Muda Case; ಸಿದ್ದರಾಮಯ್ಯಗೆ ಮತ್ತೆರಡು ದಿನ ರಿಲೀಫ್; ವಿಚಾರಣೆ ಮುಂದೂಡಿಕೆ
Team Udayavani, Aug 29, 2024, 4:16 PM IST
ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಸೃಷ್ಟಿಸಿರುವ ಮೈಸೂರಿನ ಮುಡಾ ನಿವೇಶನ ಹಂಚಿಕೆ ವಿವಾದ ಸಂಬಂಧ ರಾಜ್ಯಪಾಲರು ನೀಡಿರುವ ವಿಚಾರಣೆಗೆ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ (Siddaramaiah) ಸಲ್ಲಿಸಿರುವ ಅರ್ಜಿ ವಿಚಾರಣೆ ಗುರುವಾರ ನಡೆದಿದ್ದು, ಸಿಎಂ ಸಿದ್ದರಾಮಯ್ಯ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಂಘ್ವಿ ವಾದ ಮಂಡಿದಿದ್ದಾರೆ.
ಬಳಿಕ ಮುಂದಿನ ವಿಚಾರಣೆಯನ್ನು ಶನಿವಾರ (ಆ.31) ಬೆಳಗ್ಗೆ 10.30ಕ್ಕೆ ಮುಂದೂಡಲಾಗಿದೆ. ಮಧ್ಯಂತರ ತಡೆ ಆದೇಶವೂ ಮುಂದುವರಿಕೆಯಾಗಿದೆ. ಇದರಿಂದ ಸಿಎಂ ಸಿದ್ದರಾಮಯ್ಯ ಅವರಿಗೆ ಮತ್ತೆರಡು ದಿನ ರಿಲೀಫ್ ಸಿಕ್ಕಿದೆ.
ಟಿ.ಜೆ. ಅಬ್ರಾಹಂ, ಸ್ನೇಹಮಯಿ ಕೃಷ್ಣ, ಪ್ರದೀಪ್ ಅವರು ನಿವೇಶನ ಹಂಚಿಕೆಯಲ್ಲಿ ಅಕ್ರಮ ನಡೆದಿದೆ ಎಂದು ಖಾಸಗಿ ದೂರು ಸಲ್ಲಿಸಿದ್ದರು. ಅದರ ಅನ್ವಯ ಸಿದ್ದರಾಮಯ್ಯ ವಿರುದ್ಧ ಸಮರ್ಪಕ ತನಿಖೆ ಅಗತ್ಯವಿದೆ ಎಂದು ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅಭಿಯೋಜನೆಗೆ ಅನುಮತಿ ನೀಡಿದ್ದಾರೆ. ಆದರೆ ಸಂಪುಟದ ಸಲಹೆಯನ್ನು ಧಿಕ್ಕರಿಸಿ ಸೆಕ್ಷನ್ 17 (ಎ) ಹಾಗೂ ಭಾರತೀಯ ನ್ಯಾಯ ಸಂಹಿತೆ ಸೆಕ್ಷನ್ 128 ಅನ್ವಯ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವುದು ಅಸಾಂವಿಧಾನಿಕ ಹಾಗೂ ಕಾನೂನುಬಾಹಿರ ಎಂದು ಸಿದ್ದರಾಮಯ್ಯ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.