MUDA CASE: ಮುಖ್ಯಮಂತ್ರಿ ಭಾವಮೈದನ ವಿಚಾರಣೆ
ಸಿಎಂ ಸಿದ್ದರಾಮಯ್ಯ, ಪತ್ನಿಗೂ ಶೀಘ್ರ ನೋಟಿಸ್ ಸಾಧ್ಯತೆ
Team Udayavani, Nov 19, 2024, 12:18 AM IST
ಬೆಂಗಳೂರು: ಮೈಸೂರು ನಗರಾಭಿವೃದ್ದಿ ಪ್ರಾಧಿಕಾರ (ಮುಡಾ) ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಭಾವಮೈದ ಮಲ್ಲಿಕಾರ್ಜುನಸ್ವಾಮಿ ಅವರು ಸೋಮವಾರ ಜಾರಿ ನಿರ್ದೇಶನಾಲಯ (ಇ.ಡಿ.)ದ ವಿಚಾರಣೆಗೆ ಹಾಜರಾಗಿದ್ದಾರೆ.
ಮುಡಾ ಹಗರಣದ ಸಂಬಂಧ ಲೋಕಾಯುಕ್ತ ಪೊಲೀಸರು ದಾಖಲಿಸಿರುವ ಪ್ರಕರಣದಲ್ಲಿ 3ನೇ ಆರೋಪಿಯಾಗಿರುವ ಮಲ್ಲಿಕಾರ್ಜುನಸ್ವಾಮಿಗೆ ವಿಚಾರಣೆಗೆ ಹಾಜರಾಗುವಂತೆ ಇ.ಡಿ. ಅಧಿಕಾರಿಗಳು ನೋಟಿಸ್ ನೀಡಿದ್ದರು. ಈ ಸಂಬಂಧ ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಗೆ ವಿಚಾರಣೆಗೆ ಹಾಜರಾಗಿದ್ದರು.
ಸುಮಾರು 4 ತಾಸಿಗೂ ಅಧಿಕ ಕಾಲ ವಿಚಾರಣೆ ಎದುರಿಸಿ ಹೊರಬಂದ ಮಲ್ಲಿಕಾರ್ಜುನಸ್ವಾಮಿ ಮಾಧ್ಯಮಗಳಿಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ. ಸಿಎಂ ಸಿದ್ದರಾಮಯ್ಯ ಹಾಗೂ ಅವರ ಪತ್ನಿಗೂ ಶೀಘ್ರದಲ್ಲೇ ಇ.ಡಿ. ಬಿಸಿ ತಟ್ಟುವ ಸಾಧ್ಯತೆಗಳಿವೆ ಎನ್ನಲಾಗಿದೆ.
ಮೂಲ ಜಮೀನಿನ ಕುರಿತು ಪ್ರಶ್ನೆ?
ಬೆಂಗಳೂರಿನ ಶಾಂತಿನಗರದಲ್ಲಿರುವ ಇ.ಡಿ. ಕಚೇರಿಯಲ್ಲಿ ವಿಚಾರಣೆ ನಡೆದಿದ್ದು, ಕೆಸರೆ ಗ್ರಾಮದಲ್ಲಿರುವ 3.16 ಎಕರೆ ಜಮೀನಿನ ಕುರಿತು ಮಲ್ಲಿಕಾರ್ಜುನ ಸ್ವಾಮಿ ಅವರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.
ಇ.ಡಿ. ಅಧಿಕಾರಿಗಳು ಶೀಘ್ರದಲ್ಲೇ ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಅವರಿಗೆ ಸಮನ್ಸ್ ನೀಡಿ ವಿಚಾರಣೆ ನಡೆಸುವ ಸಾಧ್ಯತೆಗಳಿವೆ ಎಂದು ತಿಳಿದು ಬಂದಿದೆ.
ಇದೇವೇಳೆ ಮುಡಾ ಆಯುಕ್ತರಾಗಿದ್ದ ಡಿ.ಬಿ. ನಟೇಶ್ ಅವರನ್ನು ನಿವೇಶನ ಹಂಚಿಕೆ ಹಗರಣಕ್ಕೆ ಸಂಬಂಧಿಸಿದಂತೆ ಲೋಕಾಯುಕ್ತ ಅಧಿಕಾರಿಗಳು ಮಂಗಳವಾರ ವಿಚಾರಣೆ ನಡೆಸಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
Davanagere; ಉಸ್ತುವಾರಿ ಸಚಿವರ ಬದಲಾವಣೆಗೆ ಸಿಎಂಗೆ ಪತ್ರ ಬರೆದ ಚನ್ನಗಿರಿ ಕಾಂಗ್ರೆಸ್ ಶಾಸಕ
BSY: ಬಿಎಸ್ವೈ ತಪ್ಪೊಪ್ಪಿಕೊಂಡಿರುವುದಾಗಿ ಸಂತ್ರಸ್ತೆ ಹೇಳಿಕೆ ದಾಖಲು: ಎಸ್ಪಿಪಿ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Over Remarks: ʼಸಿದ್ದರಾಮೋತ್ಸವʼ ಮಾಡಿಸುವ ನೀವು ‘ಅಂಬೇಡ್ಕರ್ ಉತ್ಸವ’ ಮಾಡಲ್ಲ: ಬಿಜೆಪಿ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.