MUDA CASE; ರಾಜ್ಯಪಾಲರ ಮುಡಾ ನಡೆಗೆ ಖಂಡನೆ ಇಂದು ಕಾಂಗ್ರೆಸ್‌ನಿಂದ ಗಾಂಧಿ ಯಾತ್ರೆ
ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧ ಅಭಿಯೋಜನೆಗೆ ಅನುಮತಿ ವಿರೋಧಿಸಿ ಶಾಂತಿಯುತ ಪ್ರತಿಭಟನೆ
Team Udayavani, Aug 19, 2024, 6:37 AM IST
ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಭಿಯೋಜನೆಗೆ ಅನುಮತಿ ನೀಡಿದ ರಾಜ್ಯಪಾಲರ ನಡೆಯನ್ನು ಖಂಡಿಸಿ ಈಗ ಕಾಂಗ್ರೆಸ್ ಗಾಂಧಿ ಮಾರ್ಗದ ಹೋರಾಟಕ್ಕೆ ಸಜ್ಜಾಗಿದೆ.
ಸಂವಿಧಾನಕ್ಕೆ ವಿರುದ್ಧವಾಗಿ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಇದು ಜನಾದೇಶ ಇರುವ ಸರಕಾರವನ್ನು ಅಸ್ಥಿರಗೊಳಿಸುವ ಮತ್ತೂಂದು ಪ್ರಯತ್ನವಾಗಿದ್ದು, ಇದರ ವಿರುದ್ಧ ಈಗಾಗಲೇ ಒಂದೆಡೆ ಕಾನೂನು ಹೋರಾಟಕ್ಕೆ ಸಚಿವ ಸಂಪುಟ ಸಹೋದ್ಯೋಗಿಗಳು ಸಿದ್ಧತೆ ನಡೆಸಿದ್ದಾರೆ. ಮತ್ತೊಂದೆಡೆ ಇದೇ ವಿಚಾರದಲ್ಲಿ ಗಾಂಧಿ ಮಾರ್ಗದಲ್ಲಿ ಸಾಮೂಹಿಕ ಹೋರಾಟ ರೂಪಿಸಿ, ಸಿಎಂ ಬೆನ್ನಿಗೆ ನಿಲ್ಲಲು ಪಕ್ಷ ನಿರ್ಧರಿಸಿದೆ. ಇದರ ಭಾಗವಾಗಿ ಆ. 19ರಂದು ಕಾಂಗ್ರೆಸ್ ರಾಜ್ಯವ್ಯಾಪಿ ಪ್ರತಿಭಟನೆ ಹಮ್ಮಿಕೊಂಡಿದೆ.
ಮೊದಲ ಹಂತದಲ್ಲಿ ಜಿಲ್ಲಾ ಕೇಂದ್ರಗಳಲ್ಲಿ ಶಾಂತಿಯುತ ಪ್ರತಿಭಟನೆ ನಡೆಯಲಿದೆ. ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿ, ಆ ಮೂಲಕ ಅದನ್ನು ರಾಷ್ಟ್ರಪತಿಗಳಿಗೆ ತಲುಪಿಸಲು ಉದ್ದೇಶಿಸಲಾಗಿದೆ. ಅನಂತರ ತಾಲೂಕು ಮಟ್ಟದಲ್ಲಿ ಈ ಹೋರಾಟ ವನ್ನು ಮುನ್ನಡೆಸಲು ನಿರ್ಧರಿಸಲಾಗಿದೆ. ಹೀಗೆ ಹಂತ ಹಂತವಾಗಿ ಹೋರಾಟ ತೀವ್ರಗೊಳಿಸುವ ಚಿಂತನೆ ನಡೆದಿದೆ.ರಾಜಕೀಯ ದುರುದ್ದೇಶದಿಂದ ಮುಖ್ಯಮಂತ್ರಿ ವಿರುದ್ಧ ಅಭಿಯೋಜನೆಗೆ ರಾಜ್ಯಪಾಲರು ಅನುಮತಿ ನೀಡಿದ್ದಾರೆ. ಇದೊಂದು ಸಂವಿಧಾನ ವಿರೋಧಿ ಕ್ರಮ. ಈ ನಡೆ ವಿರುದ್ಧ ಸೋಮವಾರ ರಾಜ್ಯಾದ್ಯಂತ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.
ಶಾಂತಿಯುತವಾಗಿ ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಯಲಿದೆ. ಇದಕ್ಕೆ ಸ್ಪಂದನೆ ಸಿಗದಿದ್ದರೆ ಮುಂಬರುವ ದಿನಗಳಲ್ಲಿ ಹೋರಾಟ ತೀವ್ರಗೊಳಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿಳಿಸಿದರು.
ಸದಾಶಿವನಗರದ ನಿವಾಸದ ಬಳಿ ರವಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯ ಕರ್ತರು ಪ್ರತಿಭಟನೆ ನಡೆಸಲಿದ್ದಾರೆ.
ಅದನ್ನು ಆಯಾ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ದಾಖಲಿಸಲಿದ್ದಾರೆ ಎಂದರು.
ಶಾಂತಿಯುತ ಪ್ರತಿಭಟನೆಪ್ರಕರಣ ಇಲ್ಲದಿದ್ದರೂ ಉದ್ದೇಶಪೂರ್ವಕವಾಗಿ ಎತ್ತಿಕಟ್ಟುವ ಕೆಲಸ ಆಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿಯುತವಾಗಿ ಪ್ರತಿಭಟನೆ ನಡೆಸಲು ಮುಖಂಡರಿಗೆ ಸೂಚಿಸಲಾಗಿದೆ. ಪ್ರತಿಭಟನೆ ಸಂದರ್ಭದಲ್ಲಿ ಕೆಲವು ಕಿಡಿಗೇಡಿಗಳು ಒಳನುಸುಳಿ ಗಲಭೆ ಎಬ್ಬಿಸುವ ಮೂಲಕ ಕಾನೂನು ಸುವ್ಯವಸ್ಥೆಗೆ ಭಂಗ ತರುವ ಕೆಲಸ ಮಾಡುವ ಸಾಧ್ಯತೆಯೂ ಇದೆ. ಇದರ ಬಗ್ಗೆಯೂ ಎಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ. ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ ನಡೆಸಲಾಗುವುದು ಎಂದು ಡಿಕೆಶಿ ಪುನರುಚ್ಚರಿಸಿದರು.
ಖರ್ಗೆಗೆ ವಿವರಣೆ
ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್ ಖರ್ಗೆ ಅವರ ಭೇಟಿ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಉತ್ತರಿ ಸಿದ ಡಿಕೆಶಿ, ಪ್ರಸ್ತುತ ರಾಜ್ಯದಲ್ಲಿ ಆಗುತ್ತಿರುವ ಬೆಳವಣಿಗೆಗಳು ಹಾಗೂ ಸಂದರ್ಭದ ಬಗ್ಗೆ ಅವರಿಗೆ ವಿವರಣೆ ನೀಡಿದ್ದೇವೆ ಎಂದು ಸ್ಪಷ್ಟಪಡಿಸಿರು. ರಾಜ್ಯಪಾಲರ ನಡೆ ಖಂಡಿಸಿ ಪಕ್ಷದಿಂದ ರಾಷ್ಟ್ರ ವ್ಯಾಪಿ ಪ್ರತಿಭಟನೆ ನಡೆಸುವ ಬಗ್ಗೆ ಎಐಸಿಸಿ ನಿರ್ಧಾರ ಮಾಡಲಿದೆ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.
ಮುಡಾ ಪ್ರಕರಣದಲ್ಲಿ ಸಿಎಂ ವಿರುದ್ಧವೇ ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ನೀಡಿರುವು ದರಿಂದ ಸರಕಾರ ಸ್ವಲ್ಪಮಟ್ಟಿಗೆ “ಶೇಕ್’ ಆಗಿರುವುದು ನಿಜ. ಇಲ್ಲ ಎಂದು ಹೇಳಿದರೆ ನಾನು ಸುಳ್ಳು ಹೇಳಿದಂತಾಗುತ್ತದೆ. ಇದನ್ನು ನಾವು ಸರಿಪಡಿಸಿಕೊಂಡು ಆಡಳಿತವನ್ನು ಮುಂದುವರಿಸುತ್ತೇವೆ. ನಾವ್ಯಾರೂ ಬಿಜೆಪಿ ಹುನ್ನಾರಕ್ಕೆ ಬಲಿಯಾಗು ವುದು ಬೇಡ, ಆಡಳಿತ ಮಾಡಿಕೊಂಡು ಹೋಗೋಣ ಎಂಬುದಾಗಿ ಸಚಿವ ಸಂಪುಟ ಸಭೆಯಲ್ಲೂ ತೀರ್ಮಾನಿಸಿದ್ದೇವೆ. ಕಾನೂನು ಸಮರ ಮುಂದುವರಿಸಿಕೊಂಡೇ ಆಡಳಿತ ನಡೆಸುತ್ತೇವೆ.
-ಡಾ| ಜಿ. ಪರಮೇಶ್ವರ್, ಗೃಹ ಸಚಿವ
ಪ್ರಕರಣವೇ ಇಲ್ಲದಿದ್ದರೂ ಉದ್ದೇಶ ಪೂರ್ವಕವಾಗಿ ಎತ್ತಿ ಕಟ್ಟುವ ಕೆಲಸ ಆಗುತ್ತಿದೆ. ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ನಡೆದಿದೆ. ಇದರ ವಿರುದ್ಧ ಶಾಂತಿ ಯುತವಾಗಿ ಪ್ರತಿಭಟನೆ ನಡೆಸಲಿದ್ದೇವೆ. ನಮ್ಮದು ಗಾಂಧಿ ಮಾರ್ಗದ ಶಾಂತಿಯುತ ಪ್ರತಿಭಟನೆ. ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಲಿದ್ದಾರೆ. ಬಳಿಕ ಮನವಿ ಯನ್ನು ಆಯಾ ಜಿಲ್ಲಾಧಿಕಾರಿಗಳ ಮೂಲಕ ರಾಷ್ಟ್ರಪತಿಗಳಿಗೆ ಸಲ್ಲಿಸಲಾಗುತ್ತದೆ.
-ಡಿ.ಕೆ. ಶಿವಕುಮಾರ್, ಡಿಸಿಎಂ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.