![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
![Kanadka-Dooja](https://www.udayavani.com/wp-content/uploads/2025/02/Kanadka-Dooja-415x249.jpg)
Team Udayavani, Jul 14, 2019, 3:00 AM IST
ಬೆಂಗಳೂರು: ಸಮ್ಮಿಶ್ರ ಸರ್ಕಾರದ ಉಳಿವಿಗಾಗಿ ದೇವರ ಮೊರೆ ಹೋಗಿರುವ ಸಚಿವ ಎಚ್.ಡಿ.ರೇವಣ್ಣ, ಅದಕ್ಕಾಗಿ ಮೃತ್ಯುಂಜಯ ಹೋಮ ಮಾಡಿಸಿದ್ದಾರೆ.
ಶನಿವಾರ ಜಯನಗರದ ನಾಲ್ಕನೇ ಬ್ಲಾಕ್‌ನಲ್ಲಿರುವ ಗಣಪತಿ ದೇವಾಲಯದಲ್ಲಿ ನಡೆದ ಮೃತ್ಯುಂಜಯ ಹೋಮದಲ್ಲಿ ಪಾಲ್ಗೊಂಡಿದ್ದ ರೇವಣ್ಣ, ಸರ್ಕಾರಕ್ಕೆ ಯಾವುದೇ ಕಂಟಕ ಎದುರಾಗದಿರಲಿ ಎಂದು ದೇವರಲ್ಲಿ ಪ್ರಾರ್ಥಿಸಿದರು. ಗಣಪತಿ ದೇವಾಲಯದಲ್ಲಿ ಎಂಟು ಆರ್ಚಕರು ಮೃತ್ಯುಂಜಯ ಹೋಮದಲ್ಲಿ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ರೇವಣ್ಣ ಹಾಗೂ ಅವರ ಕುಟುಂಬದ ಇತರ ಸದಸ್ಯರು ಭಾಗಿಯಾಗಿದ್ದರು. ಅಲ್ಲದೆ, ರೇವಣ್ಣ ಅವರು ಭಾನುವಾರ ಶೃಂಗೇರಿ ಸೇರಿ ಮಲೆನಾಡು, ಕರಾವಳಿ ಭಾಗದ ಹಲವು ದೇವಾಲಯಗಳಿಗೆ ಭೇಟಿ ನೀಡಿ, ಪೂಜೆ ಸಲ್ಲಿಸುವ ಸಾಧ್ಯತೆಯಿದೆ.
ಶುಕ್ರವಾರ ವಿಧಾನಮಂಡಲ ಅಧಿವೇಶನದಲ್ಲಿ ಪಾಲ್ಗೊಳ್ಳಲು ಬರಿಗಾಲಿನಲ್ಲೇ ವಿಧಾನಸೌಧಕ್ಕೆ ಆಗಮಿಸಿ, ಸದನದ ಕಲಾಪಗಳಲ್ಲಿ ಪಾಲ್ಗೊಂಡಿದ್ದರು. ಅದಕ್ಕೂ ಮೊದಲು, ಆಷಾಢ ಶುಕ್ರವಾರ ಪ್ರಯುಕ್ತ ಮೈಸೂರಿನ ಚಾಮುಂಡೇಶ್ವರಿ ದೇಗುಲದಲ್ಲಿ ಪೂಜೆ ಸಲ್ಲಿಸಿ, ಪ್ರಸಾದ ತಂದು ಮುಖ್ಯಮಂತ್ರಿ ಕುಮಾರಸ್ವಾಮಿ ಹಾಗೂ ಸಂಪುಟ ಸದಸ್ಯರಿಗೆ ನೀಡಿದ್ದರು.
Surathkal: ಆರು ಬಾರಿಯ ಚಾಂಪಿಯನ್, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ
Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್
Sulya: ಪೈಪ್‌ಲೈನ್ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್ ಜಾರಕಿಹೊಳಿ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
You seem to have an Ad Blocker on.
To continue reading, please turn it off or whitelist Udayavani.