದೇವೇಗೌಡ ಜೊತೆ ಸಿದ್ದರಾಮಯ್ಯ ಕೈಜೋಡಿಸಿರುವುದು ನಗೆಪಾಟಲಿಗೀಡಾಗಿದೆ, ಹಾಸ್ಯಾಸ್ಪದ ಆಗಿದೆ ಎಂದು ವ್ಯಂಗ್ಯವಾಡಿದರು.
ಹಿಂದೆ ಆರ್ ಎಸ್ ಎಸ್ ನ್ನು ವ್ಯಾಪಕವಾಗಿ ಟೀಕಿಸುತ್ತಿದ್ದ ಜೆಡಿಎಸ್ ಇದೀಗ ಬಿಜೆಪಿ ಜೊತೆ ಹೊಂದಾಣಿಕೆಗೆ ಮುಂದಾಗಿದೆ. ಆರ್ ಎಸ್ ಎಸ್ ರಾಜಕೀಯ ಪಕ್ಷವಲ್ಲ, ಅದೊಂದು ಸಾಂಸ್ಕೃತಿಕ ಸಂಘಟನೆ ಆಗಿದೆ. ಆರ್ ಎಸ್ ಎಸ್ ಬಗ್ಗೆ ಯಾಕೆ ಟೀಕೆ ಮಾಡ್ತಾರೋ ಗೊತ್ತಿಲ್ಲ. ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿಗೆ ಜೆಡಿಎಸ್ ಬೆಂಬಲದ ಅಗತ್ಯವಿಲ್ಲ. ಕೇವಲ ನಾಲ್ಕೈದು ಕ್ಷೇತ್ರಗಳಲ್ಲಿ ಜೆಡಿಎಸ್ ಬೆಂಬಲ ನೀಡಿದರೆ ಬಿಜೆಪಿಗೆ ಅನುಕೂಲ ಆಗಲಿದೆಯಷ್ಟೇ. ಹೈಕಮಾಂಡ್ ಮಟ್ಟದಲ್ಲಿ ಬೆಂಬಲ ಪಡೆಯುವ ವಿಚಾರ ನಿರ್ಧಾರವಾಗಲಿದೆ ಎಂದರು.
ಮೈಸೂರು-ಚಾಮರಾಜನಗರ ವಿಧಾನ ಪರಿಷತ್ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ರಘು ಕೌಟಿಲ್ಯರಿಗೆ ಮೊದಲ ಪ್ರಾಶಸ್ತ್ಯದ ಮತಗಳನ್ನು ನೀಡಿ ಗೆಲ್ಲಿಸಿ ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Politics: ಕುಸುಮಾರನ್ನು ಎಂಎಲ್‌ಎ ಮಾಡಲು ಇಷ್ಟೆಲ್ಲ ಪ್ರಯತ್ನ: ಶಾಸಕ ಮುನಿರತ್ನ ಆರೋಪ
FIR Register: ಜಡ್ಜ್ ಹೆಸರಲ್ಲಿ ಲಂಚಕ್ಕೆ ಬೇಡಿಕೆಯ ಆರೋಪ: ವಕೀಲೆ ವಿರುದ್ಧ ದೂರು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು
MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ
Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ
Negotiation: ಸಿ.ಟಿ.ರವಿ – ಸಚಿವೆ ಹೆಬ್ಬಾಳ್ಕರ್ ಸಂಧಾನಕ್ಕೆ ಸಭಾಪತಿ ಹೊರಟ್ಟಿ ಪ್ರಯತ್ನ?
Congress Session: ಬೆಳಗಾವಿಯಲ್ಲಿಂದು, ನಾಳೆ ಗಾಂಧಿ ಮಹಾಧಿವೇಶನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.