MUDA; Chairman ಕೆ.ಮರಿಗೌಡ ರಾಜೀನಾಮೆ: ಆಡಳಿತಾಧಿಕಾರಿ ನೇಮಕ ಸಾಧ್ಯತೆ
Team Udayavani, Oct 16, 2024, 1:02 PM IST
ಮೈಸೂರು: ರಾಜಕಾರಣದಲ್ಲಿ ಭಾರಿ ಸಂಚಲನ ಮೂಡಿಸಿರುವ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(MUDA)ದಲ್ಲಿನ ನಿವೇಶನ ಹಂಚಿಕೆ ಹಗರಣ ಸಂಬಂಧ ಮುಡಾ ಅಧ್ಯಕ್ಷ ಕೆ.ಮರಿಗೌಡ ಅವರ ತಲೆದಂಡವಾಗಿದ್ದು, ಹುದ್ದೆಗೆ ಬುಧವಾರ(ಅ16) ರಾಜೀನಾಮೆ ಸಲ್ಲಿಸಿದ್ದಾರೆ.
ಮುಡಾ ಅಧ್ಯಕ್ಷ ಮರಿಗೌಡ ವಿರುದ್ಧ ಸ್ವಪಕ್ಷದವರಿಂದಲೇ ಆಕ್ರೋಶ ವ್ಯಕ್ತವಾಗಿತ್ತು. ಇದರಿಂದ ಎಚ್ಚೆತ್ತ ರಾಜ್ಯ ಸರ್ಕಾರ ಮರಿಗೌಡ ಅವರಿಗೆ ರಾಜೀನಾಮೆ ನೀಡುವಂತೆ ಸೂಚನೆ ನೀಡಿ, ಮುಡಾಗೆ ಆಡಳಿತಾಧಿಕಾರಿ ನೇಮಕ ಮಾಡಲು ನಿರ್ಧಾರ ಮಾಡಿತ್ತು. ಆದರೆ, ಮರಿಗೌಡ ಅವರು, ಸಿದ್ದರಾಮಯ್ಯರ ಬಳಿ ದಸರಾ ಮಗಿಯುವವರೆಗೂ ನಾನು ರಾಜೀನಾಮೆ ನೀಡಲ್ಲ. ಆಡಳಿತಾಧಿಕಾರಿ ನಿರ್ಧಾರ ಬೇಡ ಎಂದು ಮನವಿ ಮಾಡಿಕೊಂಡಿದ್ದರು ಎಂದು ಹೇಳಲಾಗಿತ್ತು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ನಗರದ ಆಯಕಟ್ಟಿನ ಸ್ಥಳದಲ್ಲಿ 14 ನಿವೇಶನ ಮಂಜೂರಾದ ಹಿನ್ನೆಲೆಯಲ್ಲಿ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಸಿಎಂ ಸಿದ್ದರಾಮಯ್ಯ, ಅವರ ಪತ್ನಿ ಪಾರ್ವತಿ, ಭಾಮೈದ ಮಲ್ಲಿಕಾರ್ಜುನ ಸ್ವಾಮಿ ಹಾಗೂ ಮೂಲ ಭೂಮಾಲಿಕನ ವಿರುದ್ಧ ಎಫ್ಐಆರ್ ದಾಖಲಾಗಿರುವುದಲ್ಲದೇ ತನಿಖೆಯೂ ನಡೆಯುತ್ತಿದೆ.
ಮುಡಾಗೆ ಆಡಳಿತಾಧಿಕಾರಿ ನೇಮಕ?
ಮುಡಾ ಹಗರಣ ಸಂಬಂಧ ತೀವ್ರ ಮುಜುಗರ ಅನುಭವಿಸಿರುವ ರಾಜ್ಯ ಸರ್ಕಾರ ಆಡಳಿತಾಧಿಕಾರಿ ನೇಮಕಕ್ಕೆ ಮುಂದಾಗಿದೆ. ಈ ಮೂಲಕ ಮೈಸೂರು ನಗರಾಭಿವೃದ್ಧಿ ಆಡಳಿತದಲ್ಲಿ ಪಾರದರ್ಶಕತೆ ತರಲು ಸರ್ಕಾರ ಮುಂದಾಗಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhadravathi:ಬಾಯ್ಲರ್ ಸ್ಫೋ*ಟದಿಂದ ರೈಸ್‌ಮಿಲ್ ಕುಸಿತ:7 ಮಂದಿಗೆ ಗಾಯ
Sringeri; ಅಸ್ಸಾಂ ಕಾರ್ಮಿಕನಿಂದ ಅಪ್ರಾಪ್ತ ಬಾಲಕಿ ಮೇಲೆ ಲೈಂಗಿ*ಕ ದೌರ್ಜನ್ಯ
Laxmi Hebbalkar; ಅವಾಚ್ಯ ಪದ ಬಳಕೆ ಕೇಸ್: ಸಿ.ಟಿ.ರವಿ ಬಂಧನ
Belagavi Session ಉದ್ವಿಗ್ನ:ಹೆಬ್ಬಾಳ್ಕರ್ ವಿರುದ್ದ ಅವಾಚ್ಯ ಪದ ಬಳಸಿದರೆ ಸಿ.ಟಿ.ರವಿ?
Bidar: ಕಾರಂಜಾ ಸಂತ್ರಸ್ತರ ಸಮಸ್ಯೆ ಅಧ್ಯಯನಕ್ಕೆ ತಾಂತ್ರಿಕ ಸಮಿತಿ ರಚನೆ: ಸಿಎಂ ಸಿದ್ದರಾಮಯ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.