Muda scam: 8 ಕಡೆ ಇ.ಡಿ. ಬೇಟೆ : 2 ಮಾಜಿ ಆಯುಕ್ತರು, ಸಿಎಂ ಆಪ್ತರ ಮನೆ ಗುರಿ
Team Udayavani, Oct 29, 2024, 6:40 AM IST
ಬೆಂಗಳೂರು: ಮುಡಾ ನಿವೇಶನ ಹಂಚಿಕೆ ಅಕ್ರಮ ಹಗರಣದಲ್ಲಿ ತನಿಖೆ ಚುರುಕುಗೊಳಿಸಿರುವ ಜಾರಿ ನಿರ್ದೇಶ ನಾಲಯ (ಇ.ಡಿ.)ವು ಸೋಮವಾರ ಮುಡಾದ ಇಬ್ಬರು ಮಾಜಿ ಆಯುಕ್ತರ ಸಹಿತ ನಾಲ್ವರ ಮನೆ ಮತ್ತು ಕಚೇರಿಗಳ ಮೇಲೆ ದಾಳಿ ನಡೆಸಿ ದಾಖಲೆ-ಪತ್ರಗಳನ್ನು ವಶಕ್ಕೆ ಪಡೆದಿದೆ. ಬೆಂಗಳೂರು, ಮೈಸೂರಿ ನಲ್ಲಿ ತಲಾ 4 ಕಡೆ ದಾಳಿ ನಡೆಸಲಾಗಿದೆ.
ಮತ್ತೂಂದೆಡೆ ಪ್ರಕರಣ ಬಯಲಿಗೆಳೆದ ಆರ್‌ಟಿಐ ಕಾರ್ಯಕರ್ತ ಗಂಗರಾಜು ಹಾಗೂ ಜಮೀನಿನ ಮೂಲ ಮಾಲಕ ದೇವರಾಜು ಇ.ಡಿ. ಅಧಿಕಾರಿಗಳ ವಿಚಾ ರಣೆಗೆ ಹಾಜರಾಗಿದ್ದಾರೆ.
ಮುಡಾದ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್ ಹಾಗೂ ಸಿಎಂ ಸಿದ್ದರಾಮಯ್ಯ, ಪುತ್ರ ಯತೀಂದ್ರ ಹಾಗೂ ಸಚಿವ ಭೈರತಿ ಸುರೇಶ್ ಅವರ ಪರಮಾಪ್ತನಾಗಿ ರು ವ ಬಿಲ್ಡರ್ ಮಂಜುನಾಥ್ ಹಾಗೂ ಮೈಸೂರಿನಲ್ಲಿ ಸಿಎಂ ಆಪ್ತ, ಜಿ.ಪಂ. ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಅವರ ಮನೆಗಳ ಮೇಲೆ ದಾಳಿ ನಡೆಸಲಾಗಿದೆ.
ಯಾರ ಮೇಲೆ ದಾಳಿ?
ಮುಡಾದ ಮಾಜಿ ಆಯುಕ್ತರಾದ ನಟೇಶ್, ದಿನೇಶ್ ಕುಮಾರ್, ಸಿಎಂ ಆಪ್ತರಾದ ಬಿಲ್ಡರ್ ಮಂಜುನಾಥ್, ಜಿ.ಪಂ. ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಅವರ ಮನೆ, ಕಚೇರಿ.
ದಿನೇಶ್ ಪರಾರಿ
ಬೆಂಗಳೂರಲ್ಲಿ ಮುಡಾದ ಮಾಜಿ ಆಯುಕ್ತ ದಿನೇಶ್ ಕುಮಾರ್ ಅವರ ಫ್ಲ್ಯಾಟ್ (ದೀಪಿಕಾ ಅಪಾ ರ್ಟ್ ಮೆಂಟ್) ಮೇಲೆ ಬೆಳಗ್ಗೆ 8ರ ಸುಮಾರಿಗೆ ಐವರು ಇ.ಡಿ. ಅಧಿಕಾರಿಗಳ ತಂಡವು ದಾಳಿ ನಡೆ ಸಿದ್ದು, ಈ ವಿಷಯ ತಿಳಿದು ದಿನೇಶ್ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ಪರಾರಿಯಾಗಿದ್ದಾರೆ.
ಏಕಕಾಲಕ್ಕೆ ದಾಳಿ
ಇ.ಡಿ.ಯ ಬೆಂಗಳೂರು ಘಟಕದ ಹೆಚ್ಚುವರಿ ನಿರ್ದೇಶಕ ಮುರಳಿ ಕನ್ನನ್ ನೇತೃತ್ವದ 16ಕ್ಕೂ ಹೆಚ್ಚು ಅಧಿಕಾರಿ-ಸಿಬಂದಿ ಬೆಂಗಳೂರಿನ ನಾಲ್ಕು ಕಡೆಗಳಲ್ಲಿ ದಾಳಿ ನಡೆಸಿದ್ದಾರೆ. ಮುಂಜಾನೆ 7ರಿಂದ ಸಂಜೆ 6ರ ವರೆಗೂ ಶೋಧಿಸಿದ್ದಾರೆ. ಐವರು ಇ.ಡಿ. ಅಧಿಕಾರಿಗಳು ಮಲ್ಲೆಶ್ವರಂನ 10ನೇ ಕ್ರಾಸ್‌ನಲ್ಲಿರುವ ಮುಡಾದ ಮಾಜಿ ಆಯುಕ್ತ ನಟೇಶ್ ನಿವಾಸದ ಮೇಲೆ ದಾಳಿ ಮಾಡಿ¨ªಾರೆ. ಈ ವೇಳೆ ನಟೇಶ್ ಮುಡಾ ಆಯುಕ್ತರಾಗಿದ್ದಾಗ ನಿವೇಶನ ಹಂಚಿಕೆ ಮಾಡಿ ದ ಕೆಲವು ದಾಖಲೆಗಳು ಪತ್ತೆ ಯಾಗಿವೆ ಎನ್ನಲಾಗಿದೆ. ದಾಳಿ ವೇಳೆ ನಟೇಶ್ ಮನೆಯಲ್ಲೇ ಇದ್ದು, ಇ.ಡಿ. ಅಧಿಕಾರಿಗಳ ಶೋಧಕ್ಕೆ ಸಹಕಾರ ನೀಡಿದ್ದಾರೆ.
ಬಿಲ್ಡರ್ ಮಂಜುನಾಥ್ ಮನೆ ಮೇಲೆ ದಾಳಿ
ಜೆ.ಪಿ. ನಗರ ನಿವಾಸಿ ಹಾಗೂ ಎನ್. ಕಾರ್ತಿಕ್ ಡೆವಲಪರ್ಸ್‌ನ ಮಾಲಕ, ಬಿಲ್ಡರ್ ಎನ್. ಮಂಜುನಾಥ್ ಮನೆ ಮತ್ತು ಕಚೇರಿ ಮೇಲೆ 6 ಮಂದಿ ಇಡಿ ಅಧಿಕಾರಿಗಳ ತಂಡ ದಾಳಿ ಮಾಡಿದ್ದು, ಈ ವೇಳೆ ಮುಡಾಗೆ ಸಂಬಂಧಿಸಿದ ಕೆಲವು ದಾಖಲೆಗಳು ಪತ್ತೆಯಾಗಿವೆ ಎನ್ನಲಾಗಿದೆ. ಮಂಜುನಾಥ್ ಅವರು ಮೈಸೂರಿನಲ್ಲಿ ಕಾರ್ತಿಕ್ ಬಡಾವಣೆ ಹೆಸರಿನಲ್ಲಿ ಲೇಔಟ್ ನಿರ್ಮಾಣ ಮಾಡಿದ್ದು, 50:50 ಅನುಪಾತದಲ್ಲಿ ಸೈಟ್ ಹಂಚಿಕೆ ವೇಳೆ ಅಧಿಕಾರಿಗಳಿಗೆ ಲಂಚ ನೀಡಿದ್ದರು ಎಂಬ ಆರೋಪವಿದೆ. ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತು ಸಚಿವ ಭೈರತಿ ಸುರೇಶ್‌ಗೆ ಸಾಕಷ್ಟು ಅನುಕೂಲ ಮಾಡಿಕೊಟ್ಟಿದ್ದಾರೆ ಎಂಬ ಆರೋಪ ಕೂಡ ಇದೆ. ದಾಳಿ ವೇಳೆ ಮಂಜುನಾಥ್ ಮನೆಯಲ್ಲೇ ಇದ್ದರು. ಮಂಜುನಾಥ್ ಅವರ ಹಣಕಾಸಿನವ್ಯವಹಾರದ ಕುರಿತು ಮಾಹಿತಿ ಪಡೆಯಲು ಬ್ಯಾಂಕ್‌ನಲ್ಲೂ ಪರಿಶೀಲಿಸಿದ್ದಾರೆ ಎಂದು ತಿಳಿದು ಬಂದಿದೆ.
ರಾಕೇಶ್ ಪಾಪಣ್ಣ ಮನೆ ಮೇಲೆ ದಾಳಿ
ಮೈಸೂರಿನ ಹೊರ ವಲಯದಲ್ಲಿರುವ ಹಿನಕಲ್ ನಿವಾಸಿ, ಜಿ.ಪಂ. ಮಾಜಿ ಸದಸ್ಯ ರಾಕೇಶ್ ಪಾಪಣ್ಣ ಅವರ ಮನೆ ಮೇಲೆ ದಾಳಿ ನಡೆಸಿರುವ ಇ.ಡಿ. ಅಧಿಕಾರಿಗಳು, 2 ತಾಸಿೆಗೂ ಹೆಚ್ಚು ಕಾಲ ರಾಕೇಶ್ ವಿಚಾರಣೆ ನಡೆಸಿದ್ದಾರೆ. ಈ ವೇಳೆ ಮಹತ್ವದ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Session: ಕಾಂಗ್ರೆಸಿಗರ ವೀಡಿಯೋಗೆ ಯಾವ ಬೆಲೆಯೂ ಇಲ್ಲ: ಎಂಎಲ್‌ಸಿ ರವಿಕುಮಾರ್
ಸುಮ್ನೆ ಬ್ಯಾಂಡೇಜ್ ಹಾಕಿಕೊಳ್ಳಲು ಯಾರಿಗೂ ತಲೆ ಕೆಟ್ಟಿಲ್ಲ: ಸಿ.ಟಿ.ರವಿ ಪತ್ನಿ ಪಲ್ಲವಿ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Intervention: ಗೃಹ ಇಲಾಖೆಯಲ್ಲಿ ಯಾರ ಹಸ್ತಕ್ಷೇಪವೂ ಇಲ್ಲ: ಸಚಿವ ಪರಮೇಶ್ವರ್
Encounter: ಉತ್ತರಪ್ರದೇಶದಲ್ಲಿ ಎನ್‌ಕೌಂಟರ್: 3 ಶಂಕಿತ ಖಲಿಸ್ಥಾನಿ ಉಗ್ರರ ಹತ್ಯೆ
Investment: 9.8 ಸಾವಿರ ಕೋಟಿ ರೂ. 9 ಯೋಜನೆಗೆ ಒಪ್ಪಿಗೆ: ಸಿಎಂ ಸಿದ್ದರಾಮಯ್ಯ
Growers Meet: ಕಾಫಿಗೆ ಜಗತ್ತಿನೆಲ್ಲೆಡೆ ಮಾರುಕಟ್ಟೆ ಸೃಷ್ಟಿ ಅಗತ್ಯ: ಪಿಯೂಷ್ ಗೋಯಲ್
Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.