![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
![Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?](https://www.udayavani.com/wp-content/uploads/2025/02/6-20-415x249.jpg)
Team Udayavani, Oct 28, 2024, 9:01 PM IST
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಹಲವು ಸ್ಥಳಗಳಲ್ಲಿ ದಾಳಿ ನಡೆಸುತ್ತಿರುವ ವೇಳೆಯಲ್ಲೇ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ತಮ್ಮ ದೂರಿಗೆ ಪೂರಕವಾಗಿ ತನಿಖಾ ಸಂಸ್ಥೆ ಇಡಿಗೆ ‘ವಿಡಿಯೋ ಪುರಾವೆ’ ಸೋಮವಾರ(ಅ28) ಹಸ್ತಾಂತರಿಸಿದ್ದಾರೆ.
ಆಪಾದಿತ ಹಗರಣದ ದೂರುದಾರರಲ್ಲಿ ಒಬ್ಬರಾಗಿರುವ ಸ್ನೇಹಮಯಿ ಕೃಷ್ಣ ಅವರು ಇತ್ತೀಚೆಗೆ ಇಡಿ ವಿಚಾರಣೆಗೆ ಹಾಜರಾಗಿ ದಾಖಲೆಗಳನ್ನು ಸಲ್ಲಿಸಿದ್ದರು.ಇಡಿ ಹೆಚ್ಚುವರಿ ನಿರ್ದೇಶಕರಿಗೆ ಕೃಷ್ಣ ಅವರು ವಿಡಿಯೋ ನೀಡಿದ್ದು ವಾಹನದ ಹಿಂದಿನ ಸೀಟಿನಲ್ಲಿ ಹಣದ ಬಂಡಲ್‌ಗಳನ್ನು ಎಣಿಸುವುದು ಸ್ಪಷ್ಟವಾಗಿ ಗೋಚರಿಸುತ್ತದೆ, ಆದರೆ ಮುಂಭಾಗದ ಸೀಟಿನಲ್ಲಿರುವ ವ್ಯಕ್ತಿಯೊಂದಿಗೆ ಸಂಭಾಷಣೆ ನಡೆಯುತ್ತಿದೆ. ಸಂಭಾಷಣೆಯಲ್ಲಿ 25 ಲಕ್ಷ ರೂಪಾಯಿಗಳ ಮೊತ್ತವನ್ನು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ ಎಂದು ಆರೋಪಿಸಿದ್ದಾರೆ.
ವಿಡಿಯೋದಲ್ಲಿ ನಗದು ವ್ಯವಹಾರ ನಡೆದಿದೆ ಎನ್ನಲಾದ ವ್ಯಕ್ತಿಗಳ ಹೆಸರುಗಳನ್ನು ಹಂಚಿಕೊಂಡಿರುವ ಕೃಷ್ಣ, ಇಡಿ ಅಧಿಕಾರಿಯನ್ನು ಕರೆಸಿ, ವಿಡಿಯೋ ಪರಿಶೀಲಿಸಿ, ವಿಚಾರಣೆ ನಡೆಸಿ, ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ (ಮುಡಾ) ಜತೆಗಿನ 50:50 ಅನುಪಾತದಲ್ಲಿನ ವಹಿವಾಟಿನ ಕುರಿತು ವಿವರ ಸಂಗ್ರಹಿಸುವಂತೆ ಮನವಿ ಮಾಡಿದ್ದರು.
Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ
Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ
Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ
Ramanagara: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಭೀಕರ ಅಪಘಾತ; ತಪ್ಪಿದ ಭಾರೀ ದುರಂತ
Bengaluru: 9 ವರ್ಷದಿಂದ ತಪ್ಪಿಸಿಕೊಂಡಿದ್ದ ಆರೋಪಿ ಪತ್ತೆಗೆ ಸುಳಿವು ನೀಡಿದ ಇನ್ಸ್ಟಾಗ್ರಾಮ್
You seem to have an Ad Blocker on.
To continue reading, please turn it off or whitelist Udayavani.